LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

SSLC: ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಅಂಕಿತಾಗೆ ಬಂಪರ್ ಬಹುಮಾನ ನೀಡಿದ ಸಿದ್ದರಾಮಯ್ಯ

ಬೆಂಗಳೂರು : 2023-2024 ನೇ ಸಾಲಿನ ಎಸ್. ಎಸ್. ಎಲ್. ಸಿ. ಪರೀಕ್ಷೆಯಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಅಭ್ಯಾಸ ಮಾಡಿ ರಾಜ್ಯಕ್ಕೆ ಮೊದಲ ರ್ಯಾಂಕ್‌ ಪಡೆದ ವಿದ್ಯಾರ್ಥಿನಿ ಅಂಕಿತಾ ಬಸಪ್ಪ ಕೊನ್ನೂರ ಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿನಂದಿಸಿದ್ದಾರೆ.

SSLC ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ Rank ಪಡೆದ ಬಾಗಲಕೋಟ ಜಿಲ್ಲೆಯ ಮುಧೋಳ ತಾಲೂಕಿನ ಮೆಳ್ಳಿಗೇರಿ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿ ಕುಮಾರಿ ಅಂಕಿತ ಹಾಗೂ ದ್ವಿತೀಯ Rank ಪಡೆದ ಮಂಡ್ಯ ತಾಲೂಕಿನ ತುಂಬಿಗೆರೆ ಮೊರಾರ್ಜಿ ಶಾಲೆಯ ವಿದ್ಯಾರ್ಥಿ ನವನೀತ್ ಕೆ.ಸಿ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸನ್ಮಾನಿಸಿದರು. ಅಲ್ಲದೇ ಮುಂದಿನ ವಿದ್ಯಾಭ್ಯಾಸ ಯಶಸ್ವಿಯಾಗಿಸಾಗಲಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಭ ಹಾರೈಸಿದರು.

ಇನ್ನೂ ಈ ಸಂದರ್ಭದಲ್ಲಿ ಅಂಕಿತ ಮತ್ತು ನವನೀತ್ ಸಾಧನೆಗೆ ಮೆಚ್ವುಗೆ ವ್ಯಕ್ತಪಡಿಸಿದ ಸಿಎಂ, ಪೋಷಕರನ್ನೂ ಅಭಿನಂದಿಸಿದರು. ಮುಂದಿನ‌ ವಿಧ್ಯಾಭ್ಯಾಸಕ್ಕೆ ಅನುಕೂಲವಾಗಲಿ ಎಂದು ಅಂಕಿತಾಗೆ 5 ಲಕ್ಷ ರೂ. ಹಾಗೂ ನವನೀತ್ ಗೆ 3 ಲಕ್ಷ ರೂ.ಗಳ ನೆರವನ್ನು ಸಿಎಂ ಘೋಷಿಸಿದರು. ಅಂಕಿತಾ ಓದಿದ ಶಾಲೆಯ ಅಭಿವೃದ್ಧಿಗೆ ಒಂದು ಕೋಟಿ ರೂ. ಹಾಗೂ ನವನೀತ್ ವ್ಯಾಸಂಗ ಮಾಡಿದ ಶಾಲೆಯ ಅಭಿವೃದ್ಧಿಗೆ 50 ಲಕ್ಷ ರೂ.ಗಳ ಅನುದಾನ ಬಿಡುಗಡೆ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ವಿದ್ಯಾರ್ಥಿಗಳು ಮುಖ್ಯಮಂತ್ರಿಗಳಿಂದ ಸನ್ಮಾನ ಸ್ವೀಕರಿಸುವ ಸಂದರ್ಭದಲ್ಲಿ ಉಪಸ್ಥಿತರಿದ್ದ ಪೋಷಕರು ಸರ್ಕಾರದ ನೆರವಿಗೆ ಧನ್ಯತೆ ಅರ್ಪಿಸಿದರು. ಮೊರಾರ್ಜಿ ದೇಸಾಯಿ ವಸತಿ ಶಾಲೆ ನನ್ನ ಕಲ್ಪನೆ. 1994 ರಲ್ಲಿ ಉಪ ಮುಖ್ಯಮಂತ್ರಿ ಆಗಿದ್ದಾಗ ಈ ಶಾಲೆಗಲಿಗೆ ಚಾಲನೆ ನೀಡಲಾಯಿತು ಎಂದು ಸಿದ್ದರಾಮಯ್ಯ ಅವರು ಹೇಳಿದರು.

