ಬೆಂಗಳೂರು :
ನನೆಗುದಿಗೆ ಬಿದ್ದಿರುವ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಯುವನಾಯಕನಿಗೆ ಒಲಿಯುವ ಸಾಧ್ಯತೆ ಇದೆ. ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಯಡಿಯೂರಪ್ಪ ಅವರ ಪುತ್ರ ಹಾಗೂ ಶಿಕಾರಿಪುರ ಶಾಸಕ ವಿಜಯೇಂದ್ರ ಅವರಿಗೆ ಒಲಿಯುವ ಸಾಧ್ಯತೆ ಇದೆ.
ಈ ಹಿನ್ನಲೆಯಲ್ಲಿ ಯಡಿಯೂರಪ್ಪ ಇದೀಗ ಪಕ್ಷದಲ್ಲಿ ಮತ್ತೆ ಸಕ್ರಿಯರಾಗಿ ಕಾಣಿಸಿಕೊಂಡಿದ್ದು ಈ ವಾರವೇ ಬಿಜೆಪಿಗೆ ಹೊಸ ಸಾರಥಿ ನೇಮಕ ನಿರೀಕ್ಷೆ ಇದೆ. ನಾಗಾಲ್ಯಾಂಡ್, ಮೇಘಾಲಯ, ಪುದುಚೇರಿ ರಾಜ್ಯ ಘಟಕಗಳಿಗೆ ಬಿಜೆಪಿ ವರಿಷ್ಠರು ಹೊಸ ಅಧ್ಯಕ್ಷರನ್ನು ನೇಮಕ ಮಾಡಿದ್ದಾರೆ. ಇದಕ್ಕೆ ಪೂರಕವಾಗಿ ಕರ್ನಾಟಕದಲ್ಲಿ ವಿಜಯೇಂದ್ರ ಅವರನ್ನು ರಾಜ್ಯಾಧ್ಯಕ್ಷರನ್ನಾಗಿ ಮಾಡುತ್ತಾರೆ ಎಂಬ ಚರ್ಚೆ ಗರಿಗೆದರಿದೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.