LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಕರ್ನಾಟಕದ ರೈತನ ಮಗ ಯುಪಿಎಸ್‌ಸಿ ಟಾಪರ್‌ ಆದ ಯಶಸ್ಸಿನ ಕಥೆ

ಬಾಗಲಕೋಟೆ :  ಕರ್ನಾಟಕದ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಅಕ್ಕಿಮರಡಿ ಗ್ರಾಮದ ಯುವಕ ಪಾಂಡುರಂಗ ಸದಾಶಿವ ಕಂಬಳಿ ಅವರು  ಈ ಬಾರಿಯ ಯುನಿಯನ್ ಪಬ್ಲಿಕ್ ಸರ್ವೀಸ್ ಕಮಿಷನ್ (UPSC) ಪರೀಕ್ಷೆಯಲ್ಲಿ 529ನೇ ರ್ಯಾಂಕ್ ಪಡೆದು ಗಮನಾರ್ಹ ಸಾಧನೆ ಮಾಡಿದ್ದಾರೆ. ಅವರ ಸ್ಪೂರ್ತಿದಾಯ ಕಥೆ ಇಲ್ಲಿದೆ.

UPSC ನಾಗರಿಕ ಸೇವೆಗಳ ಪರೀಕ್ಷೆಯ 2024ನೇ ಸಾಲಿನ ಫಲಿತಾಂಶವನ್ನು ಬಿಡುಗಡೆ ಮಾಡಲಾಗಿದೆ. ಈ ಬಾರಿಯ ಕರ್ನಾಟಕದ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಅಕ್ಕಿಮರಡಿ ಗ್ರಾಮದ ಯುವಕ ಪಾಂಡುರಂಗ ಸದಾಶಿವ ಕಂಬಳಿ ಅವರು ಯುನಿಯನ್ ಪಬ್ಲಿಕ್ ಸರ್ವೀಸ್ ಕಮಿಷನ್ (UPSC) ಪರೀಕ್ಷೆಯಲ್ಲಿ 529ನೇ ರ್ಯಾಂಕ್ ಪಡೆದು ಗಮನಾರ್ಹ ಸಾಧನೆ ಮಾಡಿದ್ದಾರೆ.

ರೈತನ ಮಗನಾಗಿರುವ ಪಾಂಡುರಂಗ ಅವರ ಈ ಯಶಸ್ಸು ಗ್ರಾಮೀಣ ಕರ್ನಾಟಕದ ಯುವಕರಿಗೆ ಸ್ಫೂರ್ತಿಯಾಗಿದೆ. ಪಾಂಡುರಂಗ ಕಂಬಳಿ ಅವರು ಕಳೆದ ಒಂದು ವರ್ಷದಿಂದ ಐಎಫ್‌ಎಸ್‌ನಲ್ಲಿ ಸೇವೆ ಸಲ್ಲಿಸುತ್ತಿದ್ದು, ಮಹಾರಾಷ್ಟ್ರ ಕೇಡರ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಸತತ ಐದನೇ ಪ್ರಯತ್ನದಲ್ಲಿ ಯುಪಿಎಸ್‌ಸಿ ಪರೀಕ್ಷೆಯಲ್ಲಿ ಯಶಸ್ವಿಯಾದ ಅವರು, ತಮ್ಮ ಕಠಿಣ ಪರಿಶ್ರಮ ಮತ್ತು ಸಮರ್ಪಣೆಯಿಂದ ಈ ಸಾಧನೆಯನ್ನು ಮಾಡಿದ್ದಾರೆ.

ಪಾಂಡುರಂಗ ಅವರ ಕುಟುಂಬ ಸದ್ಯ ಬೆಂಗಳೂರಿನಲ್ಲಿ ವಾಸವಾಗಿದ್ದಾರೆ. ಗ್ರಾಮೀಣ ಹಿನ್ನೆಲೆಯಿಂದ ಬಂದು ದೇಶದ ಅತ್ಯಂತ ಕಠಿಣ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಯಶಸ್ಸು ಕಂಡಿರುವ ಪಾಂಡುರಂಗ ಅವರ ಕತೆ, ಯುವ ಪೀಳಿಗೆಗೆ ದೊಡ್ಡ ಪ್ರೇರಣೆಯಾಗಿದೆ.

 
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026