LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಬೆಟ್ಟಿಂಗ್ ದಂಧೆ ನಿಯಂತ್ರಣಕ್ಕೆ ಹೊಸ ಮಸೂದೆ ಜಾರಿ - ರಾಜ್ಯ ಸರ್ಕಾರ ಚಿಂತನೆ

ಬೆಂಗಳೂರು : ರಾಜ್ಯದಲ್ಲಿ ಬೆಟ್ಟಿಂಗ್ ದಂಧೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇದೀಗ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ಬೆಟ್ಟಿಂಗ್ ದಂಧೆ ನಿಯಂತ್ರಣಕ್ಕೆ ಇದೀಗ ಹೊಸ ಮಸೂದೆಯನ್ನು ಜಾರಿಗೆ ತರುವ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ. ಬೆಟ್ಟಿಂಗ್ ನಿಯಂತ್ರಣಕ್ಕೆ ಪ್ರಾಧಿಕಾರ ರಚನೆ ಮಾಡಲು ಉದ್ದೇಶಿಸಿದ್ದು, ಆನ್ ಲೈನ್ ಮೂಲಕ ನಡೆಯುವ ಎಲ್ಲಾ ಆಟಗಳ ಮೇಲೆ ಸರಕಾರ ನಿಗಾ ಇಡಲಿದೆ.

ಮುಂಬರಲಿರುವ ವಿಧಾನ ಮಂಡಲ ಅಧಿವೇಶನದಲ್ಲಿ ಬೆಟ್ಟಿಂಗ್ ನಿಯಂತ್ರಣಕ್ಕೆ ಹೊಸ ಮಸೂದೆ ಮಂಡಿಸಲು ತೀರ್ಮಾನಿಸಿದೆ ಎಂದು ತಿಳಿದು ಬಂದಿದೆ. ಹೊಸ ಮಸೂದೆಯ ಅನ್ವಯ ಯಾವುದೇ ಆಟ, ಸ್ಪರ್ಧೆ ಅದೃಷ್ಟದಿಂದ ಗೆಲ್ಲುವ ಹಾಗಿದ್ದರೆ ಆ ರೀತಿಯ ಆಟಗಳನ್ನು ನಿಷೇಧ ಮಾಡಲಾಗುತ್ತದೆ. ಆದರೆ, ಆಟ (ಗೇಮ್) ಸ್ಕಿಲ್ ಹೊಂದಿರುವ ಆನ್‌ಲೈನ್ ಗೇಮಿಂಗ್‌ಗೆ ವಿನಾಯಿತಿ ನೀಡಲಾಗಿದ್ದು, ಆಟ ಆಡುವವರ ಕೌಶಲ್ಯದ ಮೇಲೆ ಗೆಲುವು ನಿರ್ಧಾರವಾಗುವುದಿದ್ದರೆ ಅವುಗಳನ್ನ ನಿಷೇಧ ಮಾಡಲಾಗುವುದಿಲ್ಲ. ಆದರೆ, ಈ ಆಟಗಳು ಸರಿಯಾದ ಪರವಾನಗಿಯನ್ನು ಹೊಂದಿರಬೇಕು. ಇಲ್ಲದಿದ್ದಲ್ಲಿ ಅವುಗಳಿಗೂ ನಿಷೇಧ ಹೇರಲಾಗುತ್ತದೆ ಎಂದು ಹೇಳಲಾಗಿದೆ. ಕಾನೂನು ಬಾಹಿರ ಬೆಟ್ಟಿಂಗ್ ಚಟುವಟಿಕೆ ಮೇಲೆ ನಿಗಾ ಇಡುವುದರ ಜೊತೆಗೆ ಆನ್‌ಲೈನ್‌ ಬೆಟ್ಟಿಂಗ್‌ನ ಅಪಾಯಗಳ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕೆಲಸ ಮಾಡಲು ಸರಕಾರ ಮುಂದಾಗಿದೆ.

ಮಸೂದೆಯಲ್ಲಿ ಏನೇನಿದೆ?
ಸರಕಾರದ ನಿಯಮಗಳನ್ನು ಉಲ್ಲಂಘನೆ ಮಾಡಿದರೆ ಮೂರು ವರ್ಷ ಕಾರಾಗೃಹ ಶಿಕ್ಷೆ, 5 ಲಕ್ಷ ರೂ. ವರೆಗೆ ದಂಡ ವಿಧಿಸಲಾಗುತ್ತದೆ. ಹಾಗೆಯೇ ಆನ್‌ಲೈನ್ ಬೆಟ್ಟಿಂಗ್‌ಗೆ ಜಾಹೀರಾತು ಮೂಲಕ ಪ್ರೇರೇಪಿಸುವ, ವ್ಯಕ್ತಿಗಳಿಗೆ 6 ತಿಂಗಳವರೆಗೆ ಜೈಲು ವಾಸ ಶಿಕ್ಷೆ ಹಾಗೂ 10ಸಾವಿರ ರೂಪಾಯಿಯ ವರೆಗೆ ದಂಡ ಹಾಕಲಾಗುತ್ತದೆ ಎಂದು ಮಸೂದೆಯಲ್ಲಿ ಉಲ್ಲೇಖಿಸಲಾಗಿದೆ ಎಂದು ತಿಳಿದು ಬಂದಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026