Press ID & Credential Portal
Apply / Verify  ➔
LIVE TV LocalCrimeNationalInternationalPoliticsFinancialEducationTechnologyEntertainmentSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ರಾಜ್ಯದಲ್ಲೂ ದಲಿತರು, ಅಲ್ಪಸಂಖ್ಯಾತರ ಹೆಸರು ಡಿಲಿಟ್‌ ಗೆ ವ್ಯವಸ್ಥಿತ ಸಂಚು: ಹರಿಪ್ರಸಾದ

ಬೆಂಗಳೂರು, ಸೆ. 25 : (ಸಮದರ್ಶಿ ಸುದ್ದಿ) - ಎಸ್‌ಐಆರ್‌ ಸೇರಿದಂತೆ ಚುನಾವಣಾ ಪ್ರಕ್ರಿಯೆಗೆ ಸಂಬಂಧಿಸಿದ ಪ್ರಮುಖ ನಿರ್ಧಾರಗಳಲ್ಲಿ ಉಳಿದ ಇಬ್ಬರು ಚುನಾವಣಾ ಆಯುಕ್ತರ ಭಿನ್ನಮತವನ್ನು ಕಡೆಗಣಿಸಿ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ ಕುಮಾರ ಏಕಪಕ್ಷೀಯವಾಗಿ ನಡೆದುಕೊಂಡಿದ್ದಾರೆ ಎಂದು ಆರೋಪಿಸಿರುವ ಕೆಪಿಸಿಸಿ ನಾಯಕ ಬಿ.ಕೆ. ಹರಿಪ್ರಸಾದ್, ಅವರು ತಕ್ಷಣ ಹುದ್ದೆಗೆ ರಾಜೀನಾಮೆ ನೀಡಬೇಕು ಹಾಗೂ ಅವರನ್ನು ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಜಾಪ್ರಭುತ್ವವನ್ನು ರಕ್ಷಿಸುವ ಮಹತ್ವದ ಹೊಣೆಗಾರಿಕೆ ಚುನಾವಣಾ ಆಯೋಗದ ಮೇಲಿದೆ. ಆದರೆ ನಿರ್ದಿಷ್ಟ ರಾಜಕೀಯ ಪಕ್ಷ ಹಾಗೂ ನಾಯಕನ ಪರವಾಗಿ ಆಯೋಗ ಕಾರ್ಯನಿರ್ವಹಿಸುತ್ತಿದೆ ಎಂದು ಆರೋಪಿಸಿದರು. ಗ್ಯಾನೇಶ ಕುಮಾರ ಅವರ ಅವಧಿಯಲ್ಲಿ ಕೈಗೊಂಡ ನಿರ್ಧಾರಗಳಿಂದ ಬಿಹಾರದಲ್ಲಿ 63 ಲಕ್ಷ, ಪಶ್ಚಿಮ ಬಂಗಾಳದಲ್ಲಿ 91 ಲಕ್ಷ ಹಾಗೂ ಕರ್ನಾಟಕದಲ್ಲಿ 1.07 ಕೋಟಿ ಮತದಾರರ ಹೆಸರುಗಳನ್ನು ಪಟ್ಟಿಯಿಂದ ಕೈಬಿಡಲಾಗಿದೆ ಎಂದು ಹರಿಪ್ರಸಾದ್ ಆರೋಪಿಸಿದರು.

ರಾಹುಲ ಗಾಂಧಿ 2025ರ ಫೆಬ್ರವರಿಯಲ್ಲೇ ಚುನಾವಣಾ ಆಯೋಗಕ್ಕೆ ಪತ್ರ ಬರೆದು ಮತದಾರರ ಪಟ್ಟಿಗೆ ಸಂಬಂಧಿಸಿದ ಅಪಾಯಗಳ ಕುರಿತು ಎಚ್ಚರಿಸಿದ್ದರು. ಕಳೆದ ಎರಡು ದಿನಗಳಲ್ಲಿ ಪ್ರಕಟವಾದ ಮಾಧ್ಯಮ ವರದಿಗಳು ಚುನಾವಣಾ ಆಯೋಗದ ಕಾರ್ಯನಿರ್ವಹಣೆ ಕುರಿತು ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿವೆ ಎಂದು ಹೇಳಿದರು.

