Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Local News | Districts Belagavi

ಶಾಸಕ ಬಾಬಾಸಾಹೇಬ ಪಾಟೀಲ ಅಧ್ಯಕ್ಷತೆಯಲ್ಲಿ ತಾಲೂಕು ಮಟ್ಟದ ಸಭೆ

ನಾಳೆ ಅಂಬಡಗಟ್ಟಿಯಲ್ಲಿ ‘ಜನಸೇವಾ ಆಂದೋಲನ’

 

 

 

 

ಚನ್ನಮ್ಮನ ಕಿತ್ತೂರು: ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿ, ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ಕಲ್ಪಿಸುವ ಉದ್ದೇಶದಿಂದ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಜನಸೇವಾ ಆಂದೋಲನ’ ಕಾರ್ಯಕ್ರಮವನ್ನು ಸೆ.5ರಂದು ಬೆಳಿಗ್ಗೆ 10 ಗಂಟೆಗೆ ಅಂಬಡಗಟ್ಟಿ ಗ್ರಾಮ ಪಂಚಾಯಿತಿ ಸಭಾಭವನದಲ್ಲಿ ಆಯೋಜಿಸಲಾಗಿದೆ ಎಂದು ತಹಶೀಲ್ದಾರ ಕಲಗೌಡ ಪಾಟೀಲ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 ಶಾಸಕ ಬಾಬಾಸಾಹೇಬ ಪಾಟೀಲ ಅವರ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಭೆಯಲ್ಲಿ ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದು, ಸಾರ್ವಜನಿಕರ ಸಮಸ್ಯೆ ಹಾಗೂ ಅಹವಾಲುಗಳನ್ನು ಆಲಿಸಲಿದ್ದು ಸರ್ಕಾರದ ವಿವಿಧ ಯೋಜನೆಗಳು, ಸೌಲಭ್ಯಗಳು ಹಾಗೂ ಸೇವೆಗಳು ತಾಲೂಕಿನ ಕಟ್ಟಕಡೆಯ ನಾಗರಿಕರಿಗೂ ತಲುಪಿಸುವುದು ‘ಜನಸೇವಾ ಆಂದೋಲನ’ದ ಪ್ರಮುಖ ಉದ್ದೇಶವಾಗಿದೆ. ಸಾರ್ವಜನಿಕರು ತಮ್ಮ ಕುಂದುಕೊರತೆ, ಸಮಸ್ಯೆಗಳು ಹಾಗೂ ಅಹವಾಲುಗಳನ್ನು ಅಧಿಕಾರಿಗಳ ಗಮನಕ್ಕೆ ತಂದು, ಸಾಧ್ಯವಾದಷ್ಟು ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ಪಡೆದುಕೊಳ್ಳಲು ಈ ಕಾರ್ಯಕ್ರಮವನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ತಿಳಿಸಲಾಗಿದೆ.

 ತಾಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿ, ಸಾರ್ವಜನಿಕರಿಂದ ಸ್ವೀಕರಿಸುವ ಅಹವಾಲುಗಳಿಗೆ ಸಂಬಂಧಿಸಿದಂತೆ ಸ್ಥಳದಲ್ಲಿಯೇ ಸೂಕ್ತ ಮಾರ್ಗದರ್ಶನ ಹಾಗೂ ಪರಿಹಾರ ಒದಗಿಸುವುದರ ಜೊತೆಗೆ, ಅಗತ್ಯವಿರುವ ಪ್ರಕರಣಗಳಲ್ಲಿ ಸಂಬಂಧಿಸಿದ ಇಲಾಖೆಗಳ ಮೂಲಕ ತ್ವರಿತ ಕ್ರಮ ಕೈಗೊಳ್ಳಲಿದ್ದಾರೆ.

ಸಾರ್ವಜನಿಕ ಹಿತದೃಷ್ಟಿಯಿಂದ ಆಯೋಜಿಸಿರುವ ಈ ಜನಪರ ಕಾರ್ಯಕ್ರಮದಲ್ಲಿ ತಾಲೂಕಿನ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ತಮ್ಮ ಸಮಸ್ಯೆ ಹಾಗೂ ಅಹವಾಲುಗಳನ್ನು ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರ ಕಂಡುಕೊಳ್ಳುವಂತೆ ಕೋರಲಾಗಿದೆ.

 

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಂಧ, ವಿಕಲಚೇತನರ ಬಾಳಿಗೆ ಬೆಳಕಾದ ಸ್ನೇಹ ಜ್ಯೋತಿ ಸಂಸ್ಥೆ : ಧರ್ಮಾಧ್ಯಕ್ಷ ಡೇರಿಕ್ ಫರ್ನಾಂಡಿಸ್ ಧಾರವಾಡ ಜಿಲ್ಲಾ ಕ್ರೀಡಾ ವಸತಿ ನಿಲಯದ ಅಥ್ಲೇಟಿಕ್ ಕ್ರೀಡಾಕೂದಲ್ಲಿ ಸಾಧನೆಮಹಿಳೆಯರ ಸಾಮಾಜಿಕ, ಆರ್ಥಿಕ ಪ್ರಗತಿಗೆ ಜ್ಞಾನವಿಕಾಸ ಕಾರ್ಯಕ್ರಮ ಪೂರಕ: ದಯಾಶೀಲಅಂಜನಾದ್ರಿ ದೇವಸ್ಥಾನದ ಆಡಳಿತ ವಿವಾದ: ನ್ಯಾಯಾಲಯದ ಆದೇಶದಂತೆ ಅವಕಾಶ ನೀಡಿಸುರಕ್ಷಿತ ಬಚಪನ್ ಅಭಿಯಾನ: ಬೂದಗುಂಪಾದಲ್ಲಿ ಮಕ್ಕಳ ಹಕ್ಕುಗಳು & ಕಾನೂನುಗಳ ಜಾಗೃತಿ ಕಾರ್ಯಕ್ರಮನವೆಂಬರ್ 3 ರಂದು ಗಂಗಾವತಿಯಲ್ಲಿ ಬಸವಾದಿ ಶಿವಶರಣರ ಬೃಹತ್ ಹಿಂದೂ ಸಮಾವೇಶನಾಳೆ ದಲಿತ ಸೇನೆ ರಾಜ್ಯ ಸಮಿತಿಯ ಪೂರ್ವಭಾವಿ ಸಭೆ ಹಾಗೂ ನೂತನ ಪದಾಧಿಕಾರಿಗಳಿಗೆ ಸನ್ಮಾನಹುಲಿಗೆಮ್ಮ ದೇವಿ ದೇವಸ್ಥಾನದ ಅಧಿಕಾರಿ ವಿರುದ್ಧ ದೂರು ದಾಖಲಿಸಿ ಕ್ರಮಕ್ಕೆ ಒತ್ತಾಯಕೊಪ್ಪಳ ಭಾಗ್ಯನಗರ ಬಂದ್‌ಗೆ ಹೈದರಾಬಾದ್ ಕರ್ನಾಟಕ ಯುವಶಕ್ತಿ ಬೆಂಬಲಹಣಕಾಸು ಒಳಗೊಳ್ಳುವಿಕೆ ಸ್ಯಾಚುರೇಶನ್ ಅಭಿಯಾನ: ವಿಶೇಷ ಜಾಗೃತಿ ಪೋಸ್ಟರ್ ಬಿಡುಗಡೆ