LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

'ಮಾರ್ಚ್ 7 ರಂದು ರಾಜ್ಯ ಬಜೆಟ್ ಮಂಡನೆ'- ಸಿಎಂ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು : ಮಾರ್ಚ್ 3 ರಿಂದ ವಿಧಾನಮಂಡಲ ಅಧಿವೇಶನ ಪ್ರಾರಂಭವಾಗುತ್ತದೆ. ಮಾರ್ಚ್ ಮಾರ್ಚ್ 7ರಂದು ಬಜೆಟ್ ಮಂಡಿಸುತ್ತೇನೆ. ಬಳಿಕ 3 ದಿನ ರಾಜ್ಯಪಾಲರ ಭಾಷಣದ ಮೇಲೆ ಚರ್ಚೆಯಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

ಈಗಾಗಲೇ ಸಿಎಂ ಸಿದ್ದರಾಮಯ್ಯ ಅವರು ಬಜೆಟ್ ಸಂಬಂಧ ವಿವಿಧ ಇಲಾಖೆಗಳೊಂದಿಗೆ ಪೂರ್ವಭಾವಿ ಸಭೆ ನಡೆಸಿ, ಮಾಹಿತಿಯನ್ನು ಪಡೆದುಕೊಂಡಿದ್ದಾರೆ. ಇನ್ನು ಇಂದು ಕೂಡ ಸಿಎಂ ಸಭೆಗಳನ್ನು ನಡೆಸಿದರು.

ಇಂದು ರೈತರು ಮತ್ತು ರೈತ ಸಂಘ-ಸಂಸ್ಥೆಗಳ ಜೊತೆ ಸಭೆ ನಡೆಸಿದ ಅವರು, 'ಸಿಎಂ ಸಿದ್ದರಾಮಯ್ಯ ಆದ ನಾನು ಸದಾ ರೈತ ಕುಲದ ಪರವಾಗಿ ಇರುತ್ತೇನೆ. ರೈತರ ಬೇಡಿಕೆಗಳನ್ನು ನಿರಂತರವಾಗಿ ಹಂತ ಹಂತವಾಗಿ ಈಡೇರಿಸುತ್ತಲೇ ಇದ್ದೇವೆ. ಅತಿ ಹೆಚ್ಚು ಉದ್ಯೋಗ ಅವಲಂಬನೆ ಇರುವುದು ಕೃಷಿಯಲ್ಲೇ. ಆದ್ದರಿಂದ ರೈತರ ಬೇಡಿಕೆಗಳಿಗೆ ನಮ್ಮದು ಪ್ರಥಮ ಆದ್ಯತೆ' ಎಂದು ತಿಳಿಸಿದರು.

ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇವತ್ತು ಕೂಡ ಸಭೆ ಮಾಡಿದ್ದೀನಿ. ಕರ್ನಾಟಕ ಸರ್ಕಾರ ಯಾವಾಗಲೂ ರೈತರ ಹಿತ ಕಾಪಾಡಲು ಹಿಂದೆ ಬಿದ್ದಿಲ್ಲ. ಯಾವತ್ತೂ ಕೂಡ ರೈತರ ಜೊತೆ ಇರುತ್ತೇವೆ. ಕೃಷಿಕರ ಜೊತೆ ಇರುತ್ತೇವೆ ಎಂಬ ಮಾತು ಕೊಡುತ್ತೇನೆ. ಬೆಲೆ ಏರಿಕೆ ರಾಜ್ಯ ಮತ್ತು ಕೇಂದ್ರ ಸರ್ಕಾರದ ನಿರ್ಧಾರ. ರಾಜ್ಯ ಸರ್ಕಾರದಿಂದ ಬೆಲೆ ಏರಿಕೆಗೆ ಏನೆಲ್ಲಾ ಮಾಡಬೇಕು ಅದನ್ನ ಮಾಡುತ್ತೇವೆ ಎಂದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪಿಜಿಯಲ್ಲಿ ನೇಣು ಬಿಗಿದುಕೊಂಡು ಬಿಬಿಎ ವಿದ್ಯಾರ್ಥಿನಿ ಆತ್ಮಹತ್ಯೆ.!ರೈತರಿಗೆ ಖುಷಿ ಸುದ್ದಿ.! ಕೆರೆ ಮಣ್ಣುನ್ನು ಹೊಲಗಳಿಗೆ ಬಳಸಿಕೊಳ್ಳಬಹುದು.!19=10-2025 ದಿನದ ಮಂಡಕ್ಕಿ ಒಗ್ಗರಣೆ- ಮಿರ್ಚಿ.!.!ವಚನ.: --ರಕ್ಕಸಬೊಮ್ಮಿತಂದೆ / ರಕ್ಕಸ ಬ್ರಹ್ಮಯ್ಯಓಯೋ ರೂಮ್ ಬುಕ್ ಮಾಡೋ ಮುನ್ನ ಈ ವಿಷಯಗಳು ತಿಳಿದಿರಲಿ!9 ಲಕ್ಷ ಕೋಟಿ ದಾಟಿದ ಆರ್‌ಬಿಐ ಚಿನ್ನದ ಮೀಸಲು ಸಂಗ್ರಹಗರೀಬ್ ರಥ ಎಕ್ಸ್‌ಪ್ರೆಸ್ ರೈಲಿನಲ್ಲಿ ಏಕಾಏಕಿ ಬೆಂಕಿ; ಹೊತ್ತಿ ಉರಿದ ಎಸಿ ಕೋಚ್‌ಗಳುBamboo plastic ಚೀನಾ ಸಂಶೋಧಕರಿಂದ ಹೊಸ ಮಾದರಿ ಪ್ಲಾಸ್ಟಿಕ್ ಆವಿಷ್ಕಾರ, ಇದು 50 ದಿನದಲ್ಲಿ ಮಣ್ಣಲ್ಲಿ ಕರಗತ್ತೆ!ಕಾಲೇಜು ಶೌಚಾಲಯದಲ್ಲಿ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ: ವಿದ್ಯಾರ್ಥಿ ಅರೆಸ್ಟ್ತೇಜಸ್ ಎಂಕೆ1ಎ ಯುದ್ಧ ವಿಮಾನ- ಮೊದಲ ಹಾರಾಟ ಯಶಸ್ಸು