LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ರಾಜ್ಯ ಸರ್ಕಾರ ಮಾತುಕತೆ ನಡೆಸದಿದ್ದರೆ ಆಗಸ್ಟ್ 5ರಿಂದ ಮುಷ್ಕರ ಫಿಕ್ಸ್ : ಅಖಿಲ ಕರ್ನಾಟಕ ರಸ್ತೆ ಸಾರಿಗೆ ನೌಕರರ ಎಚ್ಚರಿಕೆ

ಬೆಂಗಳೂರು : ರಾಜ್ಯ ಸರ್ಕಾರ ಮಾತುಕತೆ ನಡೆಸದಿದ್ದರೆ ಆಗಸ್ಟ್ 5ರಿಂದ ಮುಷ್ಕರ ನಡೆಸಲಾಗುವುದು ಎಂದು ಅಖಿಲ ಕರ್ನಾಟಕ ರಸ್ತೆ ಸಾರಿಗೆ ನೌಕರರು ಎಚ್ಚರಿಕೆ ನೀಡಿದ್ದಾರೆ.

ಹುಬ್ಬಳ್ಳಿಯಲ್ಲಿ ಸಭೆ ನಡೆಸಿರುವ ಸಾರಿಗೆ ನೌಕರ ಸಂಘರಾಜ್ಯ ಸರ್ಕಾರಕ್ಕೆ ನೋಟಿಸ್ ಮೂಲಕ ಎಚ್ಚರಿಕೆ ನೀಡಿದೆ.

ಸಾರಿಗೆ ನೌಖರರ ಜೊತೆಗೆ ಮಾತುಕತೆ ನಡೆಸದಿದ್ದರೆ ಮುಷ್ಕರ ನಡೆಸುವುದು ಖಚಿತ ಎಂದು ತಿಳಿಸಿದೆ.ಈ ಬಗ್ಗೆ ಸರ್ಕಾರಕ್ಕೆ ನೋಟಿಸ್ ಕೂಡ ನೀಡಿದೆ.

ರಾಜ್ಯ ಸರ್ಕಾರ ಸಾರಿಗೆ ನೌಕರರ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಮಾತುಕತೆ ನಡೆಸಿ ಚರ್ಚೆ ನಡೆಸಬೇಕು. ಇಲ್ಲವಾದಲ್ಲಿ ಆಗಸ್ಟ್ 5ರಿಂದ ರಾಜ್ಯಾದ್ಯಂತ ಒಂದೇ ಒಂದು ಬಸ್ ಕೂಡ ರಸ್ತೆಗೆ ಇಳಿಯಲ್ಲ. ಇದು ಖಚಿತ. ಎಲ್ಲಾ ಸಾರಿಗೆ ನಿಗಮಗಳ ನೌಕರರು ಆಗಸ್ಟ್ 5ರಿಂದ ಅನಿರ್ದಿಷ್ಟಾವದಿ ಮುಷ್ಕರ ನಡೆಸಲಿದ್ದಾರೆ ಎಂದು ಎಚ್ಚರಿಕೆ ನೀಡಿದೆ.

ಇನ್ನು ತಮ್ಮ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಆಗಸ್ಟ್.5ರಿಂದ ಮುಷ್ಕರಕ್ಕೆ ಮುಂದಾಗಿದ್ದ ಸಾರಿಗೆ ನೌಕರರಿಗೆ ಕೆಎಸ್ ಆರ್ ಟಿಸಿ ಶಾಕ್ ನೀಡಿದ್ದು, ಪ್ರತಿಭಟನೆ ನಡೆಸದಂತೆ ಎಸ್ಮಾ ಜಾರಿ ಮಾಡಿದೆ.

ವೇತನ ಪರಿಷ್ಕರಣೆಯ 38 ತಿಂಗಳ ಹಿಂಬಾಕಿ ಪಾವತಿ ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಆಗಸ್ಟ್ 5 ರಿಂದ ಸಾರಿಗೆ ನೌಕರರ ಮುಷ್ಕರಕ್ಕೆ ಕರೆ ನೀಡಲಾಗಿತ್ತು. ಕರ್ನಾಟಕ ಅಗತ್ಯ ಸೇವಾ ನಿರ್ವಹಣಾ ಕಾಯ್ದೆ 2013ರ ಅಡಿ ಎಸ್ಮಾ ಜಾರಿ ಮಾಡಿದ್ದು, 6 ತಿಂಗಳು ಯಾವುದೇ ಮುಷ್ಕರದಲ್ಲಿ ಭಾಗಿಯಾಗದಂತೆ ಎಸ್ಮಾ ಜಾರಿಗೊಳಿಸಲಾಗಿದೆ. ಡಿಸೆಂಬರ್ 31ರವರೆಗೆ ನಿಗಮದಲ್ಲಿ ಮುಷ್ಕರ ನಿರ್ಬಂಧಿಸಿ ಅಧಿಸೂಚನೆ ಹೊರಡಿಸಲಾಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026