LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

(PCV)ಯನ್ನು 5 ವರ್ಷ ದೊಳಗಿನ ಮಕ್ಕಳಿಗೆ ಹಾಕಿಸಲು ಮನವಿ: ಸುರಳ್ಕರ್ ವಿಕಾಸ್ ಕಿಶೋರ್

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ನ್ಯುಮೋಕೋಕಲ್ ಕಾಂಜುಗೇಟ್ ಲಸಿಕೆ(PCV)ಯನ್ನು 5 ವರ್ಷ ದೊಳಗಿನ ಮಕ್ಕಳಿಗೆ ಹಾಕಿಸಲು ಆರೋಗ್ಯ ವಿಭಾಗದ ವಿಶೇಷ ಆಯುಕ್ತರಾದ ಸುರಳ್ಕರ್ ವಿಕಾಸ್ ಕಿಶೋರ್ ರವರು ನಾಗರೀಕರಲ್ಲಿ ಅರಿವು ಮೂಡಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ನ್ಯುಮೋನಿಯಾ ಲಸಿಕೆ ಸಂಬಂಧಿಸಿದಂತೆ ಆರೋಗ್ಯ ಅಧಿಕಾರಿಗಳ ಜೊತೆ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಸಾರ್ವತ್ರಿಕ ಲಸಿಕಾ ಕಾರ್ಯಕ್ರಮದ ಅಡಿಯಲ್ಲಿ ಮಕ್ಕಳಿಗೆ ನ್ಯುಮೋನಿಯಾ ಹರಡದಂತೆ ಪಾಲಿಕೆ ಆರೋಗ್ಯ ಇಲಾಖೆಯ ವತಿಯಿಂದ ನ್ಯುಮೋಕೋಕಲ್ ಕಾಂಜುಗೇಟ್ ಲಸಿಕೆ(PCV)ಯನ್ನು 5 ವರ್ಷದೊಳಗಿನ ಮಕ್ಕಳಿಗೆ ಉಚಿತವಾಗಿ ನೀಡಲಾಗುತ್ತಿದೆ ಎಂದು ತಿಳಿಸಿದರು.

ನ್ಯುಮೋನಿಯಾ ಎಂದರೇನು?

ಇದು ಶ್ವಾಸಕೋಶದ ಸೋಂಕು, ಶ್ವಾಸಕೋಶದಲ್ಲಿನ ಗಾಳಿಯ ಚೀಲಗಳಿಗೆ ಹರಡಿ ಸೋಂಕಿನ ದ್ರವದಿಂದ ಶ್ವಾಸಕೋಶವನ್ನು ಬಲಹೀನಗೊಳಿಸುತ್ತದೆ. ನ್ಯುಮೋನಿಯಾ ಸೋಂಕು ಎರಡು ಶ್ವಾಸಕೋಶಗಳಿಗೂ ಹರಡಬಹುದು. ಸರಿಯಾದ ಸಮಯಕ್ಕೆ ಸರಿಯಾದ ಆರೈಕೆಯಿಂದ ಸೋಂಕು ತಗುಲಿದ ಮಗುವನ್ನು ರಕ್ಷಿಸಬಹುದು.

ನ್ಯುಮೋನಿಯಾ ರೋಗದ ಲಕ್ಷಣಗಳು


1. ಕೆಮ್ಮು ಮತ್ತು ನೆಗಡಿ.

2. ತೀವ್ರ ಜ್ವರ.

3. ಉಸಿರಾಟದ ತೊಂದರೆ, ಉಸಿರಾಟದ ಸಮಯದಲ್ಲಿ ಪಕ್ಕೆ ಅಥವಾ ಎದೆಯ ಸೆಳೆತ.

4. ತೀವ್ರ ಉಸಿರಾಟ.

5. ಹಸಿವು ಇಲ್ಲದಿರುವುದು, ಆಹಾರ ಸೇವನೆ ಕಷ್ಟಕರವಾಗುವುದು.

6. ಸುಸ್ತು.

7. ಫಿಟ್ಸ್ ಬರುವುದು.

8. ಕೆಮ್ಮು ಮತ್ತು ಹಳದಿ / ರಕ್ತದ ಕಫ ಬರುವುದು.

