E-PAPER
17 Nov 2026, 05:21:05 PM|
Gold₹13521/gGold24K ₹13,521/g - 22K ₹12,383/gTap for full details
Press ID & Credential Portal
Apply / Verify  ➔
LIVE TV State NewsLocalCrimeNationalInternationalPoliticsBusinessEditorialEducationTechnologyEntertainmentSportsHealthFeatureTraveling
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ತೀರ್ಥಕುಂಡೆ ಗ್ರಾಮದಲ್ಲಿ ವಿದ್ಯುತ್ ಸಮಸ್ಯೆ: ಪರಿಹಾರಕ್ಕೆ ಆಗ್ರಹ

ಖಾನಾಪುರ-17: ತಾಲೂಕಿನ ತೀರ್ಥಕುಂಡೆ ಗ್ರಾಮದ ಜಮೀನುಗಳಲ್ಲಿ ವಾಸಿಸುವ ಕುಟುಂಬಗಳು ಹಾಗೂ ರೈತರು ಸಮರ್ಪಕ ವಿದ್ಯುತ್ ಸಂಪರ್ಕದ ಕೊರತೆಯಿಂದ ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಎಂದು ಆರೋಪಿಸಿ, ಸಮಸ್ಯೆ ಪರಿಹರಿಸುವಂತೆ ಆಗ್ರಹಿಸಿ ಖಾನಾಪುರ ತಾಲೂಕಿನ ಂಇಇ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ತೀರ್ಥಕುಂಡೆ ಗ್ರಾಮದ ಜಮೀನುಗಳಲ್ಲಿ ವಾಸಿಸುವ ಕುಟುಂಬಗಳಿಗೆ ದಿನದ 24 ಗಂಟೆಗಳ ಕಾಲ ಸಮರ್ಪಕ ವಿದ್ಯುತ್ ಪೂರೈಕೆ ಮಾಡಬೇಕು. ರೈತರಿಗೆ ಹಾಗೂ ಜಮೀನುಗಳಲ್ಲಿ ಬೆಳೆದಿರುವ ಬೆಳೆಗಳಿಗೆ ನೀರು ಪೂರೈಸಲು ಪ್ರತಿದಿನ ನೀಡಲಾಗುವ 7 ಗಂಟೆಗಳ ವಿದ್ಯುತ್ ಸಂಪರ್ಕವೂ ಕಳೆದ ಎಂಟು ದಿನಗಳಿಂದ ಸಮರ್ಪಕವಾಗಿ ಲಭ್ಯವಾಗುತ್ತಿಲ್ಲ ಎಂದು ಮನವಿಯಲ್ಲಿ ತಿಳಿಸಲಾಗಿದೆ.

ವಿದ್ಯುತ್ ಪೂರೈಕೆಯ ಸಮಸ್ಯೆಯಿಂದ ಬೆಳೆಗಳಿಗೆ ನೀರುಣಿಸಲು ಸಾಧ್ಯವಾಗದೆ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಜಮೀನುಗಳಲ್ಲಿ ವಾಸಿಸುವ ಕುಟುಂಬಗಳು, ರೈತರು ಹಾಗೂ ಜಾನುವಾರುಗಳಿಗೂ ನೀರಿನ ಸಮಸ್ಯೆ ಎದುರಾಗಿದೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

ಇದಲ್ಲದೆ, ಜಮೀನುಗಳಲ್ಲಿರುವ ಹಲವು ಟಿಸಿಗಳು (ಟ್ರಾನ್ಸ್‌ಫಾರ್ಮರ್‌ಗಳು) ಹದಗೆಟ್ಟಿದ್ದು, ಅವುಗಳನ್ನು ದುರಸ್ತಿ ಮಾಡುವುದು ಅಥವಾ ಹೊಸ ಟಿಸಿ ಅಳವಡಿಸುವ ಕುರಿತು ಸಂಬಂಧಿಸಿದ ಸಿಬ್ಬಂದಿಯಿಂದ ಸಮರ್ಪಕ ಸ್ಪಂದನೆ ದೊರೆಯುತ್ತಿಲ್ಲ. ಇದರಿಂದ ಗ್ರಾಮಸ್ಥರು ಅತಂತ್ರ ಸ್ಥಿತಿಗೆ ತಲುಪಿದ್ದಾರೆ ಎಂದು ಆರೋಪಿಸಿದರು.

ಈ ಹಿನ್ನೆಲೆಯಲ್ಲಿ ಕಿತ್ತೂರು ಕರ್ನಾಟಕ ಸೇನೆ ಯುವ ಘಟಕದ ರಾಜ್ಯಾಧ್ಯಕ್ಷ ಮಹೇಶ್ ಎಸ್. ಶೀಗಿಹಳ್ಳಿ ಅವರು ಖಾನಾಪುರ ತಾಲೂಕಿನ ಂಇಇ ಅಧಿಕಾರಿಗಳಿಗೆ ಮನವಿ ಸಲ್ಲಿಸಿ, ತೀರ್ಥಕುಂಡೆ ಗ್ರಾಮದ ವಿದ್ಯುತ್ ಸಮಸ್ಯೆಯನ್ನು ತಕ್ಷಣ ಪರಿಹರಿಸುವಂತೆ ಒತ್ತಾಯಿಸಿದರು. ಸಮಸ್ಯೆ ಬಗೆಹರಿಯದಿದ್ದರೆ ಖಾನಾಪುರ ಏಇಃ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಬಾಳು ಮುತ್ಯನಟ್ಟಿ, ಮಹಾದೇವ ಕೊಡತಿ, ಸಿದ್ರಾಮ್ ಜಾಂಬೋಟಿ, ರಾಮಲಿಂಗ್ ಮೊರೆ, ಲಗಮೋಜಿ ಗವನ್ನವರ, ಮಲ್ಲಿಕಾರ್ಜುನ ಗುಣ್ಣಗೋಳ, ಉದಯ ಪಾಟೀಲ, ಪ್ರಕಾಶ್ ಮಜಗವಿ, ನಂದು ಹೊನಗೆಕರ ಸೇರಿದಂತೆ ಹಲವು ರೈತರು ಹಾಗೂ ಗ್ರಾಮಸ್ಥರು ಹಾಜರಿದ್ದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
Comments (0)
Comments appear after approval.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಂಗೀತ ಲೋಕದಲ್ಲಿ ಮಿಂಚಿದ ಬೆಳಗಾವಿಗರು – ಅದ್ದೂರಿಯಾಗಿ ನಡೆದ ರಿಯಲ್ ಸ್ಟಾರ್ ಪಬ್ಲಿಕ್ ಇವೆಂಟ್ಪಟ್ಟದ ಆನೆ ಧ್ರುವನಿಗೆ ಹೋಮ-ಹವನದ ಮೂಲಕ ಭಾವಪೂರ್ಣ ಶ್ರದ್ಧಾಂಜಲಿಬೆನಕನಹಳ್ಳಿಯಲ್ಲಿ ಪುನಶ್ಚೇತನಗೊಂಡ 988ನೇ ಕೆರೆಗೆ ಲಕ್ಷ್ಮೀ ಹೆಬ್ಬಾಳಕರ್ ಬಾಗಿನ ಅರ್ಪಣೆ ಕೆರೆಗಳ ಪುನಶ್ಚೇತನದಿಂದ ಅಂತರ್ಜಲ ವೃದ್ಧಿ, ರೈತರಿಗೆ ಅನುಕೂಲ: ಲಕ್ಷ್ಮೀ ಹೆಬ್ಬಾಳಕರ್ಹಿರೇಹಟ್ಟಿಹೊಳಿ ಗ್ರಾಮದಲ್ಲಿ ಪುನರ್ವಸತಿ ವಸತಿ ಯೋಜನೆಗೆ ಚಾಲನೆಮಹಾದೇವ ಭಾಂದುರ್ಗೆ ನಿಧನಸಮಾಜಕ್ಕೆ ಉತ್ತಮ ಸಂದೇಶ ನೀಡುವ ಗುಣಮಟ್ಟದ ಚಿತ್ರಗಳು ನಿರ್ಮಾಣವಾಗಲಿ : ಮಾಜಿ ಶಾಸಕ ವಿ.ಐ. ಪಾಟೀಲ್ನಿನ್ನೆ ನಡೆದ  ಗೋಕಾಕ್ ಬಳಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ! ಸ್ಥಳದಲ್ಲೇ ಮೂವರ ಸಾವು, ನಾಲ್ವರ ಸ್ಥಿತಿ ಗಂಭೀರಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಬೆಳಗಾವಿ ಆರ್.ಎಲ್. ಕಾನೂನು ಮಹಾವಿದ್ಯಾಲಯದಲ್ಲಿ ಪ್ರವೇಶ ಮತ್ತು ಅಭಿಮುಖೀಕರಣ ಕಾರ್ಯಕ್ರಮವೀರ ವನಿತೆ ಒನಕೆ ಓಬವ್ವ ಜಯಂತ್ಯೋತ್ಸವ ಕಾರ್ಯಕ್ರಮ - 2026ಮಂಡೋಳ್ಳಿಯಲ್ಲಿ ₹1.70 ಕೋಟಿ ವೆಚ್ಚದಲ್ಲಿ ಶ್ರೀ ಮಾರುತಿ ದೇವಸ್ಥಾನ ನಿರ್ಮಾಣ