LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಬೆಟ್ಟಿಂಗ್ ಚಟ : ಆಸ್ತಿ ಮಾರಿ ಕಳ್ಳತನ ಮಾಡ್ತಿದ್ದ ಟೆಕ್ಕಿಯ ಬಂಧನ

ಬೆಂಗಳೂರು : ಬೆಟ್ಟಿಂಗ್ ಚಟಕ್ಕೆ ಬಿದ್ದು ಕಳ್ಳತನ ಮಾಡ್ತಿದ್ದ ಸಾಫ್ಟ್‌ವೇರ್‌ ಎಂಜಿನಿಯರನ್ನು ಮಾಗಡಿ ರೋಡ್ ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗ ಮೂಲದ ಕೆ.ಎ.ಮೂರ್ತಿ (27) ಬಂಧಿತ ಸಾಫ್ಟ್‌ವೇರ್‌ ಎಂಜಿನಿಯರ್. ಬೆಂಗಳೂರಲ್ಲಿ ಸಾಫ್ಟ್‌ವೇರ್‌ ಎಂಜಿನಿಯರ್ ಆಗಿ ಕೆಲಸ ಮಾಡ್ತಿದ್ದ ಮೂರ್ತಿ ವಿಪರೀತ ಬೆಟ್ಟಿಂಗ್ ಚಟಕ್ಕೆ  ಬಿದ್ದು  ಸಾಲಗಾರನಾಗಿದ್ದ.

ತಂದೆ ಅಣ್ಣಪ್ಪ ಅವರು ಮಗನ ಸಾಲ ತೀರಿಸಲು ಶಿವಮೊಗ್ಗದಲ್ಲಿದ್ದ ಆಸ್ತಿಯನ್ನು ಮಾರಿದ್ದರು. ಬಳಿಕ ಕೆಲಸಕ್ಕೆ ಹೋಗಿ ಜೀವನ ಸಾಗಿಸೋಣ ಎಂದು ಕುಟುಂಬ ಸಮೇತರಾಗಿ ಬೆಂಗಳೂರಿಗೆ ಬಂದಿದ್ದರು.

ಬೆಂಗಳೂರಿಗೆ ಬಂದರೂ ಬೆಟ್ಟಿಂಗನ್ನು ಬಿಡದ ಮೂರ್ತಿ, ಬೆಟ್ಟಿಂಗ್ ಹಣಕ್ಕಾಗಿ ಮನೆಗಳ್ಳತನ ಮಾಡ್ತಿದ್ದ. ಅಲ್ಲದೇ ಅಂಗಾಳ ಪರಮೇಶ್ವರಿ ದೇವಸ್ಥಾನಕ್ಕೆ ಬಂದಿದ್ದ ಮಹಿಳೆಯ ಸರ ಕಿತ್ತಿದ್ದ. ಈ ಪ್ರಕರಣ ಸಂಬಂಧ ಆರೋಪಿ ಮೂರ್ತಿಯನ್ನು ಮಾಗಡಿ ರೋಡ್ ಪೊಲೀಸರು ಬಂಧಿಸಿದ್ದರು.

ಆರೋಪಿಯ ವಿಚಾರಣೆ ವೇಳೆ ಹಲವು ಮನೆಗಳ್ಳತನ ಪ್ರಕರಣ ಪತ್ತೆಯಾಗಿದ್ದು, ಕೋಣನಕುಂಟೆ, ಸದ್ದುಗುಂಟರಪಾಳ್ಯ, ಅವಲಹಳ್ಳಿ ಪೊಲೀಸ್ ಠಾಣೆಯಲ್ಲಿ ಕಳ್ಳತನ ಮಾಡಿರುವುದು ಬೆಳಕಿಗೆ ಬಂದಿದೆ. ಸದ್ಯ ಬಂಧಿತನಿಂದ 17 ಲಕ್ಷ ರೂ. ಮೌಲ್ಯದ 245 ಗ್ರಾಂ ಚಿನ್ನಾಭರಣವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026