Press ID & Credential Portal
Apply / Verify  ➔
LIVE TV LocalCrimeNationalInternationalPoliticsFinancialEducationTechnologyEntertainmentSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ರಾಜ್ಯಪಾಲರಾಗಿ ಸುಧಾ ಯಾದವ ಪ್ರಮಾಣವಚನ

ಬೆಂಗಳೂರು, ಅ. 16 (ಸಮದರ್ಶಿ ಸುದ್ದಿ): ಕರ್ನಾಟಕದ ನೂತನ ರಾಜ್ಯಪಾಲರಾಗಿ ಸುಧಾ ಯಾದವ ಶುಕ್ರವಾರ ಬೆಂಗಳೂರಿನ ಲೋಕಭವನದಲ್ಲಿ ನಡೆದ ಸಮಾರಂಭದಲ್ಲಿ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣವಚನ ಸ್ವೀಕರಿಸಿದರು. ಕರ್ನಾಟಕ ಹೈಕೋರ್ಟ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಪ್ರಮಾಣವಚನ ಬೋಧಿಸಿದರು.

ನಿರ್ಗಮಿತ ರಾಜ್ಯಪಾಲ ಥಾವರಚಂದ್ ಗೆಹ್ಲೋಟ ಅವರ ಅಧಿಕಾರಾವಧಿ ಪೂರ್ಣಗೊಂಡ ಹಿನ್ನೆಲೆಯಲ್ಲಿ  ಸುಧಾ ಯಾದವ ಅವರನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ರಾಜ್ಯಪಾಲರನ್ನಾಗಿ ನೇಮಿಸಿದ್ದರು. ಇದರೊಂದಿಗೆ ಕರ್ನಾಟಕದ ಎರಡನೇ ಮಹಿಳಾ ರಾಜ್ಯಪಾಲೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಈ ಹಿಂದೆ ವಿ.ಎಸ್. ರಮಾದೇವಿ 1999ರಿಂದ 2002ರವರೆಗೆ ರಾಜ್ಯಪಾಲರಾಗಿದ್ದರು.

ಸುಧಾ ಯಾದವ ಅವರ ಪತಿ ಸುಖಬೀರ ಸಿಂಗ್ ಯಾದವ ಗಡಿ ಭದ್ರತಾ ಪಡೆಯ (ಬಿಎಸ್‌ಎಫ್) ಡೆಪ್ಯುಟಿ ಕಮಾಂಡೆಂಟ್ ಆಗಿದ್ದರು. 1999ರ ಕಾರ್ಗಿಲ್ ಯುದ್ಧದ ಸಂದರ್ಭದಲ್ಲಿ ಪಾಕಿಸ್ತಾನಿ ಪಡೆಗಳ ಫಿರಂಗಿ ದಾಳಿಯಲ್ಲಿ ಹುತಾತ್ಮರಾಗಿದ್ದರು. ಮರಣೋತ್ತರವಾಗಿ ಅವರಿಗೆ ಸೇನಾ ಪದಕ ನೀಡಿ ಗೌರವಿಸಲಾಗಿತ್ತು. ಪತಿಯ ನಿಧನದ ಬಳಿಕ ಸುಧಾ ಯಾದವ ರಾಜಕೀಯ ಪ್ರವೇಶಿಸಿದರು.

1999ರಲ್ಲಿ ಹರಿಯಾಣದ ಮಹೇಂದ್ರಗಢ ಲೋಕಸಭಾ ಕ್ಷೇತ್ರದಿಂದ ಆಯ್ಕೆಯಾದ ಅವರು, 2004ರವರೆಗೆ ಸಂಸತ್ ಸದಸ್ಯೆಯಾಗಿದ್ದರು. ರಸಾಯನಶಾಸ್ತ್ರದಲ್ಲಿ ಡಾಕ್ಟರೇಟ್ ಪಡೆದಿರುವ ಅವರು, ರೂರ್ಕಿ ವಿಶ್ವವಿದ್ಯಾಲಯದಲ್ಲಿ ಎಂ.ಎಸ್ಸಿ. ಪದವಿಯೊಂದಿಗೆ ಚಿನ್ನದ ಪದಕ ಗಳಿಸಿದ್ದರು.

