Press ID & Credential Portal
Apply / Verify  ➔
LIVE TV LocalKarnatakaCrimeIndiaWorldFilmNationalLife StyleInternationalBusinessPoliticsSportsBusinessEducationTechnology
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Karnataka

ಅ.26ರಂದು ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರ ಸಭೆ: ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು : "ಅಕ್ಟೋಬರ್ 26 ರಂದು ಕಬ್ಬು ಬೆಳೆಗಾರರು ಮತ್ತು ಸಕ್ಕರೆ ಕಾರ್ಖಾನೆ ಮಾಲೀಕರ ಸಭೆ ಬೆಳಗಾವಿಯಲ್ಲಿ  ನಿಗದಿಯಾಗಿದೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಕಾರಣಾಂತರಗಳಿಂದ ಭಾಗವಹಿಸುತ್ತಿಲ್ಲ" ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಹೇಳಿದರು.

ದೆಹಲಿಗೆ ತೆರಳುವ ಮುನ್ನ ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳಿಗೆ ಶಿವಕುಮಾರ್ ಅವರು ಗುರುವಾರ ಪ್ರತಿಕ್ರಿಯೆ ನೀಡಿದರು.

"ಸಭೆಯನ್ನು ಮೊದಲು ನೀವು ಮಾಡಿ, ನಂತರ ನಾವು ಸಭೆ ಮಾಡುತ್ತೇವೆ ಎಂದು ಜೋಶಿಯವರು ಹೇಳಿದ್ದಾರೆ. ಕಬ್ಬು ಬೆಳೆಗಾರರ ಸಮಸ್ಯೆ ಕೇವಲ ಕರ್ನಾಟಕದ ಮಾತ್ರವಲ್ಲದೆ ಇಡೀ ದೇಶಕ್ಕೆ ಸಂಬಂಧಿಸಿದ ವಿಚಾರ. ಈ ಕುರಿತು ಕೇಂದ್ರ ಮಟ್ಟದಲ್ಲಿ ಅಧಿಕಾರಿಗಳ ಜೊತೆ ಪ್ರತ್ಯೇಕ ಸಭೆ ನಡೆಸಿ ಪರಿಹಾರ ಕಂಡುಕೊಳ್ಳಲಾಗುವುದು" ಎಂದರು.

"ಅರಣ್ಯ ಭೂಮಿ ವಿವಾದಗಳಿಗೆ ಸಂಬಂಧಪಟ್ಟ ಕೇಂದ್ರ ಸಚಿವರ ಜೊತೆ ಚರ್ಚೆ‌ ನಡೆಸಲಾಗುತ್ತದೆ. ಗೋವಾದಲ್ಲಿ ಚುನಾವಣೆ ಇರುವ ಕಾರಣ ಮಹದಾಯಿ ಕುರಿತು ತೀರ್ಮಾನ ಕೈಗೊಳ್ಳುವುದು ಸ್ವಲ್ಪ ಕಷ್ಟವಾಗಬಹುದು. ತುಂಗಭದ್ರಾ ನೀರಿನ ವಿಚಾರವಾಗಿ ಆಂಧ್ರಪ್ರದೇಶದ ಮುಖ್ಯಮಂತ್ರಿಗಳೊಂದಿಗೆ ಪರಸ್ಪರ ಭೇಟಿಯಾಗಿ ಚರ್ಚಿಸಲು ಮನವಿ ಮಾಡಲಾಗಿದೆ. ಆಂಧ್ರ ಅಥವಾ ದೆಹಲಿಯಲ್ಲಿ ಈ ಭೇಟಿ ನಡೆಸಲಾಗುವುದು. ತುಂಗಭದ್ರಾ ಜಲಾಶಯದಲ್ಲಿ ನೀರಿನ ಕೊರತೆ ತೀವ್ರವಾಗಿದ್ದು, ರೈತರಿಂದ ನೀರಿನ ಬೇಡಿಕೆ ವಿಪರೀತವಾಗಿದೆ. ಮಳೆಯಿಲ್ಲದ ಕಾರಣ ಮುಂದಿನ ಕಾರ್ಯತಂತ್ರ ರೂಪಿಸಬೇಕಿದೆ. ಬರಗಾಲದ ಕುರಿತು ರಾಜ್ಯದ ಬೇಡಿಕೆಗಳನ್ನು ಸಲ್ಲಿಸಲು ಪ್ರಧಾನಮಂತ್ರಿ ಹಾಗೂ ಗೃಹಸಚಿವರನ್ನು ಭೇಟಿ ಮಾಡಿ ಚರ್ಚಿಸಲಾಗುವುದು. ಈ ವಿಚಾರಗಳ ಚರ್ಚೆಗೆ ಪ್ರತ್ಯೇಕ ತಂಡಗಳನ್ನು ರಚಿಸಲಾಗಿದೆ. ಅಧಿಕಾರಿಗಳನ್ನೂ ನಿಯೋಜಿಸಲಾಗಿದೆ" ಎಂದರು.

