Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News | Districts Bagalkot

ಬರ ಪರಿಹಾರ ಘೋಷಿಸುವಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ವಿಫಲ- ಬಿವೈವಿ


 ಜಮಖಂಡಿ;ಭೀಕರ ಬರಗಾಲ ತಲೆದೊರಿದ್ದು ರಾಜ್ಯ ಕಾಂಗ್ರೆಸ್ ಸರ್ಕಾರ ಬರ ಪರಿಹಾರ ಘೋಷಿಸುವಲ್ಲಿ ವಿಫಲವಾಗಿದೆ ಎಂದು ಬಿಜೆಪಿ ರಾಜ್ಯಾಧಕ್ಷ ಬಿ.ವೈ.ವಿಜಯೀಂದ್ರ ಆರೋಪಿಸಿದರು. ನಗರದ ಬಸವ ಭವನದಲ್ಲಿ ಗುರುವಾರ ಏರ್ಪಡಿಸಿದ್ದ ಸೇವಾ ಸಂಕಲ್ಪ ಬೂತ್ ಮಟ್ಟದ ವಿಜಯ ಸಂಕಲ್ಪ ಯಾತ್ರೆಯನ್ನು ಉದ್ದೇಶಿಸಿ ಮಾತನಾಡಿದರು. ಜನರು, ರೈತರು ಮಹಿಳಾ ವಿರೋಧಿ ಸರ್ಕಾರ ಆಂತರಿಕ ಕಚ್ಚಾಟ, ಪಂಚಗ್ಯಾರಂಟಿ ನೆಪದಲ್ಲಿ ಅಭಿವೃದ್ಧಿ ಶೂನ್ಯದ ಜತೆಗೆ ವ್ಯಾಪಕ ಬ್ರಷ್ಟಾಚಾರದಲ್ಲಿ ತೊಡಗಿದೆ ಎಂದು ಟೀಕಿಸಿದರು. ಅಧಿಕಾರ ಶಾಶ್ವತವಲ್ಲ ರಾಜ್ಯದ ಜನರು ಕಾಂಗ್ರೆಸ್‌ನ ದುರಾಡಳಿತವನ್ನು ವೀಕ್ಷಿಸುತ್ತಿದ್ದು ಮುಂಬರುವ ಚುನಾವಣೆಗಳಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಹೇಳಿದರು. ಕಾಂಗ್ರೆಸ್ ಆಡಳಿತದಲ್ಲಿ ಆಸ್ಪತ್ರೆಗಳಲ್ಲಿ ಔಷಧಿಇಲ್ಲ, ವೈದ್ಯರಿಲ್ಲ, ಶಾಲೆಗಳಲ್ಲಿ ಶಿಕ್ಷಕರಿಲ್ಲ, ಬಸ್‌ಗಳಿಗೆ ಡಿಜೈಲ್ ಖರಿದಿಸುವ ಯೋಗ್ಯತೆ ಇಲ್ಲವಾಗಿದೆ. ವಿದ್ಯುತ್ ಅಭಾವವಾಗಿದೆ ರೈತರ ಪಂಪ್‌ಸೆಟ್‌ಗಳಿಗೆ ೭ ಗಂಟೆ ವಿದ್ಯುತ್, ಹೆಕ್ಟೇರ್‌ಗೆ ೫೦ ಸಾವಿರ ಪರಿಹಾರ, ೫ ಲಕ್ಷದ ವರೆಗಿನ ಬೆಳೆಸಾಲ ಮನ್ನಾ ಮಾಡಲು ಬಜೆಪಿ ವಿಶೇಷ ಅಧಿವೇಶನದಲ್ಲಿ ಹೋರಾಟ ನಡೆಸಿದರು ಯಾವ ಪ್ರಯೋಜನವಾಗಿಲ್ಲ. ೩೫೦೦ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಆದರೂ ಸರ್ಕಾರ ತಲೆ ಕಡಿಸಿಕೊಂಡಿಲ್ಲ ಎಂದು ದೂರಿದರು.
