Press ID & Credential Portal
Apply / Verify  ➔
LIVE TV LocalCrimeNationalInternationalPoliticsFinancialEducationTechnologyEntertainmentSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
National News

ದೇಶಾದ್ಯಂತ ನೀಟ್ ಪ್ರತಿಭಟನಾಕಾರರ ವಿರುದ್ಧದ ಎಲ್ಲ ಎಫ್‌ಐಆರ್ ರದ್ದುಗೊಳಿಸಿದ ಸುಪ್ರೀಂ ಕೋರ್ಟ

ಹೊಸದಿಲ್ಲಿ, ಸೆ 1 : (ಸಮದರ್ಶಿ ಸುದ್ದಿ) - ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿಸಿ ಜುಲೈನಲ್ಲಿ ನಡೆದ ವಿದ್ಯಾರ್ಥಿಗಳ ಪ್ರತಿಭಟನೆಗೆ ಸಂಬಂಧಿಸಿದಂತೆ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ ಎಫ್‌ಐಆರ್‌ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ.

‘ಕಾಕ್ರೋಚ್ ಜನತಾ ಪಾರ್ಟಿ’ (ಸಿಜೆಪಿ)ಯ ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಪ್ರಕರಣಗಳಿಗೆ ಸಂಬಂಧಿಸಿದಂತೆ, ಸಂವಿಧಾನದ ವಿಧಿ 142ರ ಅಡಿಯಲ್ಲಿ ತನಗಿರುವ ವಿಶೇಷ ಅಧಿಕಾರವನ್ನು ಬಳಸಿಕೊಂಡ ನ್ಯಾಯಾಲಯ, ಜುಲೈ ತಿಂಗಳ ವಿದ್ಯಾರ್ಥಿ ಪ್ರತಿಭಟನೆಗೆ ಸಂಬಂಧಿಸಿದ ಎಫ್‌ಐಆರ್‌ಗಳನ್ನು ಸಂಪೂರ್ಣವಾಗಿ ವಜಾಗೊಳಿಸಿದೆ.

ಈ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 5ರಂದು ನಡೆಸಲು ಉದ್ದೇಶಿಸಿದ್ದ ಬೃಹತ್ ಪ್ರತಿಭಟನಾ ಮೆರವಣಿಗೆಯನ್ನು ಹಿಂಪಡೆಯುವುದಾಗಿ ಸಿಜೆಪಿ ಘೋಷಿಸಿದೆ. ದೆಹಲಿ ಸೇರಿದಂತೆ ವಿವಿಧೆಡೆ ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿಸಿ ನಡೆದ ಪ್ರತಿಭಟನೆಗಳಲ್ಲಿ ಭಾಗವಹಿಸಿದ್ದವರ ವಿರುದ್ಧದ ಪ್ರಕರಣಗಳನ್ನು ಹಿಂಪಡೆಯುವಂತೆ ಕೇಂದ್ರ ಸರ್ಕಾರ ಹಾಗೂ ನಾಲ್ಕು ರಾಜ್ಯಗಳು ಸಲ್ಲಿಸಿದ್ದ ಮನವಿಯ ವಿಚಾರಣೆ ವೇಳೆ ಈ ಬೆಳವಣಿಗೆ ನಡೆದಿದೆ.

ನ್ಯಾಯಾಲಯದ ಆದೇಶದ ಸಂಪೂರ್ಣ ಜಾರಿಗೆ ಒತ್ತಾಯ

ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ನೇತೃತ್ವದ ತ್ರಿಸದಸ್ಯ ಪೀಠದ ಮುಂದೆ ಸಿಜೆಪಿ ಸಹ-ಸಂಚಾಲಕ ಸೌರವ್ ದಾಸ್ ಮಾತನಾಡಿ, ಕೇಂದ್ರ ಸರ್ಕಾರ ನೀಡಿರುವ ಸಕಾರಾತ್ಮಕ ಭರವಸೆಗಳು, ನ್ಯಾಯಾಲಯದ ಗೌರವ ಹಾಗೂ ನ್ಯಾಯಾಲಯ ನೀಡುತ್ತಿರುವ ಆದೇಶವನ್ನು ಪರಿಗಣಿಸಿ ಸೆಪ್ಟೆಂಬರ್ 5ರಂದು ಕರೆ ನೀಡಿದ್ದ ಪ್ರತಿಭಟನೆಯನ್ನು ಹಿಂಪಡೆಯುತ್ತಿರುವುದಾಗಿ ತಿಳಿಸಿದರು.