ಮತ್ಯಾವ ಕೇಂದ್ರ ಸಚಿವರನ್ನು ಭೇಟಿ ಮಾಡಲಾಗುವುದು ಎಂದು ಕೇಳಿದಾಗ, "ಐಟಿಐ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರ ಸಮಯ ಕೋರಲಾಗಿದೆ. ದಸರಾ ಕಾರ್ಯ ನಿಮಿತ್ತ ಅವರಿಗೂ ಬಿಡುವಿಲ್ಲದ ಕಾರಣ, ಸಮಯ ಸಿಕ್ಕ ಕೂಡಲೇ ಈ ಕುರಿತು ಚರ್ಚಿಸಲಾಗುವುದು. ಪೋಲೆಂಡ್ ಪ್ರಧಾನಿಗಳು ಶುಕ್ರವಾರ ಭೇಟಿ ನೀಡುವ ಕಾರಣಕ್ಕೆ ಇಂದೇ ರಾಜ್ಯಕ್ಕೆ ತೆರಳಲಿದ್ದೇನೆ. ರಾಜ್ಯದ ವಿಚಾರಗಳ ಚರ್ಚೆಗೆ ಮತ್ತೊಂದು ಸೂಕ್ತ ದಿನದಂದು ದೆಹಲಿಗೆ ಭೇಟಿ ನೀಡಲಾಗುವುದು" ಎಂದು ತಿಳಿಸಿದರು.

ವಿಶ್ವವಿಖ್ಯಾತ ಮೈಸೂರು ದಸರಾ ಯಶಸ್ಸು; ಅನ್ಯ ರಾಜ್ಯಗಳ ಸಿಎಂಗಳ ಮೆಚ್ಚುಗೆ

"ಬುಧವಾರ ನಡೆದ ದಸರಾ ಜಂಬೂಸವಾರಿ ಅತ್ಯಂತ ಯಶಸ್ವಿಯಾಗಿ ನೆರವೇರಿದೆ. ಇಡೀ ಭಾರತದ ವೈಭವವನ್ನು ಸಾರುವಂತಹ ಪಂಜಿನ ಕವಾಯತು ಹಾಗೂ ಸ್ತಬ್ಧಚಿತ್ರಗಳು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿವೆ. ಕೇರಳ ಹಾಗೂ ತೆಲಂಗಾಣ ರಾಜ್ಯಗಳ ಮುಖ್ಯಮಂತ್ರಿಗಳು ಕೂಡ ದಸರೆಗೆ ಬಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಮುಂದಕ್ಕೂ ಅವರ ರಾಜ್ಯಗಳ ಕಲಾತಂಡಗಳನ್ನು ಕಳುಹಿಸಿಕೊಡುವುದಾಗಿ ತಿಳಿಸಿದ್ದಾರೆ" ಎಂದರು.

