Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಪಾಕಿಸ್ತಾನ–ಐಸಿಸ್‌ ನಂಟಿನ ಶಂಕೆ : ಕಲಬುರಗಿಯಲ್ಲಿ ಇಬ್ಬರು ವಶಕ್ಕೆ

ಕಲಬುರಗಿ: ಪಾಕಿಸ್ತಾನದ ಜೊತೆ ಸಂಪರ್ಕ ಹೊಂದಿರುವ ಹಾಗೂ ಉಗ್ರ ಸಂಘಟನೆ ಐಸಿಸ್‌ (ISIS) ಜೊತೆ ಶಂಕಿತ ನಂಟು ಹೊಂದಿರುವ ಆರೋಪದ ಮೇರೆಗೆ ಉತ್ತರ ಪ್ರದೇಶ ಮೂಲದ ಇಬ್ಬರನ್ನು ಕಲಬುರಗಿ ಜಿಲ್ಲೆಯಲ್ಲಿ ಉತ್ತರ ಪ್ರದೇಶದ ಭಯೋತ್ಪಾದನೆ ನಿಗ್ರಹ ದಳ (UP ATS) ಬಂಧಿಸಿದೆ.
ಕೇಂದ್ರ ಗುಪ್ತಚರ ಸಂಸ್ಥೆಯಿಂದ ಲಭಿಸಿದ ಮಾಹಿತಿಯ ಆಧಾರದ ಮೇಲೆ ಈ ಕಾರ್ಯಾಚರಣೆ ನಡೆಸಲಾಗಿದೆ ಎಂದು ತಿಳಿದುಬಂದಿದೆ.
ಕಲಬುರಗಿ ತಾಲೂಕಿನ ಉಪ್ಪಳಂ ಗ್ರಾಮದ ಹೊರವಲಯದಲ್ಲಿ ಇಬ್ಬರು ಶಂಕಿತರನ್ನು ಉತ್ತರ ಪ್ರದೇಶ ಎಟಿಎಸ್‌ (ATS) ತಂಡ ವಶಕ್ಕೆ ಪಡೆದಿದೆ. ಬಂಧಿತರನ್ನು ಉತ್ತರ ಪ್ರದೇಶ ಮೂಲದ ಮೊಹಮ್ಮದ್ ಸಮೀರ್ ಹಾಗೂ ಸಲ್ಮಾನ್ ಎಂದು ಗುರುತಿಸಲಾಗಿದೆ. ಸದ್ಯ ಇಬ್ಬರನ್ನೂ ಕಲಬುರಗಿಯಲ್ಲಿನ ಬಹಿರಂಗಪಡಿಸದ ಸ್ಥಳದಲ್ಲಿ ವಿಚಾರಣೆ ನಡೆಸಲಾಗುತ್ತಿದೆ ಎನ್ನಲಾಗಿದೆ. ಪಾಕಿಸ್ತಾನದ ಜೊತೆಗೆ ಅವರಿಗಿದ್ದಿರಬಹುದಾದ ಸಂಪರ್ಕ, ಐಸಿಸ್‌ ಜೊತೆ ಯಾವುದೇ ರೀತಿಯ ಸಂಬಂಧವಿದೆಯೇ ಹಾಗೂ ಅವರ ಚಟುವಟಿಕೆಗಳು ಮತ್ತು ಸಂವಹನಗಳ ಸ್ವರೂಪವೇನು ಎಂಬುದರ ಕುರಿತು ತನಿಖೆ ಮುಂದುವರಿದಿದೆ.
ಬಂಧಿತ ಇಬ್ಬರೂ ಕಲಬುರಗಿ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಉತ್ತರ ಪ್ರದೇಶದಿಂದ ಕರ್ನಾಟಕಕ್ಕೆ ಬಂದು ಉದ್ಯೋಗದಲ್ಲಿದ್ದ ಇವರ ಚಟುವಟಿಕೆಗಳ ಕುರಿತು ಕೇಂದ್ರ ಗುಪ್ತಚರ ಸಂಸ್ಥೆಗೆ ಮಾಹಿತಿ ಲಭಿಸಿತ್ತು ಎನ್ನಲಾಗಿದ್ದು, ಆ ಮಾಹಿತಿ ಆಧರಿಸಿ ಉತ್ತರ ಪ್ರದೇಶ ಎಟಿಎಸ್‌ ತನಿಖೆ ನಡೆಸಿದೆ.
ನಕ್ಷೆಗಳು ಪತ್ತೆ
ಎಟಿಎಸ್‌ ಕಾರ್ಯಾಚರಣೆಯ ವೇಳೆ ಸಮೀರ್ ವಾಸವಿದ್ದ ಕೊಠಡಿಯಲ್ಲಿ ಕೆಲವು ನಕ್ಷೆಗಳು ಪತ್ತೆಯಾಗಿರುವುದು ತನಿಖೆಯಲ್ಲಿ ಪ್ರಮುಖ ಅಂಶವಾಗಿದೆ. ಈ ನಕ್ಷೆಗಳು ಯಾವ ಉದ್ದೇಶಕ್ಕಾಗಿ ಇಡಲಾಗಿದ್ದವು, ಅವುಗಳಿಗೂ ಆರೋಪಿಸಲಾಗುತ್ತಿರುವ ಚಟುವಟಿಕೆಗಳಿಗೂ ಯಾವುದೇ ಸಂಬಂಧವಿದೆಯೇ ಎಂಬುದನ್ನು ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ.
