ಕೆಎಲ್ಇ ಸಂಸ್ಥೆಯ ಬಿ.ವಿ. ಬೆಲ್ಲದ ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿನಿ ಸಾಧನೆ
ಬೆಳಗಾವಿ : ದಿನಾಂಕ 5 ನವೆಂಬರ್ 2025 ರಂದು ನಡೆದ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ ಹುಬ್ಬಳ್ಳಿಯ ಘಟಿಕೋತ್ಸವ ಸಮಾರಂಭದಲ್ಲಿ 2023-2024ನೇ ಸಾಲಿನಲ್ಲಿ ವಿಶ್ವವಿದ್ಯಾಲಯಕ್ಕೆ ರಾಂಕ್ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ಸಂಸ್ಥೆಯ ವಿದ್ಯಾರ್ಥಿನಿ ಪೂರ್ಣಿಮಾ ಶೆಟ್ಟೆನ್ನವರ್ ಅಂತಿಮ ವರ್ಷದ ಬಿಎ ಎಲ್ ಎಲ್ ಬಿ ವಿದ್ಯಾರ್ಥಿನಿ. ಕನ್ನಡ ವಿಭಾಗದಲ್ಲಿ ವಿಶ್ವವಿದ್ಯಾಲಯಕ್ಕೆ 4 ನೇ ರ್ಯಾಂಕ್ ಪಡೆದಿರುತ್ತಾರೆ. ವಿದ್ಯಾರ್ಥಿನಿಯ ಸಾಧನೆಗೆ ಕೆ. ಎಲ್. ಇ. ಸಂಸ್ಥೆಯ ಕಾರ್ಯಧ್ಯಕ್ಷ ಡಾ. ಪ್ರಭಾಕರ ಕೋರೆ, ಸ್ಥಾನಿಕ ಆಡಳಿತ ಮಂಡಳಿಯ ಸದಸ್ಯರು ಹಾಗು ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಜೆ. ಜಿ. ಹಿರೇಮಠ ಮತ್ತು ಶಿಕ್ಷಕ ಹಾಗೂ ಶಿಕ್ಷಕೇತರ ವೃಂದದವರು ಮತ್ತು ವಿದ್ಯಾರ್ಥಿಗಳು ಶುಭಾಶಯ ಕೋರಿದರು.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.