LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ರಾಜ್ಯದ ಸರ್ಕಾರಿ ಇಲಾಖೆಗಳಲ್ಲಿ ಕನ್ನಡ ಕಡ್ಡಾಯ: ತಪ್ಪಿದಲ್ಲಿ ಕಠಿಣ ಕ್ರಮ

ಕರ್ನಾಟಕದಲ್ಲಿ ಇಂದಿಗೂ ಕನ್ನಡ ಭಾಷೆ ಸಮಗ್ರ ಅಭಿವೃದ್ಧಿ ಕಾಯ್ದೆ ಸಮರ್ಪಕವಾಗಿ ಅನುಷ್ಠಾನವಾಗಿಲ್ಲ, ಈಗಾಗಲೇ ಅಂಗಡಿ ಮುಂಗಟ್ಟುಗಳ ಬೋರ್ಡ್ ನಲ್ಲಿ ಶೇ 60ರಷ್ಟು ಕನ್ನಡ ಇರಬೇಕೆಂದು ರಾಜ್ಯ ಸರ್ಕಾರ ಆದೇಶಿಸಿದೆ. ಅದು ಸರಿಯಾಗಿ ಅನುಷ್ಠಾನವಾಗಿಲ್ಲ. ಇದರ ನಡುವೆ ಇದೀಗ ರಾಜ್ಯ ಸರ್ಕಾರ, ಸರ್ಕಾರದ ಎಲ್ಲಾ ಇಲಾಖೆಗಳಲ್ಲೂ ಕನ್ನಡವನ್ನು ಪೂರ್ಣ ಪ್ರಮಾಣದಲ್ಲಿ ಬಳಸುವಂತೆ ಸುತ್ತೋಲೆ ಹೊರಡಿಸಿದೆ.

ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್ (ಜೂನ್ 25) ಈ ಮಹತ್ವದ ಸುತ್ತೋಲೆ ಹೊರಡಿಸಿದ್ದು ಆಡಳಿತದಲ್ಲಿ ಕನ್ನಡವನ್ನು ಕಡ್ಡಾಯವಾಗಿ ಬಳಸುವಂತೆ ಸೂಚಿಸಿದೆ. ಒಂದು ವೇಳೆ ಸೂಚನೆಗಳನ್ನ ಉಲ್ಲಂಘಿಸಿದರೆ ಅಂತವರ ವಿರುದ್ಧ ವೈಯಕ್ತಿಕವಾಗಿ ಶಿಸ್ತುಕ್ರಮ ತೆಗೆದುಕೊಳ್ಳಲಾಗುವುದು ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ.



ಕನ್ನಡದಲ್ಲಿ ಬರುವ ಎಲ್ಲಾ ಅರ್ಜಿ, ಪತ್ರಗಳಿಗೆ ಕಡ್ಡಾಯವಾಗಿ ಕನ್ನಡದಲ್ಲಿಯೇ ಉತ್ತರಿಸಬೇಕು. ಕಚೇರಿಯ ನಾಮಪಲಕಗಳನ್ನು ಕನ್ನಡದಲ್ಲಿಯೇ ಪ್ರದರ್ಶಿಸಬೇಕು. ವಿಧಾನಮಂಡಲದ ಕಾರ್ಯಕಲಾಪಗಳು, ಪತ್ರ ವ್ಯವಹಾರ, ಗಮನಸೆಳೆಯುವ ಸೂಚನೆಯನ್ನು ಕನ್ನಡದಲ್ಲಿಯೇ ಸಲ್ಲಿಸಬೇಕು. ನೇಮಕಾತಿ, ವರ್ಗಾವಣೆ ಮತ್ತು ರಜೆ ಮಂಜೂರಾತಿ ಇತರೆ ಎಲ್ಲಾ ಸರ್ಕಾರದ ಆದೇಶಗಳನ್ನು ಕನ್ನಡದಲ್ಲಿ ಹೊರಡಿಸಲು ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್‌ ಸುತ್ತೋಲೆಯಲ್ಲಿ ಸೂಚನೆ ನೀಡಿದ್ದಾರೆ.

ಕಛೇರಿಗಳಿಗೆ ಒದಗಿಸಿರುವ ಆಂಗ್ಲ ಭಾಷಾ ನಮೂನೆ, ದಾಖಲೆ ಪುಸ್ತಕ ಮುಂತಾದವುಗಳನ್ನು ಕನ್ನಡದಲ್ಲಿ ಭರ್ತಿ ಮಾಡಬೇಕು. ಆಂತರಿಕ ಪತ್ರ ವ್ಯವಹಾರ, ಕಡತದ ಟಿಪ್ಪಣಿ ಕನ್ನಡದಲ್ಲಿಯೇ ಇರಬೇಕು. ಕೇಂದ್ರ ಸರ್ಕಾರ, ಹೊರ ರಾಜ್ಯಗಳು ಮತ್ತು ನ್ಯಾಯಾಲಯಗಳ ಪತ್ರ ವ್ಯವಹಾರಗಳು ಕನ್ನಡದಲ್ಲಿಯೇ ಇರಬೇಕು ಎಂದು ತಿಳಿಸಲಾಗಿದೆ.

ಆಡಳಿತದಲ್ಲಿ ಭಾಷಾ ನೀತಿಯನ್ನು ಪೂರ್ಣ ಪ್ರಮಾಣದಲ್ಲಿ ಹಾಗೂ ಎಲ್ಲಾ ಹಂತಗಳಲ್ಲಿ ಜಾರಿಗೊಳಿಸುವುದು ಎಲ್ಲ ಅಧಿಕಾರಿಗಳ ನೌಕರರ ಕರ್ತವ್ಯವಾಗಿದೆ. ಆದುದರಿಂದ ಸರ್ಕಾರ/ನಿಗಮ/ಮಂಡಳಿ/ಸ್ಥಳೀಯ ಸಂಸ್ಥೆಗಳ/ವಿಶ್ವವಿದ್ಯಾಲಯಗಳ/ ಅನುದಾನಿತ ಸಂಘ-ಸಂಸ್ಥೆಗಳ ಎಲ್ಲಾ ಅಧಿಕಾರಿ/ ನೌಕರರು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು. ಒಂದು ವೇಳೆ ಸೂಚನೆಗಳನ್ನ ಉಲ್ಲಂಘಿಸಿದರೆ ಅವರ ವಿರುದ್ಧ ವೈಯಕ್ತಿಕವಾಗಿ ಶಿಸ್ತುಕ್ರಮ ತೆಗೆದುಕೊಳ್ಳಲಾಗುವುದು ಎಂದು ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಹೊರಡಿಸಿರುವ ಸುತ್ತೋಲೆಯಲ್ಲಿ ಎಚ್ಚರಿಕೆ ನೀಡಿದ್ದಾರೆ
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026