Press ID & Credential Portal
Apply / Verify  ➔
LIVE TV LocalCrimeNationalInternationalPoliticsEducationSportsHealthFeature
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ರಹಸ್ಯ ವರದಿ ಖರ್ಗೆ ಮಾತ್ರ ಬಹಿರಂಗಪಡಿಸಲು ಸಾಧ್ಯ: ಸುಶೀಲ್ ಕುಮಾರ್ ಶಿಂಧೆ

ಸುದ್ದಿಮೂಲ ವಾರ್ತೆ
ಬೆಂಗಳೂರು, ಮೇ 15: ಮುಖ್ಯಮಂತ್ರಿ ಸ್ಥಾನದ ಮುಂಚೂಣಿಯಲ್ಲಿರುವ ಹಿರಿಯ ನಾಯಕರಾದ ಸಿದ್ದರಾಮಯ್ಯ ಮತ್ತು ಶಿವಕುಮಾರ್ ಅವರ ಆಯ್ಕೆ ಕುರಿತಂತೆ ಗೌಪ್ಯ ವರದಿ ಆಧಾರದ ಮೇಲೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಕಾಂಗ್ರೆಸ್ ನಾಯಕ ಮತ್ತು ಶಾಸಕಾಂಗ ಪಕ್ಷದ ಸಭೆಯ ಕೇಂದ್ರ ವೀಕ್ಷಕ ಸುಶೀಲ್ ಕುಮಾರ್ ಶಿಂಧೆ ಹೇಳಿದ್ದಾರೆ.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕದ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಮತ್ತು ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆಸಿ ವೇಣುಗೋಪಾಲ್ ಅವರೊಂದಿಗೆ ವೀಕ್ಷಕರು ದೆಹಲಿಗೆ ತೆರಳಿದ್ದಾರೆ.

ಇದಕ್ಕೂ ಮುನ್ನ ಬೆಂಗಳೂರಿನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, 'ನಮ್ಮ ವರದಿ (ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಸ್ವೀಕರಿಸಿದ ಪ್ರತಿಕ್ರಿಯೆ) ರಹಸ್ಯವಾಗಿದೆ. ನಾವು ಅದನ್ನು ನಾವು ಬಹಿರಂಗಪಡಿಸಲು ಸಾಧ್ಯವಿಲ್ಲ. ನಮ್ಮ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಾತ್ರ ಅದನ್ನು ಬಹಿರಂಗಪಡಿಸಲು ಸಾಧ್ಯ' ಎಂದರು.

ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಶಿಂಧೆ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಸಿಂಗ್ ಮತ್ತು ಎಐಸಿಸಿ ಮಾಜಿ ಪ್ರಧಾನ ಕಾರ್ಯದರ್ಶಿ ದೀಪಕ್ ಬಬಾರಿಯಾ ಅವರನ್ನು ಸಿಎಲ್‌ಪಿ ನಾಯಕನ ಆಯ್ಕೆಗೆ ವೀಕ್ಷಕರನ್ನಾಗಿ ಮಲ್ಲಿಕಾರ್ಜುನ ಖರ್ಗೆ ನಿಯೋಜಿಸಿದ್ದರು.

ರಾಜ್ಯದಲ್ಲಿ ಕಾಂಗ್ರೆಸ್ ಭರ್ಜರಿ ಬಹುಮತ ಪಡೆದಿದ್ದು, ಮುಖ್ಯಮಂತ್ರಿ ಸ್ಥಾನಕ್ಕಾಗಿ ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ತೀವ್ರ ಪೈಪೋಟಿ ನಡೆಸುತ್ತಿದ್ದಾರೆ. ಭಾನುವಾರ ನಡೆದ ಕರ್ನಾಟಕ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ರಾಜ್ಯದ ನೂತನ ಮುಖ್ಯಮಂತ್ರಿಯನ್ನು ಆಯ್ಕೆ ಮಾಡಲು ಎಐಸಿಸಿ ಅಧ್ಯಕ್ಷ ಎಂ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಅಧಿಕಾರ ನೀಡುವ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಲಾಯಿತು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶ್ರೀ ಶಂಕರಭಾರತಿ ಶಾಲೆಯ ವಾರ್ಷಿಕೋತ್ಸವ ಮಾರ್ಕ್‌ಸ್‌ ಕಾರ್ಡ್‌ಗಾಗಿ ಮಕ್ಕಳನ್ನು ತಯಾರು ಮಾಡಬೇಡಿ - ಬೆಳಗಲ್ಸಮಾಜ ಸೇವಾ ಮನೋಭಾವ ರೂಪಿಸಿಕೊಳ್ಳಿ - ಪ್ರೊ. ಶಿವಾನಂದ ಕೆಳಗಿನಮನಿಚನ್ನಪ್ಪ ಅವರಿಗೆ ರಾಜ್ಯಮಟ್ಟದ ಜ್ಯೋತಿಬಾ ಪುಲೆ ಪ್ರಶಸ್ತಿಜಿಲ್ಲಾ ಟಾಸ್‌‌ಕೆರ್ಸ್ ಸಮಿತಿ ಸಭೆ ‘ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಿ’ರಾಷ್ಟ್ರೀಯ ಹೆದ್ದಾರಿ ಪಕ್ಕದ ಜಮೀನುಗಳಿಗೆ ಹೋಗಲು ದಾರಿ ಮಾಡಿಕೊಡಲು ಆಗ್ರಹಜವಾಹರ ನವೋದಯ ವಿದ್ಯಾರ್ಥಿ ಪ್ರಜ್ವಲ್ ರಾಜ್ಯಕ್ಕೆ ಪ್ರಥಮಮುದಗಲ್ ಪಿಎಸ್‌ಐ ಸೇರಿ ಪೊಲೀಸರ ಅಮಾನತ್ತು ಮಾಡಲು ಒತ್ತಾಯಹುಲಿಕೇರಿ ಒತ್ತುವರಿಯಾಗಿದ್ದರೆ ಕ್ರಮ ಕೈಗೊಳ್ಳಲಿ - ಹಿಟ್ನಾಳಪಟ್ಟಣ ಸಹಕಾರ ಬ್ಯಾಾಂಕ್ ಮಹಾಮಂಡಳದ ನಿರ್ದೇಶಕರಿಗೆ ಡಿ.ಎಚ್.ಓ ಸನ್ಮಾನ ಗೆಳೆಯರ ಬಳಗದ ಬೆಂಬಲ, ನೌಕರರೊಂದಿಗಿನ ಒಳ್ಳೆಯ ಒಡನಾಟದಿಂದ ಉನ್ನತ ಸ್ಥಾನಮಾನಇಂದು ಗ್ರಾಮೀಣ ಭಾಗದ ವಿವಿಧ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