"ಸಚಿವ ಕೆ.ಜೆ. ಜಾರ್ಜ್ ಅವರು ವಿದ್ಯುತ್ ದೀಪಾಲಂಕಾರ ವ್ಯವಸ್ಥೆ ಹಾಗೂ ಬಸವರಾಜ ರಾಯರೆಡ್ಡಿ ಸೇರಿದಂತೆ ವಿವಿಧ ಜವಾಬ್ದಾರಿಗಳನ್ನು ವಹಿಸಿಕೊಂಡಿದ್ದ ಸಚಿವರು ಹಾಗೂ ಅಧಿಕಾರಿಗಳು ದಸರಾವನ್ನು ಯಶಸ್ವಿಗೊಳಿಸಲು ಶ್ರಮಿಸಿದ್ದಾರೆ. ರಾಯರೆಡ್ಡಿ ಅವರು ವಿದೇಶಿ ರಾಯಭಾರಿಗಳಿಗೆ ಅಚ್ಚುಕಟ್ಟಾಗಿ ಆತಿಥ್ಯ ನೀಡಿದರು. ಪರಿಷತ್ ಚುನಾವಣೆ ಇದ್ದ ಕಾರಣಕ್ಕೆ ಒಂದಷ್ಟು ಜನ ಸಚಿವರಿಗೆ ವಿನಾಯಿತಿ ನೀಡಲಾಗಿತ್ತು. ಡಿಸಿಎಂ ಪರಮೇಶ್ವರ್ ಅವರು ತುಮಕೂರು ದಸರಾದಲ್ಲಿ ಭಾಗಿಯಾಗಿದ್ದರು. ಜಯಮಾಲಾ, ರಾಕ್ ಲೈನ್ ವೆಂಕಟೇಶ್ ನೇತೃತ್ವದ ಚಲನಚಿತ್ರ ವಾಣಿಜ್ಯ ಮಂಡಳಿ ತಂಡ, ಪ್ರಸಿದ್ದ ಕ್ರೀಡಾಪಟುಗಳು, ಭಾರತೀಯ ಸೇನೆ, ವಾಯುಪಡೆ, ಹೆಚ್‌ ಎಎಲ್, ಹೆಚ್‌ ಎಂಟಿ ಮುಂತಾದ ಕೇಂದ್ರ ಸಂಸ್ಥೆಗಳು ತಮ್ಮ ಟ್ಯಾಬ್ಲೋಗಳ ಮೂಲಕ ಮೆರುಗು ತಂದವು. ಅವರಿಗೂ ನನ್ನ ಕೃತಜ್ಞತೆಗಳು. ಡ್ರೋಣ್ ಪ್ರದರ್ಶನ ಹೊಸ ದಾಖಲೆ ಬರೆದಿದೆ" ಎಂದು ಹೇಳಿದರು.

ಮುಖ್ಯ ಕಾರ್ಯದರ್ಶಿಗಳಿಂದ ತನಿಖೆ

ಪೂಜೆ ವೇಳೆ ಸಚಿವರಿಗೆ ಅಡ್ಡಿ ಪಡಿಸಿದ ವಿಚಾರ ಕೇಳಿದಾಗ, "ಇದು ಅಧಿಕಾರಿಗಳ ಅಚಾತುರ್ಯ. ನಂಧಿ ಧ್ವಜಕ್ಕೆ ಪೂಜೆ ಮಾಡಲು ಹೋಗುವಾಗ ಈ ರೀತಿ ಆಗಿದೆ. ನಾನೇ ಸಚಿವರನ್ನು ಬಿಡಿಸಿದೆ. ಈ ಬಗ್ಗೆ ಮುಖ್ಯ ಕಾರ್ಯದರ್ಶಿಗಳು ಪರಿಶೀಲನೆ ಹಾಗೂ ತನಿಖೆ ನಡೆಸುತ್ತಿದ್ದಾರೆ. ಇದೆಲ್ಲ ಹೊರತಾಗಿ ಪೊಲೀಸ್ ಸಿಬ್ಬಂದಿ, ಅಧಿಕಾರಿ ವರ್ಗ ಸಾಕಷ್ಟು ದುಡಿದಿದ್ದಾರೆ. ಅವರಿಗೆ ಕೈ ಮುಗಿದು ಧನ್ಯವಾದ ಹೇಳುತ್ತೇನೆ" ಎಂದರು. 

ಶಿವಮೊಗ್ಗ ದಸರಾದಲ್ಲಿ ದುರ್ಘಟನೆ ನಡೆದಿದ್ದರ ಬಗ್ಗೆ ಕೇಳಿದಾಗ, "ಇಂತಹ ಘಟನೆಗಳು ನಡೆಯುತ್ತವೆ ಎನ್ನುವ ಅರಿವು ನನಗೆ ಇದ್ದ ಕಾರಣಕ್ಕೆ ಅರಣ್ಯ ಸಚಿವರಾದ ರಾಮಲಿಂಗಾರೆಡ್ಡಿ ಅವರ ನೇತೃತ್ವದಲ್ಲಿ ಸಭೆ ನಡೆಸಿ ಮೈಸೂರು ದಸರಾದಲ್ಲಿ ಎಚ್ಚರಿಕೆ ತೆಗೆದುಕೊಳ್ಳಲಾಗಿತ್ತು. ಅಂಬಾರಿ ಹೊರಲು ಬೇರೆ ಆನೆ ಆಯ್ಕೆ ಮಾಡಲಾಗಿತ್ತು. ಕೊನೆಗೆ ಪ್ರಶಾಂತನನ್ನು ಆಯ್ಕೆ ಮಾಡಲಾಯಿತು" ಎಂದರು.