ಯುಕೆಪಿಗೆ ಅನುದಾನ ವಿಲ್ಲ : ಸರ್ಕಾರ ಕೃಷ್ಣಾ ಮೇಲ್ದಂಡೆ ಯೋಜನೆಗೆ ಪ್ರತಿವರ್ಷ ೧೦ ಸಾವಿರ ಕೋಟಿ ಅನುದಾನ ಬಿಡುಗಡೆ ಗೊಳಿಸುವದಾಗಿ ಭರವಸೆ ನೀಡಿತ್ತು ಆದರೆ ಇದು ವರೆಗೂ ಕಾರ್ಯರೂಪಕ್ಕೆ ಬಂದಿಲ್ಲ. ನುಡಿದಂತೆ ನಡೆಯುತ್ತೇವೆ ಎಂದು ಸುಳ್ಳು ಜಾಹೀರಾತುಗಳನ್ನು ನೀಡಿ ವಂಚನೆಯಲ್ಲಿ ತೊಡಗಿದೆ. ಅಬಕಾರಿ ಇಲಾಖೆಗೆ ತಿಂಗಳಿಗೆ ೪೫ ಸಾವಿರ ಕೋಟಿ ಬೆ;ಲೆಯ ಮಧ್ಯ ಮಾರಲು ಟಾರ್ಗೆಟ್ ನೀಡಿರುವ ಸರ್ಕಾರ ರಾಜ್ಯವನ್ನು ಕುಡುಕರ ರಾಜ್ಯವಾಗಿಸಲು ಹೊರಟಿದೆ. ಹೈನುಗಾರಿಕೆ ರೈತರಿಗೆ ಪ್ರತಿ ಲೀಟರ್ ಹಾಲಿಗೆ ೫ ರೂ ಸಹಾಯ ಧನ ನೀಡಲು ಇವರಿಗೆ ಮನಸ್ಸಿಲ್ಲ ಎಂದು ದೂರಿದರು.
ರಾಹುಲ್ ಗಾಂಧಿ ಪ್ರಧಾನಿ ಕನಸು : ರಾಹುಲ್‌ಗಾಂಧಿ ಪ್ರಧಾನಿಯಾಗಲು ಹೊರಟಿದ್ದು ಚುನಾವಣಾ ಆಯೋಗದ ವಿರುದ್ಧ ಆರೋಪಗಳು, ಪ್ರತಿಭಟನೆಯಲ್ಲಿ ತೊಡಗಿದ್ದಾರೆ. ಸಂವಿಧಾನಿಕ ಸಂಸ್ಥೆಗಳ ವಿರುದ್ದ ಅಪಪ್ರಚಾರದಲ್ಲಿ ತೊಡಗಿದ್ದಾರೆ, ತಿಂಗಳಲ್ಲಿ ಹಲವು ಬಾರಿ ಸಿಎಂ ಡಿಕೆಶಿ ಅವರು ದೆಹಲಿಗೆ ಹೋದರೂ ರಾಜ್ಯದ ಜನತೆಗೆ ಯಾವುದೇ ಪ್ರಯೋಜನವಾಗಿಲ್ಲ ಎಂದರು. ರಾಜ್ಯರಸ್ತೆ ಸಾರಿಗೆ ಸಂಸ್ಥೆಗೆ ಅನುದಾನ ನೀಡಿಲ್ಲ. ೩.೫ ವರ್ಷದಲ್ಲಿ ಒಂದೇ ಒಂದು ಮನೆ ನೀಡಿಲ್ಲ, ಬಿಪಿಎಲ್ ಕಾರ್ಡಗಳನ್ನು ನೀಡುತ್ತಿಲ್ಲ. ಸ್ವತಂತ್ರ್ಯ ಹೋರಾಟಗಾರರ ಪಿಂಚಣಿಯನ್ನು ನೀಡಲು ಸರ್ಕಾರದ ಬಳಿ ಹಣವಿಲ್ಲ. ಸರ್ಕಾರಿ ನೇಮಕಾತಿಗಳು ನಡೆಯುತ್ತಿಲ್ಲ ಇದು ಕಾಂಗ್ರೆಸ್‌ನ ಆಡಳಿತ, ಸಾಧನೆ ಎಂದು ದೂರಿದರು. ದಲತರ ಹತ್ಯೆ, ಅತ್ಯಾಚಾರ ಪ್ರಕೆರಣಗಳು ಹೆಚ್ಚುತ್ತಿದ್ದು ಗೃಹ ಸಚಿವ ಪ್ರೀಯಾಂಕ ಖರ್ಗೆ, ಕಾನೂನು ಸೂವ್ಯವಸ್ಥೆ ಕಾಪಾಡುವಲ್ಲಿ ವಿಫಲರಾಗಿದ್ದಾರೆ ಎಂದು ಹೇಳಿದರು.