ಚುನಾವಣಾ ಆಯುಕ್ತರಾದ ಸುಖಬೀರ್ ಸಿಂಗ್ ಸಂಧು ಮತ್ತು ವಿವೇಕ ಜೋಶಿ ಕಳೆದ 10 ತಿಂಗಳಲ್ಲಿ ಕನಿಷ್ಠ 14 ಬಾರಿ ಆಕ್ಷೇಪಣಾ ಟಿಪ್ಪಣಿಗಳನ್ನು ದಾಖಲಿಸಿದ್ದರೂ ಅವುಗಳನ್ನು ಕಡೆಗಣಿಸಲಾಗಿದೆ. ಅವರ ಒಪ್ಪಿಗೆಯಿಲ್ಲದೆ ‘ಫಾರಂ 6’ನಲ್ಲಿ ಬದಲಾವಣೆ ಮಾಡಲಾಗಿದೆ ಎಂದೂ ಹರಿಪ್ರಸಾದ್ ಆರೋಪಿಸಿದರು. ಚುನಾವಣಾ ಆಯೋಗವು ಭಿನ್ನಾಭಿಪ್ರಾಯಗಳು ಸಾಂಸ್ಥಿಕ ಚರ್ಚೆಯ ಸಹಜ ಭಾಗವಾಗಿದ್ದು, ಇತ್ತೀಚಿನ ಆದೇಶಗಳು ಪೂರ್ಣ ಆಯೋಗದ ಸರ್ವಾನುಮತದ ನಿರ್ಧಾರಗಳಾಗಿವೆ ಎಂದು ಪ್ರತಿಕ್ರಿಯಿಸಿದೆ.

ಈ ಹಿಂದೆ ಮತಗಳ್ಳತನದ ಆರೋಪಗಳನ್ನು ರಾಹುಲ ಗಾಂಧಿ ಮಾಡಿದ್ದಾಗ ಅವರಿಂದ ಕ್ಷಮೆ ಕೇಳಬೇಕು ಎಂದು ಗ್ಯಾನೇಶ ಕುಮಾರ ಆಗ್ರಹಿಸಿದ್ದರು. ಆದರೆ ಈಗ ಬಹಿರಂಗವಾಗಿರುವ ವಿಚಾರಗಳ ಹಿನ್ನೆಲೆಯಲ್ಲಿ ಗ್ಯಾನೇಶ ಕುಮಾರ ಅವರೇ ಉತ್ತರ ನೀಡಬೇಕು ಎಂದು ಹರಿಪ್ರಸಾದ್ ಹೇಳಿದರು.

ತಮ್ಮ ಬಳಿ ಇರುವ ದಾಖಲೆಗಳನ್ನು ಪ್ರದರ್ಶಿಸಿದ ಹರಿಪ್ರಸಾದ್, ಯಾವುದೇ ಸಹಿ ಇಲ್ಲದೆ ಸುಮಾರು 65 ಸಾವಿರ ಮತದಾರರ ಹೆಸರುಗಳನ್ನು ಕೈಬಿಡಲು ಸಲ್ಲಿಸಲಾದ ಅರ್ಜಿಗಳು ತಮ್ಮ ಬಳಿ ಇವೆ ಎಂದು ಹೇಳಿದರು. ಬೆಳಗಾವಿ ಬಿಜೆಪಿ ಶಾಸಕ ಅಭಯ ಪಾಟೀಲ 2,500 ಮತದಾರರ ಹೆಸರುಗಳನ್ನು ತೆಗೆದುಹಾಕುವಂತೆ ಪತ್ರ ಬರೆದಿರುವುದನ್ನು ತಾವು ಈಗಾಗಲೇ ಬಹಿರಂಗಪಡಿಸಿದ್ದಾಗಿ ತಿಳಿಸಿದರು.

ಬಬಲೇಶ್ವರ, ಹುಬ್ಬಳ್ಳಿ-ಧಾರವಾಡ ಸೇರಿದಂತೆ ರಾಜ್ಯದ ವಿವಿಧೆಡೆ ಮುಖ್ಯವಾಗಿ ದಲಿತರು ಹಾಗೂ ಅಲ್ಪಸಂಖ್ಯಾತರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಯೋಜಿತವಾಗಿ ಕೈಬಿಡಲಾಗಿದೆ ಎಂದು ಅವರು ಆರೋಪಿಸಿದರು. ಸಮಸ್ಯೆ ಮತದಾರರ ಪಟ್ಟಿಯಲ್ಲಿ ಮಾತ್ರವಲ್ಲ, ಎಸ್‌ಐಆರ್‌ ಪ್ರಕ್ರಿಯೆಯಲ್ಲಿಯೇ ಇದೆ. ಚುನಾವಣಾ ಆಯೋಗವನ್ನು ಕಾಂಗ್ರೆಸ್ ಪ್ರಶ್ನಿಸಿದಾಗ ಬಿಜೆಪಿಯವರು ಆಯೋಗದ ಪರವಾಗಿ ಉತ್ತರಿಸುತ್ತಿದ್ದಾರೆ ಎಂದೂ ಟೀಕಿಸಿದರು.