ಈ ಮೇಲ್ಕಂಡ ಲಕ್ಷಣಗಳು ಕಾಣಿಸಿಕೊಂಡಲ್ಲಿ ಹತ್ತಿರದ ಸರ್ಕಾರಿ ವೈದ್ಯರನ್ನು ಭೇಟಿ ಮಾಡಬೇಕು.

ತಡೆಗಟ್ಟುವ ಸರಳ ಪರಿಹಾರಗಳು:


1. ಮಗುವಿಗೆ ಮೊದಲ 6 ತಿಂಗಳು ಸಂಪೂರ್ಣವಾಗಿ ಎದೆಹಾಲು ನೀಡುವುದು.

2. ವಿಶೇಷವಾಗಿ 6 ತಿಂಗಳಿನಿಂದ 2 ವರ್ಷದೊಳಗಿನ ಮಕ್ಕಳಿಗೆ ಉತ್ತಮ ಪೋಷಣೆ ನೀಡುವುದು.

3. ಸುರಕ್ಷಿತ ಕುಡಿಯುವ ನೀರು ಮತ್ತು ಉತ್ತಮ ನೈರ್ಮಲ್ಯ.

4. ಸಾಬೂನು ಬಳಸಿ ಕೈಗಳನ್ನು ಶುಚಿಗೊಳಿಸುವುದು.

5. ಮಗುವಿಗೆ ಸಮಯಕ್ಕೆ ಸರಿಯಾಗಿ ಚುಚ್ಚುಮದ್ದು ಹಾಕಿಸುವುದು.

6. ಮನೆಯೊಳಗೆ ಉತ್ತಮ ಗಾಳಿ ಬೆಳಕಿನ ವ್ಯವಸ್ಥೆ.

5 ವರ್ಷದೊಳಗಿನ ಮಕ್ಕಳಿಗೆ ತಪ್ಪದೇ ನ್ಯುಮೋಕೋಕಲ್ ಕಾಂಜುಗೇಟ್ ಲಸಿಕೆ ಹಾಕಿಸಿ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಾರ್ಡ್‌ವಾರು ಪರಿಷ್ಕೃತ ಕರಡು ಮತದಾರರ ಪಟ್ಟಿ ಪ್ರಕಟಣೆ – ದೂರು/ಆಕ್ಷೇಪಣೆ ಸಲ್ಲಿಕೆ ಅವಧಿ ವಿಸ್ತರಣೆಚಲನಚಿತ್ರ ಪೋಷಕ ಕಲಾವಿದರ ಸಂಘದ ಚುನಾವಣೆಗೆ ನ್ಯಾಯಾಲಯದ ತಡೆಭಾರತಿ ಟೀಚರ್ 7ನೇ ತರಗತಿಗೆ @ 50ರ ಸಂಭ್ರಮಕಾಂಗ್ರೆಸ್ ಪಕ್ಷಕ್ಕೆ ವಿಚ್ಛೇದನ ಕೊಟ್ಟಿದ್ದಕ್ಕೆ ಕಾರಣ ಕೊಟ್ಟ ಮಾಜಿ ಪ್ರಧಾನಿಗಳುಅಂಕಿ-ಅಂಶಗಳ ಬಜೆಟ್‌, ದಿಕ್ಕು ದಿಸೆಯಿಲ್ಲದ ಆಯವ್ಯಯ’: ಅರವಿಂದ ಬೆಲ್ಲದಮಾ.21ರಂದು ರಾಮಾನಂದಾಚಾರ್ಯರ ಆಧ್ಯಾತ್ಮಿಕ ಪ್ರವಚನಗ್ರಾಮ ಸಹಾಯಕರ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಸಹಕಾರಿ ಧುರೀಣ ಕೆ.ಹೆಚ್ ಪಾಟೀಲರು ಅಪರೂಪದ ರಾಜಕಾರಣ: ಮುಖ್ಯಮಂತ್ರಿ ಸಿದ್ದರಾಮಯ್ಯಜನ್ಮಧಾತೆ ಕನ್ನಡ ಸಿನೆಮಾ ಮಾ.20 ರಂದು ಪ್ರದರ್ಶನಕನ್ನಡಿಗರ ಉದ್ಯೋಗಿಗಳನ್ನು ಕೇಂದ್ರ ಸರ್ಕಾರ ಅತಂತ್ರ ಸ್ಥಿತಿಗೆ ತಳ್ಳಿದೆ: ಸಿಎಂ