ನಿರಾಣಿ ಅಸಮಾಧಾನ; ರಾಜ್ಯ ಬಿಜೆಪಿ ಉಪಾಧ್ಯಕ್ಷ ಮಾಜಿ ಸಚಿವ ಮುರುಗೇಶ ನಿರಾಣಿಯವರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಿಲ್ಲ ಎಂದು ಅಸಮಾಧಾನ ವ್ಯಕ್ತ ಪಡಿಸಿದ ಘಟನೆ ನಡೆಯಿತು. ಪಕ್ಷದ ಹಿರಿಯರು, ಕಾರ್ಯಕರ್ತರನ್ನು ಕಡೆಗಣಿಸಬಾರದು ಸೇವಾಸಂಕಲ್ಪ ಯಾತ್ರೆ ಕುರಿತು ಸರಿಯಾದ ಮಾಹಿತಿ ಇರಲಿಲ್ಲ. ಬಿ.ಎಸ್.ಯಡಿಯೂರಪ್ಪ ಅವರ ಕಾರ್ಯಕ್ರಮಗಳಿಗೆ ಸಾವಿರಾರು ಸಂಖ್ಯೆಯಲ್ಲಿ ಜನ ಸೇರುತ್ತಿದ್ದರು ಪಕ್ಷದ ವಿವಿಧ ಜವಾಬ್ದಾರಿಗಳನ್ನು ಹೊತ್ತವರು ಎಲ್ಲಕಾರ್ಯಕರ್ತರು, ಹಿರಿಯರನ್ನು ಕಾರ್ಯಕ್ರಮಗಳಿಗೆ ಆಹ್ವಾನಿಸಬೇಕು ಎಂದು ಸಲಹೆ ನೀಡಿದರು. ಜಿಫಂ. ತಾಪಂ ಹಾಗೂ ೨೦೨೮ರ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಇಂದಿನಿಂದಲೇ ಕಾರ್ಯ ಪ್ರವೃತರಾಗುವಂತೆ ಸಲಹೆ ನೀಡಿದರು. ಬಿ.ವೈ.ವಿಜಯೀಂದ್ರ ಮಾತನಾಡಿ ಯಾರೋಬ್ಬರ ಮೇಲೆ ಆರೋಪ ಪ್ರತ್ಯಾರೋಪಗಳನ್ನು ಮಾಡುವದು ಬೇಡ ಮುಂದಿನ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಪಕ್ಷದ ಸಂಘಟನೆಗೆ ಕಾರ್ಯನಿರ್ವಹಿಸಬೇಕು ಕಾರ್ಯಕರ್ತರು ಪಕ್ಷದ ಆಸ್ತಿ ಎಂಬು ದನ್ನು ಮರೆಯಬಾರದು ಎಂದು ಸಮಝಾಯಿಸಿ ನೀಡಿದರು.
