ಮಡಿಕೇರಿ: ವಿಧಾನಸಭಾ ಚುನಾವಣೆಗಳ ನಂತರ ವಿಶ್ರಾಂತಿ ಪಡೆಯಲು ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಹಾಗೂ ಪುತ್ರ ಉದಯನಿಧಿ ಸ್ಟಾಲಿನ್ ಕುಟುಂಬ ಸಮೇತರಾಗಿ ಕೊಡಗಿಗೆ ಆಗಮಿಸಿದ್ದಾರೆ. ಮಡಿಕೇರಿ ಸಮೀಪದ ಖಾಸಗಿ ರೆಸಾರ್ಟ್‌ನಲ್ಲಿ ಎರಡು ದಿನಗಳ ವಾಸ್ತವ್ಯ ಹೂಡಿರುವ ಕುಟುಂಬ ಪ್ರಕೃತಿ ಸೌಂದರ್ಯದ ನಡುವೆ ರಿಲ್ಯಾಕ್ಸ್ ಮೂಡ್‌ನಲ್ಲಿ ಕಾಲ ಕಳೆಯುತ್ತಿದೆ. ಸ್ಟಾಲಿನ್ ಪತ್ನಿ ದುರ್ಗಾ ಸೇರಿದಂತೆ ಕುಟುಂಬ ಸದಸ್ಯರು ಜೊತೆಯಲ್ಲಿದ್ದು, ಇಂದು ಹಾಗೂ ನಾಳೆ ಕೊಡಗಿನ ಪ್ರಮುಖ ಪ್ರವಾಸಿ ತಾಣಗಳಿಗೆ ಭೇಟಿ ನೀಡುವ ಸಾಧ್ಯತೆ ಇದೆ. ಬಳಿಕ ಅವರು ತಮಿಳುನಾಡಿಗೆ ಮರಳಲಿದ್ದಾರೆ ಎನ್ನಲಾಗಿದೆ. ಕಳೆದ ಒಂದು ತಿಂಗಳಿನಿಂದ ಡಿಎಂಕೆ ಹಾಗೂ ಮೈತ್ರಿಕೂಟ ಅಭ್ಯರ್ಥಿಗಳ ಪರವಾಗಿ ಸ್ಟಾಲಿನ್ ರಾಜ್ಯಾದ್ಯಂತ ಬಿರುಸಿನ ಪ್ರಚಾರ ನಡೆಸಿದ್ದರು.