LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ - ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ




ಬೆಂಗಳೂರು : 2024-2025ನೇ ಸಾಲಿನ ಎಸ್​ಎಸ್​ಎಲ್​ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ. ಈ ಬಾರಿ ಶೇ.66.1ರಷ್ಟು ಅಂದರೆ ಕಳೆದ ವರ್ಷಕ್ಕಿಂತ 8% ಫಲಿತಾಂಶ ಹೆಚ್ಚಾಗಿದೆ. ಈ ಬಾರಿ ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನ ಪಡೆದುಕೊಂಡಿದೆ.

ದಕ್ಷಿಣ ಕನ್ನಡ ಮತ್ತು ಉಡುಪಿ ಕ್ರಮವಾಗಿ 91.12% ಮತ್ತು 89.96% ಫಲಿತಾಂಶದೊಂದಿಗೆ ರಾಜ್ಯದಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಪಡೆದಿವೆ. ಕಲಬುರಗಿ ಜಿಲ್ಲೆ ಕೊನೆಯ ಸ್ಥಾನ ಪಡೆದುಕೊಂಡಿದೆ.

22 ವಿದ್ಯಾರ್ಥಿಗಳು 625 ಅಂಕಗಳಲ್ಲಿ 625 ಅಂಕಗಳನ್ನು ಗಳಿಸುವ ಮೂಲಕ ರಾಜ್ಯಮಟ್ಟದಲ್ಲಿ ಉನ್ನತ ರ‍್ಯಾಂಕ್ ಗಳಿಸಿದ್ದಾರೆ. ಈ ವರ್ಷದ ಉತ್ತೀರ್ಣ ಶೇಕಡಾವಾರು 66.14% ಆಗಿದ್ದು, ಕಳೆದ ವರ್ಷದ ಎಸ್‌ಎಸ್‌ಎಲ್‌ಸಿ ಫಲಿತಾಂಶಕ್ಕೆ ಹೋಲಿಸಿದರೆ 8% ಹೆಚ್ಚಳವಾಗಿದೆ.

2025 ಮಾರ್ಚ್​ 21ರಿಂದ ಏಪ್ರಿಲ್​ 4 ರವರೆಗೆ ರಾಜ್ಯದ 2,818 ಕೇಂದ್ರಗಳಲ್ಲಿ ಎಸ್​ಎಸ್​ಎಲ್​ಸಿ ಪರೀಕ್ಷೆ ನಡೆಸಲಾಗಿತ್ತು. 4,61563 ಹುಡುಗರು ಮತ್ತು 4,34,884 ಹುಡಗಿಯರು ಪರೀಕ್ಷೆ ಬರೆದಿದ್ದರು.


Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST