Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಮೇಕೆದಾಟು ಯೋಜನೆ ತ್ವರಿತ ಅನುಷ್ಠಾನಕ್ಕೆ ತಂಡ ರಚನೆ

ಬೆಂಗಳೂರು :

ಕರ್ನಾಟಕದ ಪರ ಸುಪ್ರೀಂ ಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಮೇಕೆದಾಟು ಸಮತೋಲಿತ ಜಲಾನಯನ ಯೋಜನೆ ತ್ವರಿತ ಅನುಷ್ಠಾನಕ್ಕೆ ಕೆಇಆರ್ ಎಸ್ (ಕರ್ನಾಟಕ ಇಂಜಿನಿಯರಿಂಗ್ ಸಂಶೋಧನಾ ಕೇಂದ್ರ) ನಿರ್ದೇಶಕರ ನೇತೃತ್ವದಲ್ಲಿ ತಂಡವನ್ನು ರಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಈ ತಂಡವು ಉಪ ಮುಖ್ಯ ಇಂಜಿನಿಯರ್ ಹಾಗೂ ಸಿಬ್ಬಂದಿಯನ್ನು ಒಳಗೊಂಡಿದ್ದು, ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರವನ್ನು ಕೇಂದ್ರ ಸ್ಥಾನವಾಗಿಟ್ಟುಕೊಂಡು ಕೆಲಸ ನಿರ್ವಹಿಸಲಿದೆ. ರಾಮನಗರದಲ್ಲೇ ಮೇಕೆದಾಟು ಯೋಜನೆ ಕಚೇರಿ ಸ್ಥಾಪಿಸಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.

18.11.2025 ರಂದು ಡಿಸಿಎಂ ಡಿ ಕೆ ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮೇಕೆದಾಟು ಯೋಜನೆ ತ್ವರಿತ ಜಾರಿಗೆ ಒಂದು ಮುಖ್ಯ ಇಂಜಿನಿಯ‌ರ್ ಕಚೇರಿ ಹಾಗೂ ಒಂದು ಅಧೀಕ್ಷಕ ಇಂಜಿನಿಯರ್ ಕಚೇರಿಯನ್ನು ಆರಂಭಿಸಲು ನಿರ್ಧರಿಸಲಾಗಿತ್ತು. ಆದರೆ ಹೊಸದಾಗಿ ಕಚೇರಿ ಸ್ಥಾಪನೆ ಹಾಗೂ ಹುದ್ದೆಗಳ ನೇಮಕಕ್ಕೆ ಆರ್ಥಿಕ ಇಲಾಖೆಯ ಅನುಮತಿ ಅಗತ್ಯವಾಗಿದ್ದು, ಇದಕ್ಕೆ ಬಹಳಷ್ಟು ಸಮಯಾವಕಾಶ ಬೇಕಾಗಿರುತ್ತದೆ. ಈ ಹಿನ್ನೆಲೆಯಲ್ಲಿ ಸರ್ಕಾರವು ಈ ಯೋಜನೆ ಜಾರಿಯ ಜವಾಬ್ದಾರಿಯನ್ನು ಕೆಇಆರ್ ಎಸ್ ನಿರ್ದೇಶಕರಿಗೆ ವಹಿಸಿದೆ.

ಕೆಇಆರ್ ಎಸ್ ಸಂಸ್ಥೆ ತನ್ನಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳು ಹಾಗೂ ನೌಕರರನ್ನು ಒಳಗೊಂಡು ತಂಡವನ್ನು ರಚಿಸಿ ಮೇಕೆದಾಟು ಯೋಜನೆಯ ಜಾರಿಯ ಜವಾಬ್ದಾರಿಯನ್ನು ನೀಡಲಾಗಿದೆ. ಈ ತಂಡಕ್ಕೆ ಓರ್ವ ಕಾರ್ಯಪಾಲಕ ಇಂಜಿನಿಯರ್, ಮೂವರು ತಾಂತ್ರಿಕ ಸಹಾಯಕರು, ಆರು ಸಹಾಯಕ ಇಂಜಿನಿಯರ್, ಓರ್ವ ಸಹಾಯಕ ಆಡಳಿತಾಧಿಕಾರಿ, ಓರ್ವ ಲೆಕ್ಕಾಧೀಕ್ಷಕರು, ಅಧೀಕ್ಷಕರು, ಪ್ರಥಮ ದರ್ಜೆ ಲೆಕ್ಕ ಸಹಾಯಕರು, ಇಬ್ಬರು ಪ್ರಥಮ ದರ್ಜೆ ಸಹಾಯಕರು, ಓರ್ವ ದ್ವಿತಿಯ ದರ್ಜೆ ಲೆಕ್ಕ ಸಹಾಯಕರು, ನಾಲ್ವರು ದ್ವಿತೀಯ ದರ್ಜೆ ಸಹಾಯಕರು, ಓರ್ವ ಶೀಘ್ರಲಿಪಿಗಾರರು, ನಾಲ್ವರು ಬೆರಳಚ್ಚುಗಾರರು, ಓರ್ವ ವಾಹನ ಚಾಲಕರ, ಇಬ್ಬರು ಗ್ರೂಪ್ ಡಿ ಸಿಬ್ಬಂದಿ, 1 ಕಾವಲುಗಾರನನ್ನು ನೇಮಿಸಲಾಗಿದೆ.

