ಚಿಕ್ಕಮಗಳೂರು: ಕೌಟುಂಬಿಕ ಕಲಹದಿಂದ ಬೇಸತ್ತು ಸಬ್ ಇನ್ಸ್‌ಪೆಕ್ಟರ್ ಪತ್ನಿ ನೇಣಿಗೆ ಶರಣಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಬೀರೂರಲ್ಲಿ ನಡೆದಿದೆ.
ಬೀರೂರು ಠಾಣೆಯ ಠಾಣಾಧಿಕಾರಿ ತಿಪ್ಪೇಶ್ ಅವರ ಪತ್ನಿ ಪದ್ಮ (34) ಮಂಗಳವಾರ ರಾತ್ರಿ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಿಪ್ಪೇಶ್ ಹಾಗೂ ಪದ್ಮ ಪ್ರೀತಿಸಿ ಮದುವೆಯಾಗಿದ್ದು, ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಪದ್ಮ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಪೊಲೀಸರು ಕುಟುಂಬಸ್ಥರ ಆಗಮನಕ್ಕಾಗಿ ಕಾಯುತ್ತಿದ್ದಾರೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡುವ ಸಾಧ್ಯತೆ ಇದೆ.