ಮಾಜಿ ಶಾಸಕರ ಪುತ್ರನ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆ.!
ಧಾರವಾಡ: ರಾಮಾಪುರ ಬಳಿಯ ದಟ್ಟ ಕಾಡಿನಲ್ಲಿ ನಿಂತಿದ್ದ ಕಾರಿನಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಸುಟ್ಟ ಸ್ಥಿತಿಯಲ್ಲಿ ವ್ಯಕ್ತಿಯೊಬ್ಬರ ಮೃತದೇಹ ಪತ್ತೆಯಾಗಿದೆ. ಮೃತ ವ್ಯಕ್ತಿ ಬೈಲಹೊಂಗಲ ಕ್ಷೇತ್ರದ ಮಾಜಿ ಶಾಸಕ ಬಾಬುರಾವ್ ಬೋಳಶೆಟ್ಟಿ ಅವರ ಪುತ್ರ ರಾಜು ಬೋಳಶೆಟ್ಟಿ (53) ಎಂದು ಗುರುತಿಸಲಾಗಿದೆ.
ಬೆಳಗಾವಿ ಜಿಲ್ಲೆಯ ಬೈಲಹೊಂಗಲದ ಉಡಕೇರಿ ಗ್ರಾಮದ ನಿವಾಸಿಯಾಗಿರುವ ರಾಜು ಬೋಳಶೆಟ್ಟಿ ಅವರ ಮೃತದೇಹ ಅವರದ್ದೇ ಕಾರನಲ್ಲಿ ಸಂಪೂರ್ಣವಾಗಿ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದೆ. ಕಾರು ಕೂಡ ಸುಟ್ಟು ಹೋಗಿದ್ದು, ಹಲವು ಅನುಮಾನಕ್ಕೆ ಕಾರಣವಾಗಿದೆ. ಘಟನಾ ಸ್ಥಳಕ್ಕೆ ಧಾರವಾಡ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆ ಆರಂಭಿಸಿದ್ದಾರೆ.!
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.