ಬಿಜೆಪಿಯಲ್ಲಿ ವಿವಿಧ ಹುದ್ದೆಗಳನ್ನು ನಿರ್ವಹಿಸಿರುವ ಸುಧಾ ಯಾದವ್, ಪಕ್ಷದ ಒಬಿಸಿ ಮೋರ್ಚಾದ ರಾಷ್ಟ್ರೀಯ ಉಸ್ತುವಾರಿಯಾಗಿ ಹಾಗೂ ರಾಷ್ಟ್ರೀಯ ಹಿಂದುಳಿದ ವರ್ಗಗಳ ಆಯೋಗದ ಸದಸ್ಯೆಯಾಗಿ ಕಾರ್ಯನಿರ್ವಹಿಸಿದ್ದಾರೆ. 2022ರಲ್ಲಿ ಬಿಜೆಪಿಯ ಸಂಸದೀಯ ಮಂಡಳಿಗೆ ನೇಮಕಗೊಂಡ ಅವರು, ಸುಷ್ಮಾ ಸ್ವರಾಜ್ ಬಳಿಕ ಈ ಮಂಡಳಿಯಲ್ಲಿ ಸ್ಥಾನ ಪಡೆದ ಎರಡನೇ ಮಹಿಳೆಯಾಗಿದ್ದರು.

ಲೋಕಭವನದ ಗ್ಲಾಸ್ ಹೌಸ್‌ನಲ್ಲಿ ನಡೆದ ಸಮಾರಂಭದಲ್ಲಿ ನಿರ್ಗಮಿತ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ, ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ, ಸಚಿವರಾದ ಶರಣ ಪ್ರಕಾಶ ಪಾಟೀಲ, ಕೆ.ಜೆ. ಜಾರ್ಜ್, ಪ್ರಿಯಾಂಕ್ ಖರ್ಗೆ, ವಿರೋಧ ಪಕ್ಷದ ನಾಯಕರಾದ ಆರ್. ಅಶೋಕ, ಛಲವಾದಿ ನಾರಾಯಣಸ್ವಾಮಿ, ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಿಸೆಂಬರ್ 7ರಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಸಾಧ್ಯತೆಎಂಎಸ್‌ಪಿ ಆಧರಿಸಿ ಕಬ್ಬಿಗೆ ದರ: ಡಿ.ಕೆ. ಶಿವಕುಮಾರಮತದಾರರ ಅಂತಿಮ ಪಟ್ಟಿಯಲ್ಲಿ ನಿಮ್ಮ ಹೆಸರು ಪರಿಶೀಲಿಸಿಚುನಾವಣಾ ಆಯೋಗದ ಸಮರ್ಥನೆಗೆ ಆಕ್ಷೇಪಣೆ ಸಲ್ಲಿಸಲು 10 ದಿನ ಕಾಲಾವಕಾಶಸಚಿವ ಜಿ. ಪರಮೇಶ್ವರ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು‘ಬಟ್ಟೆ ಹರಿದು ರಕ್ತಸ್ರಾವವಾಗಿತ್ತು’: ಟ್ರಂಪ್ ವಿರುದ್ಧ ಮಾಜಿ ಮಿಸ್ ಸ್ವಿಟ್ಜರ್ಲ್ಯಾಂಡ ಅತ್ಯಾಚಾರ ಆರೋಪ!ಮತದಾರರ ಪಟ್ಟಿಯಿಂದ 1 ಕೋಟಿ ಹೆಸರು ಡಿಲೀಟ್!ಕಬ್ಬಿನ ದರ ನಿಗದಿ ಸಭೆಯಲ್ಲಿ ರೈತ ಮುಖಂಡರ ಮಾರಾಮಾರಿ: ಸುವರ್ಣಸೌಧದಲ್ಲೇ ಕೈಕೈ ಮಿಲಾಯಿಸಿದ ಎರಡು ಬಣಗಳು!ಕನ್ನಡಿಗರಿಗೆ ಉದ್ಯೋಗ ನಿರಾಕರಿಸಿದರೆ ಖಾಸಗಿ ಸಂಸ್ಥೆಗಳ ವಿರುದ್ಧ ಕ್ರಮ: ಡಿ.ಕೆ. ಶಿವಕುಮಾರಜಲವಿದ್ಯುತ್ ಯೋಜನೆ ವಿರೋಧಿಸಿ ಅರುಣಾಚಲದಲ್ಲಿ ಹಿಂಸಾಚಾರ: ಭದ್ರತಾ ಪಡೆಯ ಎರಡು ತುಕಡಿ ರವಾನೆ