Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ವಿಚಿತ್ರ ಕಳ್ಳತನ : ದೇವರ ಕ್ಷಮೆ ಕೋರಿ ದೇವಾಲಯದ ಹುಂಡಿ ದೋಚಿದ ಕಳ್ಳರು…!

ನಾಗಪುರ : ವಿಚಿತ್ರ ಕಳ್ಳತನದ ಘಟನೆ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಕಳ್ಳತನಕ್ಕೂ ಮುನ್ನ ದೇವರ ಮುಂದೆ ಕ್ಷಮೆ ಕೋರಿ ಇಬ್ಬರು ಅಪರಿಚಿತರು ಬಳಿಕ ದೇವಾಲಯಗಳ ಹುಂಡಿಗಳನ್ನು ಒಡೆದು ಹಣ ದೋಚಿ ಪರಾರಿಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಈ ಘಟನೆಯು ಮಹಾರಾಷ್ಟ್ರದ ನಾಗಪುರದಲ್ಲಿ ನಡೆದಿದೆ.
ಈ ಕಳ್ಳತನವು ನಾಗಪುರದ ಮಾಲ್ಧಕ್ಕಾ ಪ್ರದೇಶದಲ್ಲಿರುವ ಶೀತ್ಲಾ ಮಾತಾ ದೇವಾಲಯ ಹಾಗೂ ಶಿವ ದೇವಾಲಯಗಳಲ್ಲಿ ನಡೆದಿದೆ. ದೇವಾಲಯದ ಉಸ್ತುವಾರಿ ನೋಡಿಕೊಳ್ಳುತ್ತಿದ್ದ ವ್ಯಕ್ತಿ ಜುಲೈ 27ರ ಸಂಜೆ ದೇವಾಲಯದ ಬಾಗಿಲುಗಳನ್ನು ಬೀಗ ಹಾಕಿ ತೆರಳಿದ್ದರು. ಆದರೆ ಮರುದಿನ ಬೆಳಗ್ಗೆ ದೇವಾಲಯಕ್ಕೆ ಬಂದಾಗ ಮುಖ್ಯ ದ್ವಾರದ ಬೀಗ ಮುರಿದಿರುವುದು ಕಂಡುಬಂದಿದೆ.

ಅವರು ಒಳಗೆ ಪ್ರವೇಶಿಸಿದಾಗ ಎರಡೂ ದೇವಾಲಯಗಳ ಹುಂಡಿಗಳ ಬೀಗಗಳನ್ನು ಒಡೆದು, ಅದರಲ್ಲಿದ್ದ ನಗದನ್ನು ಕಳವು ಮಾಡಿರುವುದು ಪತ್ತೆಯಾಗಿದೆ.
ನಂತರ ದೇವಾಲಯದ ಒಳಗಿನ ಸಿಸಿಟಿವಿ ದೃಶ್ಯಾವಳಿ ಪರಿಶೀಲಿಸಿದಾಗ ರಾತ್ರಿ ವೇಳೆ ಇಬ್ಬರು ಅಪರಿಚಿತರು ದೇವಾಲಯದೊಳಗೆ ಪ್ರವೇಶಿಸಿರುವುದು ದಾಖಲಾಗಿದೆ. ವಿಚಿತ್ರವೆಂದರೆ ಕಳ್ಳತನ ನಡೆಸುವ ಮೊದಲು ಆರೋಪಿಗಳಲ್ಲಿ ಒಬ್ಬಾತ ದೇವರ ಎದುರು ಕೈಮುಗಿದು, ಕಿವಿ ಹಿಡಿದು ಕ್ಷಮೆ ಯಾಚಿಸಿದ್ದಾನೆ. ಅದೇ ಸಮಯದಲ್ಲಿ ಆತನ ಸಹಚರ ಹುಂಡಿಯ ಬೀಗ ಮುರಿದಿದ್ದಾನೆ.ʼ


ಮತ್ತೊಬ್ಬ ಸುತ್ತಮುತ್ತ ಯಾರಾದರೂ ಬರುತ್ತಿದ್ದಾರೆಯೇ ಎಂದು ನಿಂತು ನೋಡುತ್ತಿದ್ದಾನೆ. ಬಳಿಕ ಇಬ್ಬರೂ ಹುಂಡಿಗಳ ಬೀಗಗಳನ್ನು ಒಡೆದು, ಅದರಲ್ಲಿದ್ದ ಹಣವನ್ನು ತೆಗೆದುಕೊಂಡು ಸ್ಥಳದಿಂದ ಪರಾರಿಯಾಗಿದ್ದಾರೆ. ದುಷ್ಕರ್ಮಿಗಳು ಅಂದಾಜು ₹6,000 ರಿಂದ ₹7,000 ನಗದನ್ನು ಕದ್ದು ಸ್ಥಳದಿಂದ ಪರಾರಿಯಾಗಿದ್ದಾರೆ ಎನ್ನಲಾಗಿದೆ.
ಘಟನೆ ಸಂಬಂಧ ದೇವಾಲಯದ ಆಡಳಿತ ಮಂಡಳಿಯವರು ನೀಡಿದ ದೂರಿನ ಆಧಾರದ ಮೇಲೆ ಲಕಡ್ಗಂಜ್ ಪೊಲೀಸ್ ಠಾಣೆಯಲ್ಲಿ ಕಳ್ಳತನ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಾ. ಪ್ರಭಾಕರ ಕೋರೆ ಅವರಿಗೆ ಪದ್ಮಶ್ರೀ ಪ್ರಶಸ್ತಿ: ಲಿಂಗಾಯತ ಸಮಾಜದ ವತಿಯಿಂದ ಭವ್ಯ ಸನ್ಮಾನಥ್ರೋ ಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಬೆಳಗಾವಿ ಜಿಎ ಪ್ರೌಢಶಾಲೆಯ ಬಾಲೆಯರುಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ಪ್ರಕಟ ಜಿಲ್ಲೆಯ ಉತ್ತಮ ಶಿಕ್ಷಕರಿಗೆ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿಬೈಕ್ ಕಳ್ಳನನ್ನು ಬಂಧಿಸಿದ ಪೊಲೀಸರುಭೀಕರ ರಸ್ತೆ ಅಪಘಾತ: ಇಬ್ಬರು ಯುವಕರ ದುರ್ಮರಣಪ್ರಜಾಪಿತ ಬ್ರಹ್ಮಾಕುಮಾರಿ ಶಹಾಪುರ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮಾಚರಣೆಸುರಂಗದಲ್ಲಿ 9 ದಿನ ಹರೇ ಕೃಷ್ಣ ಪಠಿಸುತ್ತಿದ್ದವ ಜನ್ಮಾಷ್ಟಮಿಯಂದು ಹೊರಬಂದಎರಡೇ ತಿಂಗಳಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಇಬ್ಬಾಗ: ಅಸ್ತಿತ್ವಕ್ಕೆ ಬಂತು ಹೊಸ ಬಣ!ಅಯೋಧ್ಯೆ ದೇಗುಲದ ಅಭಿವೃದ್ಧಿಗೆ ಭಕ್ತಾದಿಗಳ ಬೆಂಬಲ ಕೋರಿದ ರಾಮಮಂದಿರದ ನೂತನ ಸಿಇಒ