LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಮಾರಣಾಂತಿಕ ಗಂಭೀರ ರೋಗದಿಂದ ಬಳಲುತ್ತಿರುವವರಿಗೆ ದಯಾಮರಣ ಹಕ್ಕು- ರಾಜ್ಯ ಸರ್ಕಾರ ಮಹತ್ವದ ಆದೇಶ

ಬೆಂಗಳೂರು:ರೋಗಿಗಳಿಗೆ ಘನತೆಯಿಂದ ಸಾಯುವ ಹಕ್ಕು ನೀಡಿ ಕರ್ನಾಟಕ ಆರೋಗ್ಯ ಇಲಾಖೆ ಶುಕ್ರವಾರ ಮಹತ್ವದ ಆದೇಶ ಹೊರಡಿಸಿದೆ.

ಮಾರಣಾಂತಿಕ ಖಾಯಿಲೆಯಿಂದ ಬಳಲುತ್ತಿದ್ದು, ಚೇತರಿಕೆಯೇ ಕಾಣದೆ ಜೀವನಪೂರ್ತಿ ಸಂಕಷ್ಟ ಅನುಭವಿಸುವ ಸ್ಥಿತಿಯಲ್ಲಿರುವವರಿಗೆ ಈ ಅವಕಾಶ ಕಲ್ಪಿಸಲಾಗಿದೆ. ದಯಾಮರಣಕ್ಕೆ ಅವಕಾಶ ನೀಡುವುದನ್ನು ನಿರ್ಧರಿಸಲು ಇಬ್ಬರು ವೈದ್ಯರನ್ನೊಳಗೊಂಡ ಎರಡು ಮಂಡಳಿಗಳ ಸ್ಥಾಪನೆ ಮಾಡುವ ಬಗ್ಗೆಯೂ ಆದೇಶದಲ್ಲಿ ಉಲ್ಲೇಖಿಸಲಾಗಿದೆ.ಇದೀಗ ಮಾರಕ ರೋಗದಿಂದ ಬಳಲುತ್ತಿರುವವರಿಗೆ ಸಾಯುವ ಹಕ್ಕನ್ನು ನೀಡುವ ಮೂಲಕ ಕರ್ನಾಟಕ ಆರೋಗ್ಯ ಇಲಾಖೆ ಸುಪ್ರೀಂ ಕೋರ್ಟ್​​ನ ನಿರ್ದೇಶನ ಜಾರಿ ಮಾಡಿದಂತಾಗಿದೆ.

ಗಂಭೀರವಾದ ಮತ್ತು ಮಾರಣಾಂತಿಕ ಖಾಯಿಲೆಯಿಂದ ಬಳಲುತ್ತಿರುವವರ ಕುಟುಂಬಸ್ಥರ ಮನವಿ ಮೇರೆಗೆ ವೈದ್ಯರ ತಂಡ ಕಾರ್ಯ ನಿರ್ವಹಿಸಬೇಕು. ಇದಕ್ಕಾಗಿ ಎರಡು ಪ್ರೈಮರಿ ಹಾಗೂ ಸೆಕೆಂಡರಿ ಎಂಬ ಎರಡು ವೈದ್ಯರ ಬೋರ್ಡ್​​ಗಳನ್ನು ಸ್ಥಾಪಿಸಲಾಗುತ್ತಿದೆ. ಪ್ರೈಮರಿ ಬೋರ್ಡ್​​ನಲ್ಲಿ ಮೂವರು ವೈದ್ಯರು ಇರುತ್ತಾರೆ. ಸೆಕೆಂಡರಿ ಬೋರ್ಡ್​​ನಲ್ಲಿ ಕೂಡ ಮೂವರು ವೈದ್ಯರು ಇರಲಿದ್ದಾರೆ. ಈ ಪೈಕಿ ಒಬ್ಬರು ಸರ್ಕಾರಿ ವೈದ್ಯರು ಇರುತ್ತಾರೆ.

ರೋಗಿಯ ಕುಟುಂಬಸ್ಥರು ಮಾಡಿದ ಮನವಿಯನ್ನು ಮೊದಲು ಪ್ರೈಮರಿ ಬೋರ್ಡ್ ಪರಿಶೀಲನೆ ನಡೆಸಿ ವರದಿ ನೀಡುತ್ತದೆ. ಆ ವರದಿಯನ್ನು ಸೆಕೆಂಡರಿ ಬೋರ್ಡ್ ಪರಿಶೀಲನೆ ನಡೆಸುತ್ತದೆ. ಬಳಿಕ ಕೋರ್ಟ್​​ಗೆ ವರದಿಯ ಪ್ರತಿ ನೀಡಲಾಗುತ್ತದೆ. ಕೋರ್ಟ್ ಅನುಮತಿ ನೀಡಿದ ಬಳಿಕ ರೋಗಿಯ ಲೈಫ್ ಸಪೋರ್ಟ್ ಸಿಸ್ಟಮ್ ಅನ್ನು ವೈದ್ಯರು ತೆಗೆಯಲಾಗುತ್ತದೆ
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆಳ್ಳಂಬೆಳಗ್ಗೆ ಕೃಷಿ ಇಲಾಖೆ ಅಧಿಕಾರಿ ಎಡಿ ಚಂದ್ರಕಾಂತ್ ಮನೆ ಮೇಲೆ ಲೋಕಾಯುಕ್ತ ದಾಳಿ.!ದೆಹಲಿ ಪೊಲೀಸ್ ನೇಮಕಾತಿಗೆ ಅರ್ಜಿ ಆಹ್ವಾನ14-10-2025 ದಿನದ ಮಂಡಕ್ಕಿ ಒಗ್ಗರಣೆ –ಮಿರ್ಚಿ..!ವಚನ.: -ಉರಿಲಿಂಗದೇವ  .!'ಸರ್ಕಾರಿ ಸ್ಥಳದಲ್ಲಿ ಆರ್ ಎಸ್ ಎಸ್ ಚಟುವಟಿಕೆ ನಿರ್ಬಂಧ' - ಪರಿಶೀಲಿಸಲು ಮುಖ್ಯಕಾರ್ಯದರ್ಶಿಗೆ ಮುಖ್ಯಮಂತ್ರಿ ಸೂಚನೆಕರೂರು ಕಾಲ್ತುಳಿತ ದುರಂತ: ಸಿಬಿಐಗೆ ವಹಿಸಿ ಸುಪ್ರೀಂ ಕೊರ್ಟ್ ಆದೇಶ'ಊಟಕ್ಕೆ ಸೇರುವುದೇ ದೊಡ್ಡ ಅಪರಾಧವೇ'-ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನೆ'ಸಿಎಂ ಕರೆದ ಭೋಜನ ಮೀಟಿಂಗ್‌ಗೂ, ಅಧಿಕಾರ ಬದಲಾವಣೆಗೂ ಸಂಬಂಧವಿಲ್ಲ' -ಪರಮೇಶ್ವರ್‌ಗಾಜಾ ಯುದ್ಧ ಅಂತ್ಯ: ಇಸ್ರೇಲ್‌ನ 7 ಒತ್ತೆಯಾಳುಗಳನ್ನ ಬಿಡುಗಡೆಗೊಳಿಸಿದ ಹಮಾಸ್ಎಲ್‌ಒಸಿಯಲ್ಲಿ ಭಯೋತ್ಪಾದಕರ ಲಾಂಚ್ ಪ್ಯಾಡ್‌ಗಳು ಸಕ್ರಿಯ; ಬಿಎಸ್‌ಎಫ್ ಕಟ್ಟೆಚ್ಚರ