ಮುಸಲ್ಮಾನರಿಗೆ ಮತದಾನದ ಹಕ್ಕು ಸ್ವಾಮೀಜಿ ಹೇಳಿಕೆ: ಎ.ಎಂ.ಇಮಾಮ್ ಖಂಡನೆ.!
ಚಿತ್ರದುರ್ಗ : ಈ ದೇಶದಲ್ಲಿರುವ ಮುಸಲ್ಮಾನರಿಗೆ ಮತದಾನದ ಹಕ್ಕು ಇಲ್ಲದಂತೆ ಮಾಡಿದರೆ ಜನಪ್ರತಿನಿಧಿಗಳು ಓಲೈಕೆ ರಾಜಕಾರಣ ಮಾಡುವುದಿಲ್ಲವೆಂದು ವಿಶ್ವಒಕ್ಕಲಿಗರ ಮಹಾಸಂಸ್ಥಾನ ಮಠದ ಚಂದ್ರಶೇಖರ ಸ್ವಾಮೀಜಿ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಭಾರತೀಯ ಕಿಸಾನ್ ಸಂಘದಿಂದ ನಡೆದ ಪ್ರತಿಭಟನೆಯಲ್ಲಿ ಹೇಳಿರುವುದನ್ನು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎ.ಎಂ.ಇಮಾಮ್ ಖಂಡಿಸಿದ್ದಾರೆ.
ಪ್ರಜಾಪ್ರಭುತ್ವದಲ್ಲಿ ಸಂವಿಧಾನ ಪ್ರತಿಯೊಬ್ಬರಿಗೂ ಮತದಾನದ ಹಕ್ಕು ನೀಡಿದೆ. ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಾಗಿನಿಂದಲೂ ಎಲ್ಲಾ ಜಾತಿ ಧರ್ಮದವರು ಮತ ಚಲಾಯಿಸುತ್ತಿದ್ದಾರೆ. ಇಂತಹ ಹೇಳಿಕೆಗಳಿಂದ ಹಿಂದೂ-ಮುಸಲ್ಮಾನರ ನಡುವೆ ಕೋಮು ದ್ವೇಷ ಬಿತ್ತಿದಂತಾಗುತ್ತದೆ. ಮುಸಲ್ಮಾನರಿಗೆ ಮತದಾನದ ಹಕ್ಕು ಇಲ್ಲದಂತೆ ಮಾಡಬೇಕೆಂಬ ಹೇಳಿಕೆ ನೀಡುವ ಸ್ವಾತಂತ್ರ್ಯ ಚಂದ್ರಶೇಖರ ಸ್ವಾಮೀಜಿಗೆ ಇಲ್ಲವೆಂದು ಇಮಾಮ್ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.