ಚಿತ್ರದುರ್ಗ ಲೋಕಸಭಾ ಸದಸ್ಯ ಗೋವಿಂದ ಕಾರಜೋಳ. ಶಾಸಕ ಜಗದೀಶ ಗುಡಗುಂಟಿ, ಜಿಲ್ಲಾ ಬಿಜೆಪಿ ಅಧ್ಯಕ್ಷ ಶಾಂತಗೌಡ ಪಾಟೀಲ, ಮಾತನಾಡಿದರು. ಸಂಸದ ಪಿ.ಸಿ.ಗದ್ದಿಗೌಡರ, ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂ ಗೌಡ, ಮಾಜಿ ಶಾಸಕರಾದ ಶ್ರೀಕಾಂತ ಕುಲಕರ್ಣಿ, ಕುಡಚಿಯ ಪಿ.ರಾಜೀವ, ಜಿ.ಎಸ್.ನ್ಯಾಮಗೌಡ, ಬೆಳಗಾವಿಯ ಸಂಜಯ ಪಾಟೀಲ, ಹುನಗುಂದ ಮಾಜಿ ಶಾಸಕ ದೊಡ್ಡನಗೌಡ ಪಾಟೀಲ, ಪರಿಷತ್ ಸದಸ್ಯ ಹಣಮಂತ ನಿರಾಣಿ, ಮುಂತಾದವರು ವೇದಿಕೆಯಲ್ಲಿದ್ದರು. ನಗರದ ಪ್ರಮುಖ ಬೀದಿಗಳಲ್ಲಿ ಬಿಜೆಪಿ ಕಾರ್ಯಕರ್ತರು ಮೆರವಣಿಗೆ ನಡೆಸಿದರು.

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಂಧ, ವಿಕಲಚೇತನರ ಬಾಳಿಗೆ ಬೆಳಕಾದ ಸ್ನೇಹ ಜ್ಯೋತಿ ಸಂಸ್ಥೆ : ಧರ್ಮಾಧ್ಯಕ್ಷ ಡೇರಿಕ್ ಫರ್ನಾಂಡಿಸ್ ಧಾರವಾಡ ಜಿಲ್ಲಾ ಕ್ರೀಡಾ ವಸತಿ ನಿಲಯದ ಅಥ್ಲೇಟಿಕ್ ಕ್ರೀಡಾಕೂದಲ್ಲಿ ಸಾಧನೆಮಹಿಳೆಯರ ಸಾಮಾಜಿಕ, ಆರ್ಥಿಕ ಪ್ರಗತಿಗೆ ಜ್ಞಾನವಿಕಾಸ ಕಾರ್ಯಕ್ರಮ ಪೂರಕ: ದಯಾಶೀಲಅಂಜನಾದ್ರಿ ದೇವಸ್ಥಾನದ ಆಡಳಿತ ವಿವಾದ: ನ್ಯಾಯಾಲಯದ ಆದೇಶದಂತೆ ಅವಕಾಶ ನೀಡಿಸುರಕ್ಷಿತ ಬಚಪನ್ ಅಭಿಯಾನ: ಬೂದಗುಂಪಾದಲ್ಲಿ ಮಕ್ಕಳ ಹಕ್ಕುಗಳು & ಕಾನೂನುಗಳ ಜಾಗೃತಿ ಕಾರ್ಯಕ್ರಮನವೆಂಬರ್ 3 ರಂದು ಗಂಗಾವತಿಯಲ್ಲಿ ಬಸವಾದಿ ಶಿವಶರಣರ ಬೃಹತ್ ಹಿಂದೂ ಸಮಾವೇಶನಾಳೆ ದಲಿತ ಸೇನೆ ರಾಜ್ಯ ಸಮಿತಿಯ ಪೂರ್ವಭಾವಿ ಸಭೆ ಹಾಗೂ ನೂತನ ಪದಾಧಿಕಾರಿಗಳಿಗೆ ಸನ್ಮಾನಹುಲಿಗೆಮ್ಮ ದೇವಿ ದೇವಸ್ಥಾನದ ಅಧಿಕಾರಿ ವಿರುದ್ಧ ದೂರು ದಾಖಲಿಸಿ ಕ್ರಮಕ್ಕೆ ಒತ್ತಾಯಕೊಪ್ಪಳ ಭಾಗ್ಯನಗರ ಬಂದ್‌ಗೆ ಹೈದರಾಬಾದ್ ಕರ್ನಾಟಕ ಯುವಶಕ್ತಿ ಬೆಂಬಲಹಣಕಾಸು ಒಳಗೊಳ್ಳುವಿಕೆ ಸ್ಯಾಚುರೇಶನ್ ಅಭಿಯಾನ: ವಿಶೇಷ ಜಾಗೃತಿ ಪೋಸ್ಟರ್ ಬಿಡುಗಡೆ