LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಚಿಕ್ಕಮಗಳೂರು ಜಿಲ್ಲೆಯ ಕೆಲವು ಪ್ರವಾಸಿ ಸ್ಥಳಗಳಿಗೆ ತಾತ್ಕಾಲಿಕ ನಿರ್ಬಂಧ

ಚಿಕ್ಕಮಗಳೂರು  ಜಿಲ್ಲೆಗೆ ಆಗಮಿಸುತ್ತಿರುವ ಪ್ರವಾಸಿಗರು ಮತ್ತು ಸ್ಥಳೀಯ ಜನತೆಯ ಹಿತದೃಷ್ಟಿಯಿಂದ ಗಿರಿಪ್ರದೇಶದ ಕೆಲವು ಪ್ರವಾಸೋದ್ಯಮ ಸ್ಥಳಗಳನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಸಿ.ಎನ್‌.ಮೀನಾ ನಾಗರಾಜ್‌ ತಿಳಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಪ್ರವಾಸೋದ್ಯಮ ನೀತಿ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಹೆಚ್ಚು ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಗಿರಿಪ್ರದೇಶದ ಕೆಲವು ಭಾಗಗಳಲ್ಲಿ ಗುಡ್ಡ ಕುಸಿತದಿಂದ ಅಲ್ಲಲ್ಲಿ ಮಣ್ಣು ಆವರಿಸಿದ್ದು, ರಸ್ತೆ ಕುಸಿತ ಸಂಭವಿಸಿರುವ ಹಿನ್ನೆಲೆಯಲ್ಲಿ ನಿರ್ಬಂಧ ವಿಧಿಸಲಾಗಿದೆ. ನಿಯಮಾನುಸಾರ ಪ್ರವಾಸಿಗರು ತಮ ಸುರಕ್ಷತೆ ದೃಷ್ಟಿಯಿಂದ ಜಿಲ್ಲಾಡಳಿತದ ನಿಯಮಗಳನ್ನು ಪಾಲಿಸುವುದು ಅಗತ್ಯವಾಗಿದೆ ಎಂದರು.

ಪ್ರವಾಸಿಗರು ಬರುವ ವಾಹನಗಳಿಗೆ ಸ್ಥಳೀಯವಾಗಿ ಗುರುತಿಸಿರುವ ಸ್ಥಳಗಳಲ್ಲಿ ತಮ ವಾಹನಗಳನ್ನು ನಿಲುಗಡೆಗೊಳಿಸಿ ಸ್ಥಳೀಯ ಲಘು ವಾಹನಗಳಲ್ಲಿ ಪ್ರವಾಸಿ ಸ್ಥಳಗಳ ವೀಕ್ಷಣೆಗೆ ತೆರಳಬಹುದು. ಪ್ರವಾಸಿಗರನ್ನು ಕರೆದೊಯ್ಯಲು ಬೆಳಿಗ್ಗೆ 100 ಹಾಗೂ ಸಂಜೆ 100 ವಾಹನಗಳನ್ನು ಮಾತ್ರ ಬಿಡಲು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026