ಈ ಪ್ರಕರಣವನ್ನು ‘ದೇಶದ್ರೋಹದ ಕೆಲಸ’ ಎಂದು ಬಣ್ಣಿಸಿದ ಹರಿಪ್ರಸಾದ್, ಪ್ರಧಾನಮಂತ್ರಿ ಮತ್ತು ಗೃಹ ಸಚಿವರ ನಡೆಯನ್ನೂ ಪ್ರಶ್ನಿಸಿದರು. 2023ರಲ್ಲಿ ಸಂಸತ್ತಿನಲ್ಲಿ ತಂದ ಕಾನೂನು ಬದಲಾವಣೆಗಳಿಂದ ಚುನಾವಣಾ ಆಯುಕ್ತರ ವಿರುದ್ಧ ತಕ್ಷಣ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಲು ಆಡಳಿತಾತ್ಮಕ ತೊಡಕುಗಳಿವೆ. ಆದ್ದರಿಂದ ಮೊದಲು ಗ್ಯಾನೇಶ ಕುಮಾರ ಅವರ ರಾಜೀನಾಮೆ ಪಡೆದು ನಂತರ ಅವರನ್ನು ಬಂಧಿಸಬೇಕು ಎಂದು ಒತ್ತಾಯಿಸಿದರು.

ಈ ಬೆಳವಣಿಗೆಗಳನ್ನು ಖಂಡಿಸಿ ಸೆ. 26ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ ನಡೆಸಲಿದೆ. ಪ್ರಜಾಪ್ರಭುತ್ವದಲ್ಲಿ ನಂಬಿಕೆ ಹೊಂದಿರುವ ಜಾತ್ಯತೀತ ಪಕ್ಷಗಳು ಹಾಗೂ ಇತರ ವಿಪಕ್ಷಗಳಿಗೂ ಪ್ರತಿಭಟನೆಯಲ್ಲಿ ಭಾಗವಹಿಸುವಂತೆ ಆಹ್ವಾನ ನೀಡಲಾಗಿದೆ.

ಮೊದಲ ಹಂತದಲ್ಲಿ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿ, ಎರಡನೇ ಹಂತದಲ್ಲಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲೂ ಜಂಟಿ ಪ್ರತಿಭಟನೆ ನಡೆಸಲಾಗುವುದು. ಈಗಲೇ ಧ್ವನಿ ಎತ್ತದಿದ್ದರೆ ಮುಂದಿನ ದಿನಗಳಲ್ಲಿ ಚುನಾವಣೆ ಎಂಬುದು ಹೆಸರಿಗಷ್ಟೇ ಸೀಮಿತವಾಗುವ ಅಪಾಯವಿದೆ ಎಂದು ಹರಿಪ್ರಸಾದ್ ಎಚ್ಚರಿಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಿಸೆಂಬರ್ 7ರಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಸಾಧ್ಯತೆಎಂಎಸ್‌ಪಿ ಆಧರಿಸಿ ಕಬ್ಬಿಗೆ ದರ: ಡಿ.ಕೆ. ಶಿವಕುಮಾರಮತದಾರರ ಅಂತಿಮ ಪಟ್ಟಿಯಲ್ಲಿ ನಿಮ್ಮ ಹೆಸರು ಪರಿಶೀಲಿಸಿಚುನಾವಣಾ ಆಯೋಗದ ಸಮರ್ಥನೆಗೆ ಆಕ್ಷೇಪಣೆ ಸಲ್ಲಿಸಲು 10 ದಿನ ಕಾಲಾವಕಾಶಸಚಿವ ಜಿ. ಪರಮೇಶ್ವರ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು‘ಬಟ್ಟೆ ಹರಿದು ರಕ್ತಸ್ರಾವವಾಗಿತ್ತು’: ಟ್ರಂಪ್ ವಿರುದ್ಧ ಮಾಜಿ ಮಿಸ್ ಸ್ವಿಟ್ಜರ್ಲ್ಯಾಂಡ ಅತ್ಯಾಚಾರ ಆರೋಪ!ಮತದಾರರ ಪಟ್ಟಿಯಿಂದ 1 ಕೋಟಿ ಹೆಸರು ಡಿಲೀಟ್!ಕಬ್ಬಿನ ದರ ನಿಗದಿ ಸಭೆಯಲ್ಲಿ ರೈತ ಮುಖಂಡರ ಮಾರಾಮಾರಿ: ಸುವರ್ಣಸೌಧದಲ್ಲೇ ಕೈಕೈ ಮಿಲಾಯಿಸಿದ ಎರಡು ಬಣಗಳು!ಕನ್ನಡಿಗರಿಗೆ ಉದ್ಯೋಗ ನಿರಾಕರಿಸಿದರೆ ಖಾಸಗಿ ಸಂಸ್ಥೆಗಳ ವಿರುದ್ಧ ಕ್ರಮ: ಡಿ.ಕೆ. ಶಿವಕುಮಾರಜಲವಿದ್ಯುತ್ ಯೋಜನೆ ವಿರೋಧಿಸಿ ಅರುಣಾಚಲದಲ್ಲಿ ಹಿಂಸಾಚಾರ: ಭದ್ರತಾ ಪಡೆಯ ಎರಡು ತುಕಡಿ ರವಾನೆ