LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

'ಆತ್ಮಾಹುತಿ ಬಾಂಬ್ ದಾಳಿಯೆಂಬುದು ಹುತಾತ್ಮರ ಕಾರ್ಯಾಚರಣೆ'- ಉಗ್ರ ಉಮರ್

ನವದೆಹಲಿ: ಆತ್ಮಾಹುತಿ ಬಾಂಬ್ ದಾಳಿಯೆಂಬುದು ಹುತಾತ್ಮರ ಕಾರ್ಯಾಚರಣೆ ಎಂದು ಇಸ್ಲಾಂನಲ್ಲಿ ತಿಳಿಸಲಾಗಿದೆ ಎಂದು ಬಾಂಬರ್ ಉಮರ್ ಕೆಂಪುಕೋಟೆ ಬಳಿ ಕಾರು ಸ್ಫೋಟಕ್ಕೂ ಮುನ್ನ ಮಾಡಿದ್ದ ವಿಡಿಯೋವೊಂದರಲ್ಲಿ ಹೇಳಿರುವುದು ಇದೀಗ ಬೆಳಕಿಗೆ ಬಂದಿದೆ.

ವೈರಲ್ ಆದ ವಿಡಿಯೋದಲ್ಲಿ ಉಮರ್ ಮಾತನಾಡುತ್ತಾ, "ಆತ್ಮಾಹುತಿ ಬಾಂಬ್ ದಾಳಿ ಬಗ್ಗೆ ತಪ್ಪಾಗಿ ಅರ್ಥೈಸಲಾಗಿದೆ. ಇದು ಯಾವುದೇ ರೀತಿಯ ಪ್ರಜಾಪ್ರಭುತ್ವವಲ್ಲ ಅಥವಾ ಯಾವುದೇ ನಾಗರಿಕ ಸಮಾಜದಲ್ಲಿ ಇದನ್ನು ಸ್ವೀಕರಿಸಲು ಸಾಧ್ಯವಿಲ್ಲ. ಇಸ್ಲಾಂನಲ್ಲಿ ಆತ್ಮಹತ್ಯೆಗೆ ಅವಕಾಶವಿಲ್ಲ. ಹೀಗಾಗಿ ಇದನ್ನು ಹುತಾತ್ಮರ ಕಾರ್ಯಾಚರಣೆ ಎಂದು ತಿಳಿಸಲಾಗಿದೆ. ಈ ಬಗ್ಗೆ ಹಲವು ಪರ-ವಿರೋಧ ವಾದಗಳಿವೆ" ಎಂದು ಹೇಳಿದ್ದಾನೆ.

"ಆತ್ಮಾಹುತಿ ದಾಳಿಯ ಬಹುದೊಡ್ಡ ಸಮಸ್ಯೆ ಏನೆಂದರೆ, ಒಬ್ಬ ವ್ಯಕ್ತಿ ಒಂದು ನಿರ್ದಿಷ್ಟ ಸ್ಥಳದಲ್ಲಿ, ನಿರ್ದಿಷ್ಟ ಸಮಯದಲ್ಲಿ ಸಾಯುವುದು ಖಚಿತ. ಆದರೆ ಹೇಗೆ? ಯಾವಾಗ ಸಾಯುತ್ತಾನೆ ಎನ್ನುವುದನ್ನು ಉಹಿಸಲು ಸಾಧ್ಯವಿಲ್ಲ ಎಂದು ಗೊತ್ತಾದಾಗ ಅವನ ಮನಸ್ಥಿತಿ ಅಪಾಯಕಾರಿ ಸ್ಥಿತಿಯಲ್ಲಿರುತ್ತದೆ. ಸಾವು ಅವರ ಅಂತಿಮ ನೆಲೆ ಎಂದು ನಂಬಿರುತ್ತಾರೆ. ಯಾರೂ ಸಾವಿಗೆ ಹೆದರಬೇಡಿ" ಎಂದಿದ್ದಾನೆ.

ಈ ವಿಡಿಯೋ ಬೆಳಕಿಗೆ ಬಂದ ಬೆನ್ನಲ್ಲೇ ದೆಹಲಿ ಕೆಂಪು ಕೋಟೆ ಬಳಿ ಕಾರು ಸ್ಫೋಟ ಒಂದು ಯೋಜಿತ ಕೃತ್ಯ ಎಂಬುದು ಸ್ಪಷ್ಟವಾಗಿದೆ. ಈ ಪ್ರಕರಣ ಸಂಬಂಧ ಎನ್‌ಐಎ ತನಿಖೆ ನಡೆಸುತ್ತಿದ್ದು, ಒಂದೊಂದಾಗಿಯೇ ಮಾಹಿತಿಗಳು ಹೊರಬರುತ್ತಿವೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026