"ಶಿವಮೊಗ್ಗದಲ್ಲಿ ಸ್ವಲ್ಪ ಯಾಮಾರಿದ್ದಾರೆ. ಮುಂದಿನ ಬಾರಿ ಇನ್ನಷ್ಟು ಎಚ್ಚರಿಕೆ ವಹಿಸಲಾಗುವುದು. ನಮಗಿದು ಎಚ್ಚರಿಕೆ ಘಂಟೆ. ಅದೃಷ್ಟವಶಾತ್ ಯಾರಿಗೂ ಯಾವುದೇ ತೊಂದರೆಯಾಗಿಲ್ಲ" ಎಂದು ಹೇಳಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿಜಯೇಂದ್ರ ಸಾರಥ್ಯದಲ್ಲೇ ಮುಂದಿನ ವಿಧಾನಸಭಾ ಚುನಾವಣೆ: ಬಿಜೆಪಿ ಹೈಕಮಾಂಡ್ ಮೆಗಾ ಪ್ಲಾನ್ಮದ್ದೂರಲ್ಲಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಬಿದ್ದ ಚಿರತೆ; ಗ್ರಾಮಸ್ಥರು ನಿಟ್ಟುಸಿರುಸಾಗರ ತಾಲ್ಲೂಕು ಅಂತಿಮ ಮತದಾರರ ಪಟ್ಟಿ ಪ್ರಕಟ: 1.94 ಲಕ್ಷಕ್ಕೆ ಇಳಿದ ಮತದಾರರ ಸಂಖ್ಯೆಮಲ್ಲಿಕಾರ್ಜುನ ಖರ್ಗೆ ವಿರುದ್ಧದ ವೈಯಕ್ತಿಕ ದಾಳಿ ಪ್ರಜಾಪ್ರಭುತ್ವದ ಮೌಲ್ಯಗಳಿಗೆ ಧಕ್ಕೆ: ಮಾಜಿ MLC ರಮೇಶ್ ಬಾಬು ಆಕ್ಷೇಪಮಹರ್ಷಿ ವಾಲ್ಮೀಕಿ ಆದರ್ಶಗಳು ಇಂದಿನ ಯಾಂತ್ರಿಕ ಜಗತ್ತಿಗೆ ಪ್ರಸ್ತುತ: ಮದ್ದೂರು ತಹಶೀಲ್ದಾರ್ ಶಿವಕುಮಾರ್ ಬಿರಾದಾರ್10 ಎಕರೆಯಲ್ಲಿ ಕೆಎಆರ್ ಫ್ಯೂಚರ್ ಅಕಾಡೆಮಿ ಕ್ಯಾಂಪಸ್: ನೇಗಿಲಯೋಗಿ ರೈತ ಮಾರಾಟ ಕೇಂದ್ರದ ಸ್ಥಾಪಕ ಯೋಗೇಶ್ ಅಪ್ಪಾಜಿಸ್ವ-ಉದ್ಯೋಗಾಕಾಂಕ್ಷಿಗಳ ಗಮನಕ್ಕೆ: ಉಚಿತ ಅಣಬೆ ಬೇಸಾಯ ತರಬೇತಿಗೆ ಅರ್ಜಿ ಆಹ್ವಾನBREAKING : ಕಲ್ಬುರ್ಗಿಯಲ್ಲಿ ತಡರಾತ್ರಿ ದರೋಡೆಗೆ ಬಂದಿದ್ದ ಗ್ಯಾಂಗ್ ನಿಂದ ಫೈರಿಂಗ್ : ಇಬ್ಬರು ಅರೆಸ್ಟ್!ಮಾಜಿ ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್ : ಗಣಿ ಗುತ್ತಿಗೆ ಪ್ರಕರಣದ PIL ವಜಾಗೊಳಿಸಿದ ಹೈಕೋರ್ಟ್SHOCKING : ಚಿಕ್ಕಬಳ್ಳಾಪುರ : ಮಾತನಾಡೋಕೆ ಅಂತ ಬಂದು ಹಿರಿಯ ವಕೀಲನ ಕತ್ತು ಸೀಳಿ ಕೊಲೆಗೆ ಯತ್ನ : ಆರೋಪಿ ಎಸ್ಕೇಪ್!