 

ನಿಮ್ಮ ಸಾಧನೆಯೇ ನನಗೆ ಪ್ರೇರಣೆ: ಕುಮಾರಿ ಅಂಕಿತ
ಮುಖ್ಯಮಂತ್ರಿಗಳಿಂದ ಸನ್ಮಾನ ಸ್ವೀಕರಿಸಿದ ಬಳಿಕ SSLC ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ Rank ಪಡೆದ ಬಾಗಲಕೋಟ ಜಿಲ್ಲೆಯ ಮುಧೋಳ ತಾಲೂಕಿನ ಮೆಳ್ಳಿಗೇರಿ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿ ಕುಮಾರಿ ಅಂಕಿತ ಮಾತನಾಡಿ, “ಸಾರ್ ನಿಮ್ಮ ಸಾಧನೆಗಳು, ನಿಮ್ಮ ಮಾತುಗಳು ನನ್ನ ಈ ಯಶಸ್ಸಿಗೆ ಪ್ರೇರಣೆ ಮತ್ತು ಪ್ರೋತ್ಸಾಹ ನೀಡಿದವು” ಎಂದು ತಿಳಿಸಿದರು. ಮುಂದೆ ಐಎಎಸ್ ಅಧಿಕಾರಿ ಆಗಬೇಕೆಂಬ ಬಯಕೆಯನ್ನು ಅಂಕಿತಾ ವ್ಯಕ್ತಪಡಿಸಿದರು. ಪಿಯುಸಿ ದಾಖಲಾತಿ ಸೇರಿದಂತೆ ಮುಂದಿನ ವಿದ್ಯಾಭ್ಯಾಸಕ್ಕೆ ನೆರವು ಒದಗಿಸುವುದಾಗಿ ಸಿಎಂ ಭರವಸೆ ನೀಡಿದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನದೀಪಾವಳಿ ಹಬ್ಬಕ್ಕೆ ವಿಶೇಷ ಗಿಫ್ಟ್‌ - ಅರ್ಹ ಮಹಿಳೆಯರಿಗೆ ಫ್ರೀ ಗ್ಯಾಸ್‌ ಸಿಲಿಂಡರ್ಯೋಗಿ ಸರ್ಕಾರದ ಬುಲ್ಡೋಜರ್ ಕ್ರಮಕ್ಕೆ ಸುಪ್ರೀಂ ತಡೆ- ಅ.23ಕ್ಕೆ ವಿಚಾರಣೆ ಮುಂದೂಡಿಕೆರಾಜ್ಯಾದ್ಯಂತ ಆಸ್ತಿ ಸೇರಿದಂತೆ ಎಲ್ಲ ನೋಂದಣಿ ಹಠಾತ್ ಸ್ಥಗಿತದರ್ಶನ್‌ ವೈದ್ಯಕೀಯ ವರದಿ ಸಲ್ಲಿಸಿ- ಜೈಲು ಅಧಿಕಾರಿಗೆ ಹೈಕೋರ್ಟ್ ನಿರ್ದೇಶನಕೇಕ್‌ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ..! ಭಾರೀ ಚರ್ಚೆಗೆ ಕಾರಣವಾಯ್ತು ಬರ್ತ್‌ ಡೇ ಕೇಕ್..!‌ನಕಲಿ ಆಧಾರ್ ಕಾರ್ಡ್ ಹೊಂದಿದ್ದ ಮೂವರು ಬಾಂಗ್ಲಾ ಪ್ರಜೆಗಳು ಅರೆಸ್ಟ್‌‌..!'ನಾನು ಯಾವುದೇ ಅರಣ್ಯ ಭೂಮಿಯನ್ನು ಒತ್ತುವರಿ ಮಾಡಿಲ್ಲ'- ಸಚಿವ ಬೋಸರಾಜು ಸ್ಪಷ್ಟನೆಬಿಷ್ಣೋಯಿ ಹತ್ಯೆಗೈಯುವ ಪೊಲೀಸ್‌ ಅಧಿಕಾರಿಗೆ 1,11,11,111 ರೂ. ಬಹುಮಾನ ಘೋಷಿಸಿದ ಕರ್ಣಿ ಸೇನಾಆಕ್ಸಿಜನ್ ಸಿಲಿಂಡರ್ ಸ್ಫೋಟ - ಆರು ಜನರು ದುರ್ಮರಣ