Press ID & Credential Portal
Apply / Verify  ➔
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ತಹಸೀಲ್ದಾರ್ ಭೇಟಿ-ಅಧಿಕಾರಿಗಳಿಗೆ ಚಾಟಿ!

ವರದಿ: ಚೇತನ್ ಜಿ ಜಾನಕಲ್

ಚಿಕ್ಕನಾಯಕನಹಳ್ಳಿ: ತಾಲೂಕಿನ ಹುಳಿಯಾರು ಹೋಬಳಿ, ಹೊಯ್ಸಳಕಟ್ಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನುಲೆನೂರು ಗ್ರಾಮದಲ್ಲಿ ತೀವ್ರವಾಗಿರುವ ಕುಡಿಯುವ ನೀರಿನ ಸಮಸ್ಯೆ ಕುರಿತು ಗ್ರಾಮಸ್ಥರಿಂದ ದೂರುಗಳು ಕೇಳಿಬಂದ ಹಿನ್ನೆಲೆಯಲ್ಲಿ ತಹಸೀಲ್ದಾರ್ ಮಮತಾ ಅವರು ಬೆಳ್ಳಂಬೆಳಗ್ಗೆ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದ್ದರೂ ಪಿಡಿಒ ಹಾಗೂ ಆಡಳಿತಾಧಿಕಾರಿಗಳು ಜನರ ಸಮಸ್ಯೆಗೆ ಸಮರ್ಪಕವಾಗಿ ಸ್ಪಂದಿಸುತ್ತಿಲ್ಲ. ದೂರವಾಣಿ ಕರೆ ಮಾಡಿದರೂ ಸ್ವೀಕರಿಸುತ್ತಿಲ್ಲ ಎಂದು ಗ್ರಾಮಸ್ಥರು ತಹಸೀಲ್ದಾರ್ ಅವರ ಗಮನಕ್ಕೆ ತಂದರು.

ಗ್ರಾಮಸ್ಥರ ಅಹವಾಲು ಆಲಿಸಿದ ತಹಸೀಲ್ದಾರ್ ಮಮತಾ ಅವರು ಸ್ಥಳೀಯ ಅಧಿಕಾರಿಗಳ ಕಾರ್ಯವೈಖರಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು. ಸ್ಥಳ ಪರಿಶೀಲನೆ ವೇಳೆ ಬೋರ್‌ವೆಲ್‌ನಲ್ಲಿ ನೀರು ಲಭ್ಯವಿದ್ದರೂ ಪೈಪ್‌ಲೈನ್, ಪಂಪ್ ಹಾಗೂ ಮೋಟರ್ ಅಳವಡಿಸದ ಕಾರಣ ನೀರು ಪೂರೈಕೆ ಸಾಧ್ಯವಾಗದಿರುವುದು ಗಮನಕ್ಕೆ ಬಂದಿದೆ. ಈ ಕಾಮಗಾರಿ ಕೈಗೊಳ್ಳುವಂತೆ ಎರಡು ತಿಂಗಳ ಹಿಂದೆಯೇ ಅಧಿಕಾರಿಗಳಿಗೆ ಸೂಚನೆ ನೀಡಿದ್ದರೂ ಇದುವರೆಗೂ ಕ್ರಮ ಕೈಗೊಂಡಿಲ್ಲ ಎಂದು ತಹಸೀಲ್ದಾರ್ ಅಸಮಾಧಾನ ವ್ಯಕ್ತಪಡಿಸಿದರು.

“ಎರಡು ತಿಂಗಳ ಹಿಂದೆಯೇ ಪೈಪ್‌ಲೈನ್ ಹಾಗೂ ಪಂಪ್ ಮೋಟರ್ ಅಳವಡಿಸುವಂತೆ ಸೂಚಿಸಿದ್ದೆ. ಇದುವರೆಗೂ ಕ್ರಮ ಕೈಗೊಂಡಿಲ್ಲ. ನಾಳೆ ಗ್ರಾಮೀಣ ಕುಡಿಯುವ ನೀರು ಇಲಾಖೆಯ ಇಂಜಿನಿಯರ್‌ಗೆ ಸೂಚನೆ ನೀಡಲಾಗಿದ್ದು, ಅವರು ಖುದ್ದು ಸ್ಥಳಕ್ಕೆ ಭೇಟಿ ನೀಡಿ ಅಗತ್ಯ ಕ್ರಮ ಕೈಗೊಳ್ಳಬೇಕು. ಸಮಸ್ಯೆಗೆ ಪರಿಹಾರ ಸಿಗಲಿದೆ,” ಎಂದು ತಹಸೀಲ್ದಾರ್ ಮಮತಾ ತಿಳಿಸಿದರು.

ಅಧಿಕಾರಿಗಳು ಜನರಿಗೆ ಸ್ಪಂದಿಸುತ್ತಿಲ್ಲ ಎಂಬ ದೂರುಗಳ ಹಿನ್ನೆಲೆಯಲ್ಲಿ, ಎಲ್ಲಾ ಪಿಡಿಒಗಳು ಹಾಗೂ ಆಡಳಿತಾಧಿಕಾರಿಗಳ ಸಂಪರ್ಕ ಸಂಖ್ಯೆಯನ್ನು ಮಾಧ್ಯಮಕ್ಕೆ ನೀಡುವುದಾಗಿ ತಹಸೀಲ್ದಾರ್ ಮಮತಾ ತಿಳಿಸಿದರು. ಜನರ ಸಮಸ್ಯೆಗಳಿಗೆ ಸ್ಪಂದಿಸಬೇಕಾದ ಅಧಿಕಾರಿಗಳು ದೂರವಾಣಿ ಕರೆ ಸ್ವೀಕರಿಸುತ್ತಿಲ್ಲ ಎಂಬ ಆರೋಪದ ಹಿನ್ನೆಲೆಯಲ್ಲಿ ತಹಸೀಲ್ದಾರ್ ಅವರ ಈ ಹೇಳಿಕೆ ಗಮನ ಸೆಳೆದಿದೆ.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST