LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

UPSC ಪರೀಕ್ಷೆ ಪಾಸಾದ ಟೀಂ ಇಂಡಿಯಾದ ಸ್ಟಾರ್‌ ಕ್ರಿಕೆಟಿಗ!

ನವದೆಹಲಿ : ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡುವ ಮೊದಲು ಯುಪಿಎಸ್‌ಸಿ ನಾಗರಿಕ ಸೇವಾ ಪರೀಕ್ಷೆಯಲ್ಲಿ ಉತ್ತೀರ್ಣರಾದ ಏಕೈಕ ಭಾರತೀಯ ಕ್ರಿಕೆಟಿಗ ಅಮಯ್ ಖುರಾಸಿಯಾ. ಇವರು ಕ್ರಿಕೆಟ್ ಮೈದಾನದಲ್ಲೂ ಹೊಳಪು ತೋರಿ, ದೇಶದ ಪ್ರತಿಷ್ಠಿತ ಯುಪಿಎಸ್‌ಸಿ ಪರೀಕ್ಷೆ ಪಾಸಾಗಿ ಸರ್ಕಾರಿ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿರುವ ಭಾರತದ ಮಾಜಿ ಕ್ರಿಕೆಟಿಗ ಅಮಯ್ ಖುರಾಸಿಯಾ ಅವರ ಸಾಧನಾಗಾಥೆ.

1999ರಲ್ಲಿ ಅಮಯ್ ಖುರಾಸಿಯಾ ಟೀಮ್ ಇಂಡಿಯಾ ಪರ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಪ್ರವೇಶ ಪಡೆದರು. ತಮ್ಮ ಚೊಚ್ಚಲ ಏಕದಿನ ಪಂದ್ಯದಲ್ಲಿ ಕೇವಲ 45 ಎಸೆತಗಳಲ್ಲಿ ಅರ್ಧಶತಕ ಬಾರಿಸಿ ಎಲ್ಲರ ಮೆಚ್ಚುಗೆ ಗಳಿಸಿದರು. ಆದರೆ ದುರದೃಷ್ಟವಶಾತ್, ಅವರು ಆಡಿದ 12 ಏಕದಿನ ಪಂದ್ಯಗಳಲ್ಲಿ ಹೆಚ್ಚಿನ ಸಾಧನೆ ಮಾಡಲು ಸಾಧ್ಯವಾಗಲಿಲ್ಲ.

ಅವರು 1999ರ ವಿಶ್ವಕಪ್ ತಂಡದಲ್ಲೂ ಸ್ಥಾನ ಪಡೆದಿದ್ದರು. ಆದರೆ ಆ ವಿಶ್ವಕಪ್‌ನಲ್ಲಿ ಭಾರತ ಪರ ಒಂದೇ ಪಂದ್ಯ ಆಡುವ ಅವಕಾಶ ಸಿಕ್ಕಿತು. ಖುರಾಸಿಯಾ ಅವರು ಸಚಿನ್ ತೆಂಡೂಲ್ಕರ್, ಸೌರವ್ ಗಂಗೂಲಿ, ರಾಹುಲ್ ದ್ರಾವಿಡ್, ವೀರೇಂದ್ರ ಸೆಹ್ವಾಗ್, ಯುವರಾಜ್ ಸಿಂಗ್, ಜಾವಗಲ್ ಶ್ರೀನಾಥ್, ವೆಂಕಟೇಶ್ ಪ್ರಸಾದ್ ಮತ್ತು ಅಜಿತ್ ಅಗರ್ಕರ್ ಅವರ ಜೊತೆ ಆಡಿದರು. ಆದರೆ ಅವರ ಅಂತರರಾಷ್ಟ್ರೀಯ ಕ್ರಿಕೆಟ್ ಬದುಕು ಹೆಚ್ಚು ದಿನ ಇರಲಿಲ್ಲ. ಕ್ರಿಕೆಟ್‌ನಲ್ಲಿ ಹೆಚ್ಚಿನ ಅವಕಾಶ ಸಿಗದೆ, ಖುರಾಸಿಯಾ ಅವರು ತಮ್ಮ ಇನ್ನೊಂದು ಕನಸಾದ ಯುಪಿಎಸ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ, ಭಾರತೀಯ ಕಸ್ಟಮ್ಸ್ ಮತ್ತು ಕೇಂದ್ರ ಅಬಕಾರಿ ಇಲಾಖೆಯಲ್ಲಿ ಅಧಿಕಾರಿಯಾಗಿ ಸೇವೆ ಸಲ್ಲಿಸಿದರು.

ಸರ್ಕಾರಿ ಉದ್ಯೋಗದಲ್ಲಿ ಕಾರ್ಯನಿರ್ವಹಿಸುತ್ತಾ, ಅವರು ದೇಶೀಯ ಕ್ರಿಕೆಟ್‌ನಲ್ಲೂ ತಮ್ಮ ಮೆರಗು ತೋರಿದರು. 2006ರಲ್ಲಿ ಕ್ರಿಕೆಟ್‌ನಿಂದ ನಿವೃತ್ತಿಯಾದ ನಂತರ, ಅವರು ಕೋಚಿಂಗ್ ವೃತ್ತಿಗೆ ಕಾಲಿಟ್ಟರು. ಅವರ ಮಾರ್ಗದರ್ಶನದಲ್ಲಿ ಆವೇಶ್ ಖಾನ್ ಮತ್ತು ರಜತ್ ಪಾಟಿದಾರ್ ಅವರಂತಹ ಪ್ರತಿಭಾವಂತ ಆಟಗಾರರು ಬೆಳೆಯಲು ಪ್ರಾರಂಭಿಸಿದರು. 2024ರಲ್ಲಿ ಖುರಾಸಿಯಾ ಕೇರಳ ರಣಜಿ ತಂಡದ ಕೋಚ್ ಆಗಿ ಆಯ್ಕೆಯಾದರು ಮತ್ತು ಅವರ ಮಾರ್ಗದರ್ಶನದಲ್ಲಿ ಕೇರಳ ತಂಡ ಫೈನಲ್‌ಗೂ ತಲುಪಿತು.

ಇಂದಿಗೂ ಖುರಾಸಿಯಾ ಸರ್ಕಾರಿ ಅಧಿಕಾರಿಯ ಜವಾಬ್ದಾರಿಗಳನ್ನು ನಿರ್ವಹಿಸುತ್ತಾ, ಯುವ ಕ್ರಿಕೆಟಿಗರಿಗೆ ಮಾರ್ಗದರ್ಶನ ನೀಡುತ್ತಿದ್ದಾರೆ. ಅವರು ಒಂದೇ ವೇಳೆ ಕ್ರಿಕೆಟಿಗ, ಸರ್ಕಾರಿ ಅಧಿಕಾರಿ ಹಾಗೂ ಕೋಚ್‌ ಆಗಿ ತಮ್ಮ ಜೀವನದಲ್ಲಿ ಅಪರೂಪದ ಸಾಧನೆಯನ್ನು ಮಾಡಿದ್ದಾರೆ. ಹಾಗಾಗಿ, ಅಮಯ್ ಖುರಾಸಿಯಾ ಅವರ ಕಥೆ ದೇಶದ ಯುವಕರಿಗೆ ದೊಡ್ಡ ಸ್ಫೂರ್ತಿಯಾಗಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026