ಬೆಳಗಾವಿ :
ಬೆಳಗಾವಿ ನಗರದ ಸಾಂಬ್ರಾ ಬಸ್ ನಿಲ್ದಾಣದಲ್ಲಿ ಸುಮಾರು 17 ವರ್ಷದ ಅನಾಮಧೇಯ ಬಾಲಕನು ಪತ್ತೆಯಾಗಿದ್ದು, ಸ್ಥಳಿಯರು ಬಾಲಕನನ್ನು ವಿಚಾರಿಸಿದಾಗ ಬಾಲಕನು ತನ್ನ ಯಾವುದೇ ಮಾಹಿತಿಯನ್ನು ನೀಡಿರುವುದಿಲ್ಲ. ನಂತರ ಸ್ಥಳಿಯರು ದೂರವಾಣಿ ಮೂಲಕ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿಯವರಿಗೆ ಮಾಹಿತಿ ನೀಡಿರುತ್ತಾರೆ. ತಕ್ಷಣ ಸಿಬ್ಬಂದಿಯವರು ಕಾರ್ಯಪ್ರವೃತ್ತರಾಗಿ ಸ್ಥಳಕ್ಕೆ ಬೇಟಿ ನೀಡಿ ಬಾಲಕನನ್ನು ರಕ್ಷಣೆ ಮಾಡಿ ಮಕ್ಕಳ ಕಲ್ಯಾಣ ಸಮಿತಿಯ ಮುಂದೆ ಹಾಜರಪಡಿಸಿದ್ದು, ಬಾಲಕನನ್ನು ಮಕ್ಕಳ ಕಲ್ಯಾಣ ಸಮಿತಿ ಇವರು ತಾತ್ಕಾಲಿಕವಾಗಿ ರಕ್ಷಣೆ ಮತ್ತು ಪೋಷಣೆಗಾಗಿ ಯಶಸ್ವಿನಿ ಶಿಕ್ಷಣ ಮತ್ತು ