LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಐಆರ್‌ಎಸ್ ಅಧಿಕಾರಿ ಪವನ್ ಕುಮಾರ್ ಗೋಯಲ್ ಯಶೋಗಾಥೆ

ಹರಿಯಾಣ : ದೇಶದ ಅತ್ಯಂತ ಕಠಿಣ ಪರೀಕ್ಷೆಗಳಲ್ಲಿ ಒಂದಾಗಿರುವ ಯುಪಿಎಸ್‌ಸಿಯಲ್ಲಿ ಒಂದು ಬಾರಿ ಉತ್ತೀರ್ಣರಾಗುವುದೇ ಕಷ್ಟಸಾಧ್ಯ. ಆದರೆ ಎರಡು ಬಾರಿ ಯುಪಿಎಸ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಮೊದಲಿಗೆ ಐಆರ್‌ಎಸ್ ಅಧಿಕಾರಿಯಾಗಿ ಪ್ರಸ್ತುತ ಸಹಾಯಕ ಆದಾಯ ತೆರಿಗೆ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿರುವ ಪವನ್ ಕುಮಾರ್ ಗೋಯಲ್ ಅವರ ಯಶೋಗಾಥೆ ಇದು.

ಹರಿಯಾಣದ ಅಂಬಾಲದಲ್ಲಿ ಪವನ್ ಅವರು ಜನಿಸುತ್ತಾರೆ. ಅವರ ತಂದೆ, ಶಲಭ್ ಗೋಯಲ್ ಅವರು ಪಶ್ಚಿಮ ರೈಲ್ವೆಯಲ್ಲಿ ಅಧಿಕಾರಿಯಾಗಿ ಸೇವೆ ಸಲ್ಲಿಸಿರುತ್ತಾರೆ. ಪವನ್ ಅವರು ಮುಂಬೈನ ಸೇಂಟ್ ಪೀಟರ್ಸ್, ಜಿ.ಡಿ. ಸೋಮಾನಿ ಮೆಮೋರಿಯಲ್ ಶಾಲೆ ಮತ್ತು ದೆಹಲಿಯ ಬಾಲ್ ಭಾರತಿ ಪಬ್ಲಿಕ್ ಸ್ಕೂಲ್‌ನಂತಹ ಪ್ರಸಿದ್ಧ ಸಂಸ್ಥೆಗಳಿಂದ ಶಾಲಾ ಶಿಕ್ಷಣವನ್ನು ಪೂರ್ಣಗೊಳಿಸಿದರು. ನಂತರ ದೆಹಲಿ ತಾಂತ್ರಿಕ ವಿಶ್ವವಿದ್ಯಾಲಯದಿಂದ ಇಲೆಕ್ಟ್ರಿಕಲ್ ಇಂಜಿನಿಯರಿಂಗ್ ಪದವಿಯನ್ನು ಪಡೆದರು.

ಬಳಿಕ ಯುಪಿಎಸ್‌ಸಿ ಪರೀಕ್ಷೆ ಬರೆಯುವ ಹಂಬಲದಿಂದ ತಮ್ಮ ಐಚ್ಛಿಕ ವಿಷಯವಾಗಿ ಸಮಾಜಶಾಸ್ತ್ರವನ್ನು ಆರಿಸಿಕೊಂಡರು. ಮೊದಲಿಗೆ ಯುಪಿಎಸ್‌ಸಿ ಪರೀಕ್ಷೆ ಬರೆದ ಅವರು 131ನೇ ರ‍್ಯಾಂಕ್ ಪಡೆದು ಐಆರ್‌ಎಸ್ ಅಧಿಕಾರಿಯಾಗುವಲ್ಲಿ ಯಶಸ್ವಿಯಾಗುತ್ತಾರೆ. ಬಳಿಕ ಮತ್ತೊಮ್ಮೆ ಯುಪಿಎಸ್‌ಸಿ ಪರೀಕ್ಷೆ ಬರೆದ ಅವರು 28ನೇ ರ‍್ಯಾಂಕ್ ಗಳಿಸುತ್ತಾರೆ.

ಪ್ರಸ್ತುತ ಅವರು ಪವನ್ ಕುಮಾರ್ ಮುಂಬೈನಲ್ಲಿ ಸಹಾಯಕ ಆದಾಯ ತೆರಿಗೆ ಆಯುಕ್ತರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026