ಧಾರವಾಡ: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ), ಧಾರವಾಡ, ಇವರು ಆಯೋಜಿಸಿದ *"ಜಿಲ್ಲಾಮಟ್ಟದ ಸೈಕ್ಲಿಂಗ್ ಸ್ಪರ್ಧೆ"* ಯಲ್ಲಿ ನಮ್ಮ ಶ್ರೀ ಸಾಯಿ ವಿಜ್ಞಾನ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ವಿದ್ಯಾರ್ಥಿಯಾದ *ಕು. ಮಹಮ್ಮದ್ ತೌಫಿಕ್ ಡಿ. ಕುರ್ತಕೋಟಿ* ಇವನು, ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ವಿಜೇತನಾಗಿ *"ರಾಜ್ಯಮಟ್ಟಕ್ಕೆ ಆಯ್ಕೆ"* ಯಾಗಿರುತ್ತಾನೆ.
ಇವನಿಗೆ ಮಹಾವಿದ್ಯಾಲಯದ ಅಧ್ಯಕ್ಷರಾದ ಡಾ. ವೀಣಾ ಬಿರಾದಾರ ಅವರು ಸನ್ಮಾನಿಸಿ ಅಭಿನಂದಿಸಿದರು. ಇದೇ ಸಂದರ್ಭದಲ್ಲಿ ನವಲೂರಿನ ಸರ್ಕಾರಿ ಮಾದರಿ ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀ ಎಲ್ ಟಿ ದಾಸರ, ಪ್ರಾಚಾರ್ಯರಾದ ನಾಗರಾಜ ಶಿರೂರ, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.