ನ್ಯಾಯಾಲಯದ ಆದೇಶವು ಸಂಪೂರ್ಣವಾಗಿ ಜಾರಿಯಾಗುವುದನ್ನು ನಿರೀಕ್ಷಿಸುತ್ತೇವೆ ಎಂದು ಅವರು ಹೇಳಿದರು.

ಜುಲೈನಲ್ಲಿ ನಡೆದ ಪ್ರತಿಭಟನೆಗಳಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿಗಳ ವಿರುದ್ಧ ದಾಖಲಾಗಿದ್ದ ಎಫ್‌ಐಆರ್‌ಗಳನ್ನು ರದ್ದುಗೊಳಿಸುವಂತೆ ದೆಹಲಿ ಪೊಲೀಸ್ ಹಾಗೂ ಮಹಾರಾಷ್ಟ್ರ, ಅಸ್ಸಾಂ, ಬಿಹಾರ ಮತ್ತು ಪಶ್ಚಿಮ ಬಂಗಾಳ ಸರ್ಕಾರಗಳು ಸಲ್ಲಿಸಿದ್ದ ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ನಡೆಸಿತು.

ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಪ್ರಕರಣಗಳನ್ನು ಹಿಂಪಡೆಯುವ ಕುರಿತು ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳ ಮನವಿಯನ್ನು ಪರಿಗಣಿಸಿದ ನ್ಯಾಯಾಲಯ, ಸಂವಿಧಾನದ ವಿಧಿ 142ರ ಅಡಿಯಲ್ಲಿ ತನ್ನ ವಿಶೇಷ ಅಧಿಕಾರವನ್ನು ಬಳಸಿ ಎಫ್‌ಐಆರ್‌ಗಳನ್ನು ರದ್ದುಗೊಳಿಸುವ ಆದೇಶ ನೀಡಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಿಸೆಂಬರ್ 7ರಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಸಾಧ್ಯತೆಎಂಎಸ್‌ಪಿ ಆಧರಿಸಿ ಕಬ್ಬಿಗೆ ದರ: ಡಿ.ಕೆ. ಶಿವಕುಮಾರಮತದಾರರ ಅಂತಿಮ ಪಟ್ಟಿಯಲ್ಲಿ ನಿಮ್ಮ ಹೆಸರು ಪರಿಶೀಲಿಸಿಚುನಾವಣಾ ಆಯೋಗದ ಸಮರ್ಥನೆಗೆ ಆಕ್ಷೇಪಣೆ ಸಲ್ಲಿಸಲು 10 ದಿನ ಕಾಲಾವಕಾಶಸಚಿವ ಜಿ. ಪರಮೇಶ್ವರ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು‘ಬಟ್ಟೆ ಹರಿದು ರಕ್ತಸ್ರಾವವಾಗಿತ್ತು’: ಟ್ರಂಪ್ ವಿರುದ್ಧ ಮಾಜಿ ಮಿಸ್ ಸ್ವಿಟ್ಜರ್ಲ್ಯಾಂಡ ಅತ್ಯಾಚಾರ ಆರೋಪ!ಮತದಾರರ ಪಟ್ಟಿಯಿಂದ 1 ಕೋಟಿ ಹೆಸರು ಡಿಲೀಟ್!ಕಬ್ಬಿನ ದರ ನಿಗದಿ ಸಭೆಯಲ್ಲಿ ರೈತ ಮುಖಂಡರ ಮಾರಾಮಾರಿ: ಸುವರ್ಣಸೌಧದಲ್ಲೇ ಕೈಕೈ ಮಿಲಾಯಿಸಿದ ಎರಡು ಬಣಗಳು!ಕನ್ನಡಿಗರಿಗೆ ಉದ್ಯೋಗ ನಿರಾಕರಿಸಿದರೆ ಖಾಸಗಿ ಸಂಸ್ಥೆಗಳ ವಿರುದ್ಧ ಕ್ರಮ: ಡಿ.ಕೆ. ಶಿವಕುಮಾರಜಲವಿದ್ಯುತ್ ಯೋಜನೆ ವಿರೋಧಿಸಿ ಅರುಣಾಚಲದಲ್ಲಿ ಹಿಂಸಾಚಾರ: ಭದ್ರತಾ ಪಡೆಯ ಎರಡು ತುಕಡಿ ರವಾನೆ