LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬೆಂಗಳೂರು ದಕ್ಷಿಣ' ಎಂದು ಮಾಡುವ ಕಾಂಗ್ರೆಸ್ಸಿನ ಶ್ರೀರಾಮನ ವಿರೋಧ ಸ್ಪಷ್ಟ 

ಬೆಂಗಳೂರು: ರಾಮನಗರ'ವನ್ನು 'ಬೆಂಗಳೂರು ದಕ್ಷಿಣ' ಎಂದು ಮಾಡುವ ಕಾಂಗ್ರೆಸ್ಸಿನ ಶ್ರೀರಾಮನ ವಿರೋಧ ಸ್ಪಷ್ಟವೇ  ಹೊರೆತು ಬೇರಾವುದೇ ಉದ್ದೇಶ ಇಲ್ಲ ಎಂದು ಹಿಂದೂ ಜನಜಾಗೃತಿ ಸಮಿತಿ ಸಂಸ್ಥಾಪಕ ಮೋಹನ್ ಕುಮಾರ್ ಹೇಳಿಕೆ.

500 ವರ್ಷಗಳ ನಂತರ, ಅಯೋಧ್ಯೆಯಲ್ಲಿ ಭಗವಾನ್ ಶ್ರೀರಾಮನ ಭವ್ಯ ಮಂದಿರವನ್ನು ನಿರ್ಮಿಸಿದ ಬಳಿಕ ದೇಶಾದ್ಯಂತ ರಾಮನದ್ದೇ ಗುಣಗಾನವಿರುವಾಗ ಕರ್ನಾಟಕದಲ್ಲಿ ಮಾತ್ರ 'ರಾಮನಗರ' ಜಿಲ್ಲೆಯನ್ನು 'ಬೆಂಗಳೂರು ದಕ್ಷಿಣ' ಎಂದು ಮರುನಾಮಕರಣ ಮಾಡಲು ಕಾಂಗ್ರೆಸ್ ಸರಕಾರ ನಿರ್ಣಯ ತೆಗೆದುಕೊಂಡಿದೆ. ಇದನ್ನು ನಾವು ತೀವ್ರ ಶಬ್ದಗಳಲ್ಲಿ ಖಂಡಿಸುತ್ತೇವೆ.

ಶ್ರೀರಾಮನ ಭೂಮಿಯಂದೇ ಖ್ಯಾತಿ ಪಡೆದಿರುವ ಭಾರತದಲ್ಲಿ ಶ್ರೀರಾಮನ ಹೆಸರನ್ನು ಅಳಿಸಿ ಹಾಕಿದರೆ ಅದನ್ನು ಹಿಂದೂ ಸಮಾಜ ಎಂದಿಗೂ ಸಹಿಸುವುದಿಲ್ಲ. ಈ ನಿರ್ಧಾರವು ಹಿಂದೂಗಳ ಗಾಯಕ್ಕೆ ಉಪ್ಪು ಸವರಿದಂತಿದೆ. ಕಾಂಗ್ರೆಸ್ ಈ ಹಿಂದೆ ಶ್ರೀರಾಮನನ್ನು ಕಾಲ್ಪನಿಕ ಎಂದಿತ್ತು, ನಂತರ ಶ್ರೀರಾಮಲಲ್ಲಾನ ಮೂರ್ತಿ ಪ್ರಾಣಪ್ರತಿಷ್ಠಾಪನೆಯ ಕಾರ್ಯಕ್ರಮಕ್ಕೆ ಹೋಗಲಿಲ್ಲ ಮತ್ತು ಈಗ ರಾಮನಗರದ ಹೆಸರು ಬದಲಾಯಿಸಿದೆ. ಇದರಿಂದ ಕಾಂಗ್ರೆಸ್ಸಿನ ‘ಶ್ರೀರಾಮ’ನ ಬಗ್ಗೆ ವಿರೋಧ ಸ್ಪಷ್ಟವಾಗಿದೆ ಎಂದು ಹಿಂದೂ ಜನಜಾಗೃತಿ ಸಮಿತಿ ಹೇಳಿದೆ.

