Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಪಕ್ಷದ ನಿಷ್ಠರಿಗೆ ಸ್ಥಾನಮಾನ ಖಚಿತ-ಮಾಜಿ ಸಚಿವ ಆಂಜನೇಯ

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ: 
ಕಾಂಗ್ರೆಸ್ ಪಕ್ಷದ ಕಟ್ಟಾಳು
, ನಿಷ್ಠಾವಂತ ನಾಯಕ ಬಿ.ಕೆ.ಹರಿಪ್ರಸಾದ್ ಅವರು ಕೆಪಿಸಿಸಿ ಅಧ್ಯಕ್ಷರಾಗಿ ಆಯ್ಕೆಯಾಗಿರುವುದು ರಾಜ್ಯ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಹೊಸ ಸಂಚಲನ ಮೂಡಿಸಿದೆ ಎಂದು ಮಾಜಿ ಸಚಿವ ಎಚ್.ಆಂಜನೇಯ ಹೇಳಿದ್ದಾರೆ.

ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಹಲವು ಜವಾಬ್ದಾರಿಗಳನ್ನು ಸಮರ್ಥವಾಗಿ ನಿರ್ವಹಿಸಿರುವ ಬಿ.ಕೆ.ಹರಿಪ್ರಸಾದ್ ಆಯ್ಕೆ ಉತ್ತಮವಾಗಿದ್ದು, ಕಾಂಗ್ರೆಸ್ ಪಾಳಯದಲ್ಲಿ ಹೊಸ ಹುರುಪು ಮೂಡಿಸಿದೆ ಎಂದಿದ್ದಾರೆ.

ಬಿ.ಕೆ.ಹರಿಪ್ರಸಾದ್ ಕಟ್ಟಾ ಕಾಂಗ್ರೆಸ್ಸಿಗ. ಪಕ್ಷಕ್ಕೆ ತಮ್ಮ ಜೀವನವನ್ನೇ ಮುಡಿಪಾಗಿಟ್ಟ ನಿಷ್ಠಾವಂತ. ವಿದ್ಯಾರ್ಥಿ, ಯುವ, ಸೇವಾದಳ ಬಳಿಕ ರಾಷ್ಟ್ರಮಟ್ಟದಲ್ಲಿ ಯುವ ಕಾಂಗ್ರೆಸ್ ಸಂಘಠನೆ ಜವಾಬ್ದಾರಿ ಬಳಿಕ ಎಐಸಿಸಿ ಕಾರ್ಯದರ್ಶಿ, ಪ್ರಧಾನ ಕಾರ್ಯದರ್ಶಿ, ನಾಲ್ಕೈದು ರಾಜ್ಯಗಳ ಉಸ್ತುವಾರಿ, ರಾಜ್ಯಸಭಾ ಸದಸ್ಯರಾಗಿ ರಾಷ್ಟ್ರಮಟ್ಟದಲ್ಲಿ ಗಮನಸೆಳೆದ ನಾಯಕ. ವಿಧಾನಪರಿಷತ್ ಪ್ರತಿಪಕ್ಷ ನಾಯಕರಾಗಿ ಸೇವೆ ಸಲ್ಲಿಸಿರುವ ಹರಿಪ್ರಸಾದ್, ಎಂತಹ ಕಷ್ಟಕಾದಲ್ಲೂ ಪಕ್ಷದ ಸಿದ್ಧಾಂತ ಹಾಗೂ ದೇಶದ ಹಿತಕ್ಕೆ ಧಕ್ಕೆ ಬಾರದಂತೆ ಬದ್ಧತೆ ರಾಜಕಾರಣ ಮಾಡಿದವರು. ಸಂಘಟನಾ ಕ್ಷೇತ್ರದಲ್ಲಿ ಅಪಾರ ಅನುಭವ ಹೊಂದಿರುವ ಹಿರಿಯ ನಾಯಕರಿಗೆ ಕೆಪಿಸಿಸಿ ಸಾರಥ್ಯ ನೀಡಿರುವುದು ಅತ್ಯಂತ ಸೂಕ್ತ ನಿರ್ಧಾರ ಎಂದು ಹೇಳಿದ್ದಾರೆ.

ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆ ಹಾಗೂ 2028ರ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಗೆಲುವಿಗೆ ಹರಿಪ್ರಸಾದ್ ನೇತೃತ್ವ ದಿಕ್ಸೂಚಿಯಾಗಲಿದೆ. ಬೂತ್ ಮಟ್ಟದಿಂದ ರಾಜ್ಯ ಮಟ್ಟದವರೆಗೆ ಪಕ್ಷ ಸಂಘಟನೆಯಲ್ಲಿ ಹರಿಪ್ರಸಾದ್ ನೈಪುಣ್ಯತೆ ಹೊಂದಿದ್ದಾರೆ. ಎಲ್ಲ ಬಣಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷ ಕಟ್ಟುವ ಚಾಕಚಕ್ಯತೆ ಅವರಿಗಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಮುಖ್ಯವಾಗಿ ಸರ್ಕಾರದ ವಿವಿಧ ಮಂಡಳಿ, ನಿಗಮಗಳ ಅಧ್ಯಕ್ಷ, ನಿರ್ದೇಶಕ, ಸದಸ್ಯ ಹಾಗೂ ಜಿಲ್ಲಾ-ತಾಲ್ಲೂಕು ಮಟ್ಟದಲ್ಲಿನ ಸರ್ಕಾರಿ ಸಂಸ್ಥೆಗಳಿಗೆ ನಾಮನಿರ್ದೇಶನ ಸೇರಿ ವಿವಿಧ ಸ್ಥಾನಗಳನ್ನು ಪಕ್ಷಕ್ಕಾಗಿ ದುಡಿದ ನಿಷ್ಠಾವಂತ ಕಾರ್ಯಕರ್ತರಿಗೆ ಕೊಡಿಸುವಲ್ಲಿ ಹರಿಪ್ರಸಾದ್ ವಿಶೇಷ ಶ್ರಮವಹಿಸಲಿದ್ದಾರೆಂದು  ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇದುವರೆಗೆ ಕಡೆಗಣಿಸಲ್ಪಟ್ಟಿದ್ದ ತಳಮಟ್ಟದ ಕಾರ್ಯಕರ್ತರಿಗೆ ನ್ಯಾಯ ಸಿಗಲಿದೆ. ಜೊತೆಗೆ ಕೆಪಿಸಿಸಿಯ ವಿವಿಧ ಘಟಕ, ಜಿಲ್ಲಾ-ಬ್ಲಾಕ್ ಪದಾಧಿಕಾರಿ ಸ್ಥಾನಗಳು ಸಂಘಟಕರಿಗೆ, ಪಕ್ಷದ ನಿಷ್ಠರಿಗೆ ಲಭಿಸಲಿವೆ. ಇದರಿಂದ ಕಾರ್ಯಕರ್ತರಲ್ಲಿ ಉತ್ಸಾಹ ಹೆಚ್ಚಿ ಪಕ್ಷ ಮತ್ತಷ್ಟು ಬಲಗೊಳ್ಳಲಿದೆ ಎಂದಿದ್ದಾರೆ.

news_1780581028_7_988.webp

 

ಕರ್ನಾಟಕದಲ್ಲಿ ಹದಿನೈದು ದಿನಗಳಿಂದ  ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳು‌ಇಡೀ ದೇಶವನ್ನೇ ತನ್ನೆಡೆಗೆ ಸೆಳೆದಿದೆ. ಸಿಎಂ ಹುದ್ದೆಯನ್ನೇ ತ್ಯಾಗ ಮಾಡಿದಸಿದ್ದರಾಮಯ್ಯ, ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದಲ್ಲಿ ಹಿರಿಯರು, ಅಹಿಂದ ವರ್ಗಕ್ಕೆ ಮನ್ನಣೆ, ಮುಖ್ಯವಾಗಿ ಕೆಪಿಸಿಸಿ ಸಾರಥ್ಯವನ್ನು ಪಕ್ಷದ ಕಟ್ಟಾಳು ಹರಿಪ್ರಸಾದ್ ಅವರಿಗೆ ವಹಿಸಿರುವುದು ಪಕ್ಷದ ಕಾರ್ಯಕರ್ತರಲ್ಲಿ ಸಂಚಲನಕ್ಕೆ ಕಾರಣವಾಗಿದೆ. ಪಕ್ಷದ ಕೆಲಸವನ್ನು ನಿಷ್ಠೆಯಿಂದ ಮಾಡಿಕೊಂಡು ಬರುವ ಯಾವುದೇ ವ್ಯಕ್ತಿಗೆ ವರಿಷ್ಠರು ಬಹುದೊಡ್ಡ ಜವಾಬ್ದಾರಿಯನ್ನು ಸದ್ದಿಲ್ಲದೆ ನೀಡಿ ಅಚ್ಚರಿ ಮೂಡಿಸುತ್ತಾರೆಂಬುದಕ್ಕೆ ಹರಿಪ್ರಸಾದ್ ಆಯ್ಕೆ ಉತ್ತಮ ಉದಾಹರಣೆ ಆಗಿದೆ.