ನಕ್ಷೆಗಳ ಪತ್ತೆ ಹಾಗೂ ಇತರ ಆರೋಪಗಳಿಗೆ ಸಂಬಂಧಿಸಿದಂತೆ ಕಲಬುರಗಿಯ ವಿಶ್ವವಿದ್ಯಾಲಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ವಶಪಡಿಸಿಕೊಂಡಿರುವ ದಾಖಲೆಗಳು ಹಾಗೂ ಇತರ ಸಾಕ್ಷ್ಯಗಳ ಪರಿಶೀಲನೆ ಬಳಿಕ ಪ್ರಕರಣದ ಕುರಿತು ಮತ್ತಷ್ಟು ಮಾಹಿತಿ ಹೊರಬರುವ ಸಾಧ್ಯತೆಯಿದೆ.

ಕೇಂದ್ರ ಗುಪ್ತಚರ ಸಂಸ್ಥೆಯಿಂದ ಉತ್ತರ ಪ್ರದೇಶ ಎಟಿಎಸ್‌ಗೆ ಮಾಹಿತಿ ಬಂದ ಬಳಿಕ ಅಧಿಕಾರಿಗಳು ಕಲಬುರಗಿ ಪ್ರದೇಶದಲ್ಲಿ ಶಂಕಿತರ ಚಲನವಲನದ ಬಗ್ಗೆ ಮಾಹಿತಿ ಕಲೆಹಾಕಿ ಅವರನ್ನು ಪತ್ತೆಹಚ್ಚಿದ್ದಾರೆ ಎನ್ನಲಾಗಿದೆ. ಬಳಿಕ ಸೂಕ್ತ ಕಾರ್ಯಾಚರಣೆ ನಡೆಸಿ ಇಬ್ಬರನ್ನೂ ವಶಕ್ಕೆ ಪಡೆಯಲಾಗಿದೆ.
ಸದ್ಯ ತನಿಖಾಧಿಕಾರಿಗಳು ಆರೋಪಿಗಳ ಮೊಬೈಲ್‌ಗಳು, ಸಂವಹನದ ವಿವರಗಳು, ಸಂಪರ್ಕದಲ್ಲಿದ್ದ ವ್ಯಕ್ತಿಗಳು ಹಾಗೂ ಪಾಕಿಸ್ತಾನ ಅಥವಾ ಐಸಿಸ್‌ ಜೊತೆ ಯಾವುದೇ ನೇರ ಅಥವಾ ಪರೋಕ್ಷ ಸಂಪರ್ಕವಿದೆಯೇ ಎಂಬುದನ್ನು ಪರಿಶೀಲಿಸುತ್ತಿದ್ದಾರೆ. ಆದರೆ ತನಿಖೆಯಿಂದ ಇನ್ನೂ ಅಂತಿಮವಾಗಿ ಸಾಬೀತಾಗಿಲ್ಲ. ಮುಂದಿನ ವಿಚಾರಣೆ ಮತ್ತು ಸಾಕ್ಷ್ಯಗಳ ಪರಿಶೀಲನೆಯಿಂದ ಮಾತ್ರ ಆರೋಪಗಳ ನೈಜ ಸ್ವರೂಪ ಸ್ಪಷ್ಟವಾಗಬೇಕಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಾ. ಪ್ರಭಾಕರ ಕೋರೆ ಅವರಿಗೆ ಪದ್ಮಶ್ರೀ ಪ್ರಶಸ್ತಿ: ಲಿಂಗಾಯತ ಸಮಾಜದ ವತಿಯಿಂದ ಭವ್ಯ ಸನ್ಮಾನಥ್ರೋ ಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಬೆಳಗಾವಿ ಜಿಎ ಪ್ರೌಢಶಾಲೆಯ ಬಾಲೆಯರುಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ಪ್ರಕಟ ಜಿಲ್ಲೆಯ ಉತ್ತಮ ಶಿಕ್ಷಕರಿಗೆ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿಬೈಕ್ ಕಳ್ಳನನ್ನು ಬಂಧಿಸಿದ ಪೊಲೀಸರುಭೀಕರ ರಸ್ತೆ ಅಪಘಾತ: ಇಬ್ಬರು ಯುವಕರ ದುರ್ಮರಣಪ್ರಜಾಪಿತ ಬ್ರಹ್ಮಾಕುಮಾರಿ ಶಹಾಪುರ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮಾಚರಣೆಸುರಂಗದಲ್ಲಿ 9 ದಿನ ಹರೇ ಕೃಷ್ಣ ಪಠಿಸುತ್ತಿದ್ದವ ಜನ್ಮಾಷ್ಟಮಿಯಂದು ಹೊರಬಂದಎರಡೇ ತಿಂಗಳಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಇಬ್ಬಾಗ: ಅಸ್ತಿತ್ವಕ್ಕೆ ಬಂತು ಹೊಸ ಬಣ!ಅಯೋಧ್ಯೆ ದೇಗುಲದ ಅಭಿವೃದ್ಧಿಗೆ ಭಕ್ತಾದಿಗಳ ಬೆಂಬಲ ಕೋರಿದ ರಾಮಮಂದಿರದ ನೂತನ ಸಿಇಒ