ರಾಮನಗರದ ಹೆಸರನ್ನು ಬದಲಾಯಿಸಲು ನಿರ್ಧರಿಸಿದ ಕಾಂಗ್ರೆಸ್ ಪಕ್ಷವು ಮತಾಂಧ ಕ್ರೂರಿ ಔರಂಗಜೇಬನ ಹೆಸರಿರುವ ದೆಹಲಿಯ ಔರಂಗಜೇಬ ರಸ್ತೆ, ತುಘಲಕ್ ರಸ್ತೆ ಇತ್ಯಾದಿ ಆಕ್ರಮಣಕಾರಿಗಳ ಹೆಸರನ್ನು ಬದಲಾಯಿಸಲು ಪ್ರಯತ್ನಿಸಿದೆಯೇ ? ಕರ್ನಾಟಕದಲ್ಲಿರುವ ಮಹಾನಗರಗಳು ಮತ್ತು ನಗರಗಳ ಇಸ್ಲಾಮಿಕ್ ಹೆಸರುಗಳನ್ನು ಬದಲಾಯಿಸಲು ರಾಜ್ಯ ಸರಕಾರ ಧೈರ್ಯ ತೋರುವುದೇ ? ರಾಮನಗರ ಹೆಸರು ಬದಲಾವಣೆಗೆ ಹಿಂದೂಗಳು ತೀವ್ರ ವಿರೋಧ ವ್ಯಕ್ತಪಡಿಸುತ್ತಿದ್ದು, ಹೆಸರು ಬದಲಾವಣೆಯ ನಿರ್ಧಾರ ಹಿಂಪಡೆಯದಿದ್ದರೆ ಹಿಂದೂ ಸಮಾಜ ಬೀದಿಗಿಳಿಯದೆ ಸುಮ್ಮನಿರುವುದಿಲ್ಲ ಎಂದು ಹಿಂದೂ ಜನಜಾಗೃತಿ ಸಮಿತಿ ತನ್ನ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಹಕಾರಿ ಧುರೀಣ ಕೆ.ಹೆಚ್ ಪಾಟೀಲರು ಅಪರೂಪದ ರಾಜಕಾರಣ: ಮುಖ್ಯಮಂತ್ರಿ ಸಿದ್ದರಾಮಯ್ಯಜನ್ಮಧಾತೆ ಕನ್ನಡ ಸಿನೆಮಾ ಮಾ.20 ರಂದು ಪ್ರದರ್ಶನಕನ್ನಡಿಗರ ಉದ್ಯೋಗಿಗಳನ್ನು ಕೇಂದ್ರ ಸರ್ಕಾರ ಅತಂತ್ರ ಸ್ಥಿತಿಗೆ ತಳ್ಳಿದೆ: ಸಿಎಂಹಲಸೂರು ಕೆರೆ ಹೂಳೆತ್ತುವುದರಿಂದ ನೀರು ಸಂಗ್ರಹ ಅಂತರ್ಜಲ ವೃದ್ಧಿ :ಚೋಳನ್ಏಕ ಬಳಕೆ ಪ್ಲಾಸ್ಟಿಕ್ ಉತ್ಪಾದನೆ, ಒಟ್ಟು 78 ಲಕ್ಷ ರೂ ದಂಡಎಲ್ ಪಿಜಿ ಸಿಲಿಂಡರ್ ಅಭಾವ ನೀಗಿಸಲು ಕೇಂದ್ರಕ್ಕೆ ಒತ್ತಾಯ-CM ಸಿದ್ದರಾಮಯ್ಯಒಡಿಸ್ಸಾ ಕಾಂಗ್ರೆಸ್ ಶಾಸಕರಿಗೆ ತಲಾ ಐದು ಕೋಟಿ ಆಮಿಷ: ಡಿಸಿಎಂ ಡಿ.ಕೆ. ಶಿವಕುಮಾರ್ಜಿಬಿಎ ವ್ಯಾಪ್ತಿಯಲ್ಲಿ ಮತ್ತಷ್ಟು ಜೈವಿಕ ಅನಿಲ ಘಟಕಗಳ ಸ್ಥಾಪನೆಗೆ ಕ್ರಮ : ಮಹೇಶ್ವರ್ ರಾವ್ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ನೂತನ ಬಸ್ಸುಗಳ ಉದ್ಘಾಟನೆಹೆಚ್.ವೈ.ಮೇಟಿಯವರ ಕನಸು ನನಸು :ಮುಖ್ಯಮಂತ್ರಿ ಸಿದ್ದರಾಮಯ್ಯ