LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಟೆಕ್ಕಿ ಆತ್ಮಹತ್ಯೆ ಪ್ರಕರಣ ಉತ್ತರ ಪ್ರದೇಶದತ್ತ ತೆರಳಿದ ಬೆಂಗಳೂರು ಪೊಲೀಸರು

ಬೆಂಗಳೂರು : ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣದ ತನಿಖೆ ಆರಂಭಿಸಿರುವ ಮಾರತ್ ಹಳ್ಳಿ ಠಾಣೆ ಪೊಲೀಸರ ತಂಡ‌ ಆರೋಪಿಗಳ ವಿಚಾರಣೆ ನಡೆಸಲು ಉತ್ತರ ಪ್ರದೇಶಕ್ಕೆ ತೆರಳಿದೆ.

ಪ್ರಕರಣದ ತನಿಖಾಧಿಕಾರಿಯಾಗಿರುವ ಪಿಎಸ್ಐ ಜ್ಞಾನದೇವ್ ನೇತೃತ್ವದ ತಂಡ ಉತ್ತರ ಪ್ರದೇಶದ ಜೌನ್ ಪುರ್‌ಗೆ ತೆರಳಿದ್ದು ಅತುಲ್ ಸುಭಾಷ್ ಪತ್ನಿ ನಿಕಿತಾ ಸಿಂಘಾನಿಯಾ, ಆಲೆಯ ತಾಯಿ ನಿಶಾ ಸಿಂಘಾನಿಯಾ, ಸಹೋದರ ಅನುರಾಗ್ ಸಿಂಘಾನಿಯಾ ಹಾಗೂ ಸಂಬಂಧಿ ಸುಶೀಲ್ ಸಿಂಘಾನಿಯಾ ವಿಚಾರಣೆ ನಡೆಸಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅತುಲ್ ಸುಭಾಷ್ ಸಹೋದರ ಬಿಕಾಸ್ ಕುಮಾರ್ ನೀಡಿದ ದೂರಿನನ್ವಯ ಮಾರತ್ ಹಳ್ಳಿ ಠಣೆಯಲ್ಲಿ ಆರೋಪಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತೆ ಕಾಯ್ದೆ 108 (ಆತ್ಮಹತ್ಯೆಗೆ ಪ್ರಚೋದನೆ) ಆರೋಪದಡಿ ಎಫ್ಐಆರ್ ದಾಖಲಾಗಿದೆ.ಅದರನ್ವಯ ಉತ್ತರ ಪ್ರದೇಶದತ್ತ ತೆರಳಿರುವ ಮಾರತ್ ಹಳ್ಳಿ ಪೋಲಿಸರ ತಂಡ ಮೊದಲು ನೋಟಿಸ್ ಜಾರಿಗೊಳಿಸಿ ಮೃತನ ಪತ್ನಿಯ ವಿಚಾರಣೆ ನಡೆಸಲಿದೆ.ವಿಚಾರಣೆಗೆ ಸಹಕರಿಸದಿದ್ದಲ್ಲಿ ಕಾನೂನು ಕ್ರಮ ಜರುಗಿಸುವ ಸಾಧ್ಯತೆಯಿದೆ. ಬಳಿಕ ಬಿಹಾರಕ್ಕೆ ತೆರಳಲಿರುವ ಪೊಲೀಸರು, ಅತುಲ್ ಸುಭಾಷ್ ಅವರ ಪೋಷಕರು, ಸಹೋದರನಿಂದ ಹೇಳಿಕೆ ದಾಖಲಿಸಿಕೊಳ್ಳಲಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಟಿ ರಮ್ಯಾಗೆ ಅಶ್ಲೀಲ ಸಂದೇಶ ಕಳುಹಿಸಿದ್ದ ಮೂವರು ಪೊಲೀಸರ ವಶಕ್ಕೆರೈತರಿಗೆ ಗುಡ್ ನ್ಯೂಸ್, ಪಿಎಂ ಕಿಸಾನ್ 20ನೇ ಕಂತಿನ ಹಣ ಇಂದು ಬಿಡುಗಡೆಮಾಡೆಲಿಂಗ್‌ ಲೋಕ ಬಿಟ್ಟು ಯುಪಿಎಸ್‌ಸಿ ಪರೀಕ್ಷೆ ಪಾಸ್‌ ಆಗಿ ಅಧಿಕಾರಿಯಾದ ಕಥೆದಿನದ ಮಂಡಕ್ಕಿ ಒಗ್ಗರಣೆ – ಮಿರ್ಚಿ.! 02-08-2025..!ವಚನ: -ಆಯ್ದಕ್ಕಿ ಮಾರಯ್ಯ .!ದೇಶಾದ್ಯಂತ 10,277 ಬ್ಯಾಂಕಿಂಗ್ ವಲಯದಲ್ಲಿ ಹುದ್ದೆಗಳ ಭರ್ತಿಗೆ ನೇಮಕಾತಿ, ಡಿಗ್ರಿ ಆದವರು ಅರ್ಜಿ ಸಲ್ಲಿಸಿಶಿವಮೊಗ್ಗ:ರೈತ ವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆIBPS ಬ್ಯಾಂಕ್ ಕ್ಲರ್ಕ್ ಹುದ್ದೆಗಳಿಗೆ ನೇಮಕಾತಿಅಮೆರಿಕದಿಂದ ಎಫ್-35 ಖರೀದಿಸಲ್ಲ ಎಂದ ಭಾರತ- ಟ್ಯಾರಿಫ್ ಏರಿಕೆ ಬೆನ್ನಲ್ಲೇ ಟ್ರಂಪ್‌ಗೆ ಶಾಕ್ಭಾರತದ ಉಪರಾಷ್ಟ್ರಪತಿ ಸ್ಥಾನಕ್ಕೆ ಸೆಪ್ಟೆಂಬರ್ 9ರಂದು ಚುನಾವಣೆ