LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಭಾರೀ ಮಳೆಗೆ ಭೂಕುಸಿತ -ಅಮರನಾಥ ಯಾತ್ರೆಯನ್ನು ತಾತ್ಕಾಲಿಕ ಸ್ಥಗಿತ

ಶ್ರೀನಗರ : ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರೀ ಮಳೆಯಿಂದಾಗಿ ಅಮರನಾಥ ಯಾತ್ರೆಗೆ ತೆರಳುವ ಮಾರ್ಗದಲ್ಲಿ ಭೂಕುಸಿತವಾಗುತ್ತಿದೆ. ಇದರಿಂದ ಅಮರನಾಥ ಯಾತ್ರೆಯನ್ನು ತಾತ್ಕಾಲಿಕ ಸ್ಥಗಿತಗೊಳಿಸಲಾಗಿದೆ.

ಗಂಡೇರ್ಬಾಲ್ ಜಿಲ್ಲೆಯ ಬಾಲ್ಟಾಲ್ ಯಾತ್ರೆಯ ಬಾಲ್ಟಾಲ್ ಮಾರ್ಗದಲ್ಲಿ ನೀರಿನ ಜೊತೆ ಕಲ್ಲು ಬಂಡೆಗಳು ಉರುಳಿ ಬಂದಿದ್ದರಿಂದ ಮಹಿಳೆಯೊಬ್ಬಳು ಸಿಲುಕಿ ಸಾವನ್ನಪ್ಪಿದ್ದಾಳೆ. ಮಾರ್ಗದಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಇತರ ಮೂವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬಾಲ್ಟಾಲ್ ಮಾರ್ಗದಲ್ಲಿ ಭೂಕುಸಿತವಾಗಿದೆ. ಭೂಕುಸಿತದ ವಿಡಿಯೋ ವೈರಲ್‌ ಆಗಿದೆ. ವಿಡಿಯೋದಲ್ಲಿ, ಇಬ್ಬರು ಯಾತ್ರಿಗಳು ಸಿಲುಕಿರುವುದು ಸೆರೆಯಾಗಿದೆ. ಅವರನ್ನು ಸ್ಥಳೀಯರು ರಕ್ಷಿಸಿದ್ದಾರೆ. ಅಪಾಯದಿಂದ ತಪ್ಪಿಸಿಕೊಳ್ಳಲು ಅನೇಕ ಜನರು ಮಾರ್ಗದಲ್ಲಿ ಅಳವಡಿಸಲಾದ ರೇಲಿಂಗ್‌ಗಳನ್ನು ಹಿಡಿದುಕೊಂಡಿರುವುದು ಸಹ ವಿಡಿಯೋದಲ್ಲಿ ಸೆರೆಯಾಗಿದೆ.

ಸ್ಥಳದಲ್ಲಿ ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್ ತಂಡಗಳು ಸ್ಥಳದಲ್ಲಿರುವ ಯಾತ್ರಿಗಳ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ಯಾತ್ರೆಯ ಮಾರ್ಗಗಳ ದುರಸ್ಥಿ ಕಾರ್ಯ ಮುಗಿಯುವವರೆಗೂ ಯಾತ್ರೆಯನ್ನು ಸ್ಥಗಿತಗೊಳಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026