Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News

ಭೀಮಪ್ಪ ಗಡಾದಗೆ ಬೆಂಬಲ

 

ಮೂಡಲಗಿ :
ಅರಭಾವಿ ಮತಕ್ಷೇತ್ರದ ಕಾಂಗ್ರೆಸ್ ಟಿಕೆಟ್ ವಂಚಿತ ಅಭ್ಯರ್ಥಿಗಳಾದ ಐದು ಜನ ಭೀಮಪ್ಪ ಗಡಾದ ಅವರಿಗೆ ಬೆಂಬಲ ಸೂಚಿಸಿದ್ದಾರೆ.

ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಾಗಿದ್ದ ಭೀಮಪ್ಪ ಹಂದಿಗುಂದ, ರಮೇಶ ಉಟಗಿ ಹಾಗೂ ಅವರ ಕಾರ್ಯಕರ್ತರು ಪಟ್ಟಣದ ಭೀಮಪ್ಪ ಹಂದಿಗುಂದ ಅವರು ತೋಟದ ಮನೆಯಲ್ಲಿ ಜರುಗಿದ ಪತ್ರಿಕಾಗೋಷ್ಠಿಯಲ್ಲಿ ಬೆಂಬಲ ವ್ಯಕ್ತಪಡಿಸಿ ಭೀಮಪ್ಪ ಗಡಾದ ಅವರ ಪ್ರಚಾರಕ್ಕೆ ಬುಧವಾರದಂದು ಚಾಲನೆ ನೀಡಲಾಗುವುದು ಎಂದು ಘೋಷಿಸಿದರು.

ಈ ಸಂದರ್ಭದಲ್ಲಿ ಭೀಮಪ್ಪ ಹಂದಿಗುಂದ ಮಾತನಾಡಿ, ಸಾಕಷ್ಟು ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ಪಕ್ಷ ಸಂಘಟನೆ ಮಾಡಿದ್ದು ಆದರೆ ೨೦೨೩ರ ವಿಧಾನಸಭಾ ಚುನಾವಣೆಗೆ ಅರಭಾವಿ ಮತಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿ ನಮಗೆ ಟಿಕೆಟ್ ನೀಡದೇ ಇರುವುದರಿಂದ ನಮ್ಮ ಕಾರ್ಯಕರ್ತರಿಗೆ ನೋವಾಗಿದೆ. ಈಗಿನ ಕಾಂಗ್ರೆಸ್ ಅಭ್ಯರ್ಥಿ ಅರವಿಂದ ದಳವಾಯಿ ಹಿರಿಯ ಮುಖಂಡರ ಜೊತೆಗೆ ಸರಿಯಾದ ಸಂಪರ್ಕ ಇಲ್ಲದೇ ಸ್ಪಂದನೆಯನ್ನು ಕೂಡಾ ನೀಡುತ್ತಿಲ್ಲ. ಆದರಿಂದ ನಮ್ಮ ಎಲ್ಲ ಕಾರ್ಯಕರ್ತರು ಭೀಮಪ್ಪ ಗಡಾದ ಅವರಿಗೆ ಬೆಂಬಲ ನೀಡಿ ಅರಭಾವಿ ಮತಕ್ಷೇತ್ರದಲ್ಲಿ ಬದಲಾವಣೆಯನ್ನು ತರಬೇಕೆಂದು ಪಣತೊಟ್ಟಿರುವ ನಾವು ಭೀಮಪ್ಪ ಗಡಾದ ಅವರ ಜೊತೆಗೆ ಅವರ ಪ್ರಚಾರಕ್ಕೆ ಹೋಗಿ ಅವರನ್ನು ಗೆಲ್ಲಿಸುವ ಪ್ರಯತ್ನ ಮಾಡುತ್ತೇವೆ ಎಂದು ಹೇಳಿದರು.

ಹಿರಿಯ ಕಾಂಗ್ರೆಸ್ ಮುಖಂಡ ರಮೇಶ ಉಟಗಿ ಮತ್ತು ರೈತ ಸಂಘದ ಮುಖಂಡ ಶಿವಪುತ್ರ ಜಕಬಾಳ ಮಾತನಾಡಿ, ಅರಭಾವಿ ಕ್ಷೇತ್ರದಲ್ಲಿ ಅಭಿವೃದ್ಧಿಯಾಗಬೇಕಾದರೇ ಭೀಮಪ್ಪ ಗಡಾದ ಅವರ ಗೆಲುವು ಅನಿವಾರ್ಯವಾಗಿದೆ. ಕ್ಷೇತ್ರದ ಪ್ರಬುದ್ಧ ಮತದಾರರು ಗಡಾದ ಅವರ ಚಿಹ್ನೆ (ಚಹಾ) ಕಿಟಲಿಗೆ ಮತ ನೀಡಿ ಆರ್ಶೀವದಿಸಬೇಕೆಂದರು

