LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ತೆಲಂಗಾಣದಲ್ಲಿ ಸುರಂಗದ ಮೇಲ್ಛಾವಣಿ ಕುಸಿತ : 8 ಮಂದಿ ಸಿಲುಕಿರುವ ಶಂಕೆ

ಹೈದರಾಬಾದ್:ತೆಲಂಗಾಣದ ನಾಗರ್‌ ಕರ್ನೂಲ್ ಜಿಲ್ಲೆಯ ಶ್ರೀಶೈಲಂ ಎಡದಂಡೆ ಕಾಲುವೆಯ ನಿರ್ಮಾಣ ಹಂತದಲ್ಲಿದ್ದ ಸುರಂಗದಲ್ಲಿ ಮೇಲ್ಛಾವಣಿ ಕುಸಿದು ಕನಿಷ್ಠ 8 ಮಂದಿ ಕಾರ್ಮಿಕರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಘಟನೆಯಲ್ಲಿ 48 ಕಾರ್ಮಿಕರನ್ನು ರಕ್ಷಿಸಲಾಗಿದೆ.

ದೋಮಲಪೆಂಟಾ ಬಳಿಯ ಶ್ರೀಶೈಲಂ ಅಣೆಕಟ್ಟಿನ ಹಿಂಭಾಗದ ಸುರಂಗದಲ್ಲಿ ಸೋರಿಕೆ ಉಂಟಾಗಿದ್ದು, ಸೋರಿಕೆ ಸರಿಪಡಿಸಲು ಕಾರ್ಮಿಕರು ಒಳಗೆ ಹೋದಾಗ ಛಾವಣಿ ಕುಸಿದಿದೆ.  ಕನಿಷ್ಠ 8 ಮಂದಿ ಸುರಂಗದಲ್ಲಿ ಸಿಲುಕಿರುವ ಶಂಕೆಯಿದೆ ಎಂದು ಹಿರಿಯ ಪೊಲೀಸ್‌ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಸುರಂಗ ನಿರ್ಮಾಣ ಕಂಪನಿ ನೀಡಿದ ಮಾಹಿತಿಯ ಪ್ರಕಾರ, ಸುರಂಗದಲ್ಲಿ 12-13 ಕಿಮೀ ಒಳಗೆ ಸೋರಿಕೆ ಉಂಟಾಗಿತ್ತು. ಅದನ್ನು ಸರಿಪಡಿಸಲು ಕಾರ್ಮಿಕರು ಒಳಗೆ ಹೋದಾಗ ಎಡಭಾಗದಲ್ಲಿರುವ ಸುರಂಗದ ಮೇಲ್ಛಾವಣಿ ಮೂರು ಮೀಟರ್‌ಗಳಷ್ಟು ಕುಸಿದಿದೆ ಎಂದು ತಿಳಿದುಬಂದಿದೆ. ಘಟನೆ ಕುರಿತು ತೆಲಂಗಾಣ ಸಿಎಂ ರೇವಂತ್‌ ರೆಡ್ಡಿ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಹಂಚಿಕೊಂಡಿದ್ದು, ಆಘಾತ ವ್ಯಕ್ತಪಡಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST