E-PAPER
17 Nov 2026, 12:18:11 AM|
Gold₹13462/gGold24K ₹13,462/g - 22K ₹12,329/gTap for full details
Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEditorialEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಕೇಂದ್ರ ಸಚಿವರೊಂದಿಗೆ ರಾಜ್ಯ ಮಹಿಳಾ ಅಭಿವೃದ್ಧಿ ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳ್ಕರ್ ಚರ್ಚೆ

ನವದೆಹಲಿ-೦೧: ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವರಾದ ಲಕ್ಷ್ಮೀ ಆರ್. ಹೆಬ್ಬಾಳ್ಕರ್ ಅವರು ಸೋಮವಾರ ನವದೆಹಲಿಯಲ್ಲಿ ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಅನ್ನಪೂರ್ಣ ದೇವಿ ಅವರನ್ನು ಭೇಟಿ ಮಾಡಿ ಇಲಾಖೆಯ ಬಲವರ್ಧನೆಗೆ ಸಂಬಂಧಿಸಿದ ವಿವಿಧ ಪ್ರಸ್ತಾವನೆಗಳನ್ನು ಸಲ್ಲಿಸಿದರು.

ರಾಜ್ಯದ ಎಲ್ಲಾ ಅಂಗನವಾಡಿ ಕೇಂದ್ರಗಳನ್ನು ಉನ್ನತೀಕರಿಸಲು, ಮಕ್ಕಳಿಗೆ ಪೌಷ್ಠಿಕ ಆಹಾರ ಮತ್ತು ಗುಣಮಟ್ಟದ ಶಿಕ್ಷಣ ನೀಡಲು ಇಲಾಖೆ ಅಗತ್ಯ ಕ್ರಮ ಕೈಗೊಂಡಿದೆ. ಅಂಗನವಾಡಿ ಕೇಂದ್ರಗಳಲ್ಲೇ ಪೂರ್ವ ಪ್ರಾಥಮಿಕ ಶಿಕ್ಷಣ (ಎಲ್ ಕೆಜಿ, ಯುಕೆಜಿ) ನೀಡಲು ಅಗತ್ಯವಿರುವ ಅನುದಾನವನ್ನು ಬಿಡುಗಡೆ ಮಾಡುವಂತೆ ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳ್ಕರ್ ಅವರು ಕೇಂದ್ರ ಸಚಿವರಲ್ಲಿ ಮನವಿ ಮಾಡಿದರು.

ಕೇಂದ್ರ ಸಹಭಾಗಿತ್ವದ ವಿವಿಧ ಯೋಜನೆಗಳ ಜಾರಿಗೆ ರಾಜ್ಯಕ್ಕೆ ಬಿಡುಗಡೆ ಆಗಬೇಕಿರುವ ಅನುದಾನವನ್ನು ತುರ್ತಾಗಿ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿದರಲ್ಲದೆ, ಅಂಗನವಾಡಿ ಕೇಂದ್ರಗಳಿಗೆ ಅಗತ್ಯವಿರುವ ಅಕ್ಕಿ, ಗೋಧಿಯನ್ನು ಕೂಡಲೇ ಬಿಡುಗಡೆ ಮಾಡಲು ಕ್ರಮ ಕೈಗೊಳ್ಳಬೇಕೆಂದು ಕೇಂದ್ರ ಸಚಿವರಲ್ಲಿ ಮನವಿ ಮಾಡಿದರು.

ಅಂಗನವಾಡಿ ಕೇಂದ್ರಗಳಲ್ಲಿ ಶೌಚಾಲಯ, ಕುಡಿಯುವ ನೀರು, ವಿದ್ಯುತ್ ಸೌಕರ್ಯ ಸೇರಿದಂತೆ ಮೂಲಸೌಕರ್ಯಗಳ ಅಭಿವೃದ್ಧಿಗೆ ಕೇಂದ್ರದಿಂದ ಅನುದಾನದ ನೆರವು ಅಗತ್ಯವಿದೆ. ಹಾಗಾಗಿ, ಜರೂರಾಗಿ ಅನುದಾನವನ್ನು ಬಿಡುಗಡೆ ಮಾಡಬೇಕು. ಪ್ರಮುಖವಾಗಿ ರಾಜ್ಯದಲ್ಲಿ ಹೊಸದಾಗಿ ಸೃಜನೆಗೊಂಡ ತಾಲ್ಲೂಕುಗಳಿಗೆ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿ ಮತ್ತು ವಿವಿಧ ಸೌಲಭ್ಯಗಳನ್ನು ಕೂಡಲೇ ಮಂಜೂರು ಮಾಡುವಂತೆ ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳ್ಕರ್ ಅವರು ಕೇಂದ್ರ ಸಚಿವರಲ್ಲಿ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಡಾ. ಜಿ.ಸಿ. ಪ್ರಕಾಶ್, ಸಚಿವರ ವಿಶೇಷ ಕರ್ತವ್ಯಾಧಿಕಾರಿ ಬಿ.ಎಚ್. ನಿಶ್ಚಲ್ ಸೇರಿದಂತೆ ಕೇಂದ್ರ ಸಚಿವಾಲಯದ ಹಿರಿಯ ಅಧಿಕಾರಿಗಳು ಉಪಸ್ಥಿತಿರಿದ್ದರು.
----
ಕೋಟ್ -