ಕಾಂಗ್ರೇಸ್ ಬಂಡಾಯ ಅಭ್ಯರ್ಥಿ ಭೀಮಪ್ಪ ಗಡಾದ ಮಾತನಾಡಿ, ಕಾಂಗ್ರೆಸ್ ಟಿಕೆಟ್ ಕೈ ತಪ್ಪಿಸಲು ಸಾಕಷ್ಟು ಕಾಣದ ಕೈಗಳು ಕೆಲಸ ಮಾಡಿವೆ, ಆದರೂ ಸಹ ನಮ್ಮ ಕಾರ್ಯಕರ್ತರು ಹಾಗೂ ಕಾಂಗ್ರೇಸ್ ಹಿರಿಯ ಮುಖಂಡರು ನಮ್ಮ ಕ್ಷೇತ್ರದಲ್ಲಿ ಬದಲಾವಣೆಯನ್ನು ತರಬೇಕು ಎಂಬ ಕಾರಣಕ್ಕೆ ನಾನು ಚುನಾವಣೆಯಲ್ಲಿ ಸ್ಪರ್ಧಿಸಿದ್ದು, ಈಗ ನಮ್ಮ ಎಲ್ಲ ಹಿರಿಯ ಮುಖಂಡರು ಹಾಗೂ ಕಾರ್ಯಕರ್ತರು ನನಗೆ ಬೆಂಬಲ ನೀಡಿ ನನ್ನ ಪ್ರಚಾರದ ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದು ಇದರಿಂದ ಈ ಬಾರಿ ಅರಭಾವಿ ಮತಕ್ಷೇತ್ರದಲ್ಲಿ ಬದಲಾವಣೆ ಖಂಡಿತ ಎಂದರು.

ಈ ಸಂದರ್ಭದಲ್ಲಿ ಗೋಕಾಕ ಮತಕ್ಷೇತ್ರ ಪಕ್ಷೇತರ ಅಭ್ಯರ್ಥಿ ಜಗದೀಶ ಸಿ.ಕೆ, ಮಲ್ಲಪ್ಪ ಮದಗುಣಕಿ, ಸುರೇಶ ಸಣ್ಣಕ್ಕಿ, ಗುರುನಾಥ ಗಂಗನ್ನವರ, ಹಣಮಂತ ಕಂಕಣವಾಡಿ, ಸಂಗಪ್ಪ ಕಳ್ಳಿಗುದ್ದಿ, ಬಾಲು ಮುಗಳಖೋಡ, ಶಂಕರ ಗಿಡ್ಡಗೌಡರ, ಮಲ್ಲಪ್ಪ ತೇರದಾಳ ಹಾಗೂ ಕಾರ್ಯಕರ್ತರು ಇದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಾ. ಪ್ರಭಾಕರ ಕೋರೆ ಅವರಿಗೆ ಪದ್ಮಶ್ರೀ ಪ್ರಶಸ್ತಿ: ಲಿಂಗಾಯತ ಸಮಾಜದ ವತಿಯಿಂದ ಭವ್ಯ ಸನ್ಮಾನಥ್ರೋ ಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಬೆಳಗಾವಿ ಜಿಎ ಪ್ರೌಢಶಾಲೆಯ ಬಾಲೆಯರುಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ಪ್ರಕಟ ಜಿಲ್ಲೆಯ ಉತ್ತಮ ಶಿಕ್ಷಕರಿಗೆ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿಬೈಕ್ ಕಳ್ಳನನ್ನು ಬಂಧಿಸಿದ ಪೊಲೀಸರುಭೀಕರ ರಸ್ತೆ ಅಪಘಾತ: ಇಬ್ಬರು ಯುವಕರ ದುರ್ಮರಣಪ್ರಜಾಪಿತ ಬ್ರಹ್ಮಾಕುಮಾರಿ ಶಹಾಪುರ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮಾಚರಣೆಸುರಂಗದಲ್ಲಿ 9 ದಿನ ಹರೇ ಕೃಷ್ಣ ಪಠಿಸುತ್ತಿದ್ದವ ಜನ್ಮಾಷ್ಟಮಿಯಂದು ಹೊರಬಂದಎರಡೇ ತಿಂಗಳಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಇಬ್ಬಾಗ: ಅಸ್ತಿತ್ವಕ್ಕೆ ಬಂತು ಹೊಸ ಬಣ!ಅಯೋಧ್ಯೆ ದೇಗುಲದ ಅಭಿವೃದ್ಧಿಗೆ ಭಕ್ತಾದಿಗಳ ಬೆಂಬಲ ಕೋರಿದ ರಾಮಮಂದಿರದ ನೂತನ ಸಿಇಒ