ಮೇಕೆದಾಟು ಯೋಜನೆ ಕಚೇರಿಯ ಕಟ್ಟಡದ ವ್ಯವಸ್ಥೆಗೆ ಕಾವೇರಿ ನೀರಾವರಿ ನಿಗಮ ನಿಯಮಿತ (ಸಿಎನ್ಎನ್ಎಲ್) ಕ್ರಮ ಕೈಗೊಳ್ಳಲಿದೆ. ಈ ತಂಡವು ಸಿಎನ್ಎನ್ಎಲ್ ನ ವ್ಯವಸ್ಥಾಪನ ನಿರ್ದೇಶಕರ ಅಧೀನದಲ್ಲಿ ಕಾರ್ಯನಿರ್ವಹಿಸಲಿದ್ದು, ಕಚೇರಿಯ ನಿರ್ವಹಣೆ, ಮೂಲಭೂತ ಸೌಕರ್ಯ ಹಾಗೂ ಇತರೆ ವೆಚ್ಚವನ್ನು ಸಿಎನ್ಎನ್ಎಲ್ ಅನುದಾನದಿಂದ ಭರಿಸಲಾಗುವುದು. ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಎಲ್ಲಾ ಕಡತ, ಪತ್ರ ವ್ಯವಹಾರ, ಹಾಗೂ ಇನ್ನಿತರೆ ದಾಖಲೆಗಳನ್ನು ಕೆಇಆರ್ ಎಸ್ ನಿರ್ದೇಶಕರಿಗೆ ಹಸ್ತಾಂತರಿಸುವಂತೆ ಸಿಎನ್ಎನ್ಎಲ್ ನ ವ್ಯವಸ್ಥಾಪಕ ನಿರ್ದೇಶಕರಿಗೆ ಸೂಚಿಸಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಾ. ಪ್ರಭಾಕರ ಕೋರೆ ಅವರಿಗೆ ಪದ್ಮಶ್ರೀ ಪ್ರಶಸ್ತಿ: ಲಿಂಗಾಯತ ಸಮಾಜದ ವತಿಯಿಂದ ಭವ್ಯ ಸನ್ಮಾನಥ್ರೋ ಬಾಲ್ ಪಂದ್ಯಾವಳಿಯಲ್ಲಿ ಗೆಲುವು ಸಾಧಿಸಿದ ಬೆಳಗಾವಿ ಜಿಎ ಪ್ರೌಢಶಾಲೆಯ ಬಾಲೆಯರುಜಿಲ್ಲಾ ಮಟ್ಟದ ಶಿಕ್ಷಕ ಪ್ರಶಸ್ತಿ ಪ್ರಕಟ ಜಿಲ್ಲೆಯ ಉತ್ತಮ ಶಿಕ್ಷಕರಿಗೆ ರಾಜ್ಯ ಮಟ್ಟದ ಶಿಕ್ಷಕ ಪ್ರಶಸ್ತಿಬೈಕ್ ಕಳ್ಳನನ್ನು ಬಂಧಿಸಿದ ಪೊಲೀಸರುಭೀಕರ ರಸ್ತೆ ಅಪಘಾತ: ಇಬ್ಬರು ಯುವಕರ ದುರ್ಮರಣಪ್ರಜಾಪಿತ ಬ್ರಹ್ಮಾಕುಮಾರಿ ಶಹಾಪುರ ಕೇಂದ್ರದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮಾಚರಣೆಸುರಂಗದಲ್ಲಿ 9 ದಿನ ಹರೇ ಕೃಷ್ಣ ಪಠಿಸುತ್ತಿದ್ದವ ಜನ್ಮಾಷ್ಟಮಿಯಂದು ಹೊರಬಂದಎರಡೇ ತಿಂಗಳಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಇಬ್ಬಾಗ: ಅಸ್ತಿತ್ವಕ್ಕೆ ಬಂತು ಹೊಸ ಬಣ!ಅಯೋಧ್ಯೆ ದೇಗುಲದ ಅಭಿವೃದ್ಧಿಗೆ ಭಕ್ತಾದಿಗಳ ಬೆಂಬಲ ಕೋರಿದ ರಾಮಮಂದಿರದ ನೂತನ ಸಿಇಒ