ಹಲವು ಬೇಡಿಕೆಗಳ ಕುರಿತು ಪ್ರಸ್ತಾವನೆ ಸಲ್ಲಿಸಲಾಗಿದೆ. ಎಲ್ಲ ಮಾಹಿತಿಗಳನ್ನು ಅತ್ಯಂತ ತಾಳ್ಮೆಯಿಂದ ಪಡೆದುಕೊಂಡಿರುವ ಕೇಂದ್ರ ಸಚಿವರಿಂದ ಸಕಾರಾತ್ಮಕ ಪ್ರತಿಕ್ರಿಯೆ ವ್ಯಕ್ತವಾಗಿದೆ
-ಲಕ್ಷ್ಮೀ ಹೆಬ್ಬಾಳಕರ್, ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
Comments (0)
Comments appear after approval.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬೆನಕನಹಳ್ಳಿಯಲ್ಲಿ ಪುನಶ್ಚೇತನಗೊಂಡ 988ನೇ ಕೆರೆಗೆ ಲಕ್ಷ್ಮೀ ಹೆಬ್ಬಾಳಕರ್ ಬಾಗಿನ ಅರ್ಪಣೆ ಕೆರೆಗಳ ಪುನಶ್ಚೇತನದಿಂದ ಅಂತರ್ಜಲ ವೃದ್ಧಿ, ರೈತರಿಗೆ ಅನುಕೂಲ: ಲಕ್ಷ್ಮೀ ಹೆಬ್ಬಾಳಕರ್ಹಿರೇಹಟ್ಟಿಹೊಳಿ ಗ್ರಾಮದಲ್ಲಿ ಪುನರ್ವಸತಿ ವಸತಿ ಯೋಜನೆಗೆ ಚಾಲನೆಮಹಾದೇವ ಭಾಂದುರ್ಗೆ ನಿಧನಸಮಾಜಕ್ಕೆ ಉತ್ತಮ ಸಂದೇಶ ನೀಡುವ ಗುಣಮಟ್ಟದ ಚಿತ್ರಗಳು ನಿರ್ಮಾಣವಾಗಲಿ : ಮಾಜಿ ಶಾಸಕ ವಿ.ಐ. ಪಾಟೀಲ್ನಿನ್ನೆ ನಡೆದ  ಗೋಕಾಕ್ ಬಳಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ! ಸ್ಥಳದಲ್ಲೇ ಮೂವರ ಸಾವು, ನಾಲ್ವರ ಸ್ಥಿತಿ ಗಂಭೀರಬೆಳಗಾವಿ ಮಹಾನಗರ ಪಾಲಿಕೆಯ ಸ್ವಚ್ಛತಾ ವಾಹನಗಳ ಚಾಲಕರ ಪ್ರತಿಭಟನೆಕೋಡಿಹಳ್ಳಿ ಚಂದ್ರಶೇಖರ್ ಸುದ್ದಿ ಗೋಷ್ಠಿಬೆಳಗಾವಿಯಲ್ಲಿ ಅಲ್ಪಾವಯೊಲೆಟ್‌ನ 10ನೇ ಎಕ್ಸ್‌ಪೀರಿಯನ್ಸ್ ಸೆಂಟರ್ ಆರಂಭಕೆಎಸ್ಐಐಡಿಸಿ ರಾಜ್ಯ ನಿರ್ದೇಶಕರಾಗಿ ಮಲ್ಲೇಶ್ ಚೌಗುಲೆ ನೇಮಕಕಷ್ಟ-ಸುಖಗಳಲ್ಲೂ ಸಮಭಾವ ಕಂಡುಕೊಳ್ಳಬೇಕು. ಯುವಜನತೆ ಬದುಕಿನ ಸಾರ್ಥಕತೆ ಅರಿತು ಶ್ರೇಷ್ಠ ಸಾಧಕರಾಗಲಿ: ಬಸವರಾಜ ಬೊಮ್ಮಾಯಿ.