ಎತ್ತರದ ಸೇನಾ ಪೋಸ್ಟ್‌ಗೆ ತೆರಳುತ್ತಿದ್ದ ವೇಳೆ 17 ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ಗುಂಡು ನಿರೋಧಕ ಸೇನಾ ವಾಹನ ಚಾಲಕನ ನಿಯಂತ್ರಣ ತಪ್ಪಿ ಸುಮಾರು 200 ಅಡಿ ಆಳದ ಕಂದಕಕ್ಕೆ ಉರುಳಿ ಬಿದ್ದಿದೆ. ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಸೇನೆ ಮತ್ತು ಪೊಲೀಸ್ ಸಿಬ್ಬಂದಿ ಜಂಟಿಯಾಗಿ ತಕ್ಷಣ ರಕ್ಷಣಾ ಕಾರ್ಯಾಚರಣೆ ಆರಂಭಿಸಿದರು.
ಘಟನೆಯಲ್ಲಿ ಹತ್ತು ಯೋಧರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನೂ ಒಂಬತ್ತು ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರಲ್ಲಿ ಗಂಭೀರವಾಗಿ ಗಾಯಗೊಂಡ ಮೂವರು ಯೋಧರನ್ನು ವಿಶೇಷ ಚಿಕಿತ್ಸೆಗಾಗಿ ಉಧಂಪುರದ ಮಿಲಿಟರಿ ಆಸ್ಪತ್ರೆಗೆ ವಿಮಾನದ ಮೂಲಕ ಕಳುಹಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.