ಒಟ್ಟಾರೆ ಹರಿಪ್ರಸಾದ್ ಅವರಿಗೆ ಕೆಪಿಸಿಸಿ ಸಾರಥ್ಯ ಒಲಿದಿರುವುದು ಕಾಂಗ್ರೆಸ್‌ಗೆ ಹೊಸ ಚೈತನ್ಯ ತುಂಬಿದ್ದು, ಮುಂಬರುವ ಚುನಾವಣೆಗಳಿಗೆ ಪಕ್ಷ ಈಗಿನಿಂದಲೇ ಸಜ್ಜಾಗುವ ಸೂಚನೆ ನೀಡಿದೆ ಎಂದು ಆಂಜನೇಯ ತಿಳಿಸಿದ್ದಾರೆ.

 

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಕ್ಷಣಕ್ಕೆ ಹೆಚ್ಚಿನ ಒತ್ತು ಕೊಡಬೇಕು : ಜಿಲ್ಲಾ ಉಸ್ತುವಾರಿ ಸಚಿವರು ಟಿ ರಘುಮೂರ್ತಿಸಾಂಸ್ಕೃತಿಕ ನೆಲೆಗಟ್ಟಿನ ಮೇಲೆ ಕಾಡುಗೊಲ್ಲರ ಬದುಕು - ಸಣ್ಣಚಿತ್ತಯ್ಯ ಸಾರ್ವಜನಿಕ ಗಣೇಶೋತ್ಸವಕ್ಕೆ ಹಂದರಗಂಭ ಪೂಜೆನೂತನ ಬಸ್ ನಿಲ್ದಾಣ ಲೋಕಾರ್ಪಣೆ ನೆರವೇರಿಸಿದ ಸಚಿವ ಟಿ.ರಘುಮೂರ್ತಿ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಅತ್ಯಾಧುನಿಕ ಕ್ರೀಡಾ ಸೌಲಭ್ಯಗಳ ಉದ್ಘಾಟನೆಬೆಳೆ ಸಮೀಕ್ಷೆದಾರರ ಬೇಡಿಕೆ ಈಡೇರಿಕೆಗೆ ಕ್ರಮ: ಸರ್ಕಾರದೊಂದಿಗೆ ಚರ್ಚಿಸುವ ಭರವಸೆ ನೀಡಿದ ಸಚಿವ ರಘುಮೂರ್ತಿದೇವಾಲಯ ನಿರ್ಮಾಣ ಪವಿತ್ರ ಕಾರ್ಯ - ಟಿ. ರಘುಮೂರ್ತಿಡಾ.ಹೇಮಂತರಾಜು ರವರ ನಾನು ನೀನು ಮತ್ತು ಸ್ಕಿಜೋಫ್ರೇನಿಯಾ ಕವನ ಸಂಕಲನ ಲೋಕಾರ್ಪಣೆಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಇತಿಹಾಸ ಬರೆದ ಭಾರತದ ಶೂಟಿಂಗ್ ತಾರೆ ಮನು ಭಾಕರ್ಪ್ಯಾರಾ ಕಾಮನ್‌ವೆಲ್ತ್‌ನಲ್ಲಿ ಪದಕ ಗೆದ್ದು ಇತಿಹಾಸ ಬರೆದ ಕೆ.ಎಸ್. ಶಿಲ್ಪಾ