LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಕಾಂತಾರ ಕ್ಲೈಮ್ಯಾಕ್ಸ್ ಶೂಟ್ ವೇಳೆ ಊದಿಕೊಂಡ ರಿಷಬ್ ಕಾಲು

ರಿಷಬ್ ಶೆಟ್ಟಿ ನಟಿಸಿ ನಿರ್ದೇಶಿಸಿರುವ ‘ಕಾಂತಾರ: ಚಾಪ್ಟರ್ 1’ ಸಿನಿಮಾ ಬಿಡುಗಡೆ ಆಗಿ ದೊಡ್ಡ ಹಿಟ್ ಆಗಿದೆ. ಇದೀಗ ರಿಷಬ್ ತಮ್ಮ ಕಾಲುಗಳ ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಅಂದಹಾಗೆ ರಿಷಬ್ ಅವರ ಕಾಲುಗಳೇ ಹೇಳುತ್ತಿವೆ ಕಾಂತಾರ ಶೂಟಿಂಗ್​​ನ ಶ್ರಮದ ಕತೆಯನ್ನು. ಚಿತ್ರಗಳ ನೋಡಿ. ಕಾಂತಾರ ಚಾಪ್ಟರ್ 1 ಕ್ಲೈಮ್ಯಾಕ್ಸ್ ಶೂಟಿಂಗ್ ವೇಳೆ ರಿಷಭ್ ಶೆಟ್ಟಿ ಕಾಲು ಊದಿಕೊಂಡಿದೆ. ಶ್ರಮ-ಪರಿಶ್ರಮಕ್ಕೆ ತಕ್ಕ ಫಲ ಈಗ ಕಾಂತಾರ 1 ರಿಸಲ್ಟ್​​ನಲ್ಲಿ ಕಂಡು ಬಂದಿದೆ. ಈ ಫೋಟೋಗಳನ್ನ ಹಂಚಿಕೊಂಡು ಶೂಟಿಂಗ್ ಸಮಯದ ಕಷ್ಟಗಳನ್ನ ಹಂಚಿಕೊಂಡಿರೋ ರಿಷಬ್ ಶೆಟ್ಟಿ ಇದನ್ನು ರಿವೀಲ್ ಮಾಡಿದ್ದಾರೆ.

ಸದ್ಯ ಕಾಂತಾರ 1 ಸಿನಿಮಾ ಬಾಕ್ಸ್ ಆಫೀಸ್ ಚಿಂದಿ ಉಡಾಯಿಸುತ್ತಿದೆ. 600 ಕೋಟಿ ಗಳಿಸಿ ಮುನ್ನುಗ್ಗುತ್ತಿರುವ ಕಾಂತಾರ ಮತ್ತಷ್ಟು ಗಳಿಕೆಯ ಓಟದಲ್ಲಿದೆ. Climax shooting ನ ಸಮಯ… ಊದಿಕೊಂಡಿದ್ದ ಕಾಲು , ನಿತ್ರಾಣವಾಗಿದ್ದ ದೇಹ.. ಇವತ್ತು ಕೋಟ್ಯಂತರ ಜನ ನೋಡಿ ಮೆಚ್ಚುವ ಹಾಗೆ ಆಗಿದೆ.. ಇದು ನಾವು ನಂಬಿರುವ ಶಕ್ತಿಗಳ ಆಶೀರ್ವಾದದಿಂದ ಮಾತ್ರ ಸಾಧ್ಯ .. ಸಿನಿಮಾ ನೋಡಿ ಅಭಿಪ್ರಾಯ ವ್ಯಕ್ತ್ಯಪಡಿಸಿದ ತಮ್ಮೆಲ್ಲರಿಗೂ ಧನ್ಯವಾದಗಳು ಎಂದು ರಿಷಬ್ ಶೆಟ್ಟಿ ಟ್ವೀಟ್ ಮಾಡಿದ್ದಾರೆ. ರಿಷಬ್ ಹಂಚಿಕೊಂಡಿರುವ ಚಿತ್ರಗಳಲ್ಲಿ ರಿಷಬ್ ಕಾಲುಗಳು ಕಪ್ಪೆದ್ದು ಹೋಗಿವೆ. ಬಟ್ಟೆಗಳು ಬಿಗಿಯಾಗಿ ಕಟ್ಟಿದ್ದಕ್ಕೆ ರಕ್ತಚಲನೆ ಇಲ್ಲದೆ ಚರ್ಮ ಮರಗಟ್ಟಿದಂತಾಗಿರುವುದು ಕಾಣುತ್ತಿದೆ. ಕಾಲು ಊದಿಕೊಂಡಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026