LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಕರೂರು ಕಾಲ್ತುಳಿತ ದುರಂತ: ಸಿಬಿಐಗೆ ವಹಿಸಿ ಸುಪ್ರೀಂ ಕೊರ್ಟ್ ಆದೇಶ

ನವದೆಹಲಿ : ಸೆಪ್ಟೆಂಬರ್ 27 ರಂದು ತಮಿಳುನಾಡಿನ ಕರೂರಿನಲ್ಲಿ ನಡೆದ ಕಾಲ್ತುಳಿತ ದುರಂತ ಪ್ರಕರಣದ ತನಿಖೆಯನ್ನ ಸಿಬಿಐಗೆ ವಹಿಸಿ ಸುಪ್ರೀಂ ಕೊರ್ಟ್ ಇಂದು ಆದೇಶ ಹೊರಡಿಸಿದೆ.

ನ್ಯಾಯಮೂರ್ತಿಗಳಾದ ಜೆ.ಕೆ. ಮಹೇಶ್ವರಿ ಮತ್ತು ಎನ್.ವಿ ಅಂಜಾರಿಯಾ ಅವರಿದ್ದ ದ್ವಿ ಸದಸ್ಯ ಪೀಠ ಸಿಬಿಐಗೆ ವಹಿಸಿ ಆದೇಶಿಸಿದೆ.

ಸೆಪ್ಟೆಂಬರ್ 27 ರಂದು ತಮಿಳುನಾಡಿನ ಕರೂರಿನಲ್ಲಿ ನಟ ವಿಜಯ್ ನೇತೃತ್ವದಲ್ಲಿ ನಡೆದ ರಾಜಕೀಯ ರ‍್ಯಾಲಿ ವೇಳೆ ಕಾಲ್ತುಳಿತ ಸಂಭವಿಸಿ 41 ಜನರು ಮೃತಪಟ್ಟು, ಹಲವರು ಗಾಯಗೊಂಡಿದ್ದರು. ಈ ತನಿಖೆಯನ್ನು ಮೇಲ್ವಿಚಾರಣೆ ಮಾಡಲು ನಿವೃತ್ತ ನ್ಯಾಯಾಧೀಶರಾದ ಅಜಯ್ ರಸ್ತೋಗಿ ಅವರ ಅಧ್ಯಕ್ಷತೆಯಲ್ಲಿ ಮೂರು ಸದಸ್ಯರ ಸಮಿತಿಯನ್ನ ಕೂಡ ಸುಪ್ರೀಂ ಕೋರ್ಟ್ ರಚನೆ ಮಾಡಿದೆ.

ಇದು ರಾಷ್ಟ್ರವನ್ನೇ ಬೆಚ್ಚಿಬೀಳಿಸಿದ ಘಟನೆಯಾಗಿದೆ. ನ್ಯಾಯಯುತ ಮತ್ತು ನಿಷ್ಪಕ್ಷಪಾತ ತನಿಖೆಯ ಅಗತ್ಯವಿದೆ ಎಂದು ಕೋರ್ಟ್ ತಿಳಿಸಿದೆ. ನಟ ದಳಪತಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ ಪಕ್ಷದಿಂದ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ಬಳಿಕ ಸುಪ್ರೀಂ ಕೋರ್ಟ್ ಸಿಬಿಐ ತನಿಖೆಗೆ ಆದೇಶಿಸಿದೆ. ಸುಪ್ರೀಂ ಕೋರ್ಟ್‌ನ ಈ ಆದೇಶದಿಂದಾಗಿ ಸಿಎಂ ಎಂ.ಕೆ ಸ್ಟಾಲಿನ್ ನೇತೃತ್ವದ ಸರ್ಕಾರಕ್ಕೆ ಹಿನ್ನಡೆ ಉಂಟಾಗಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026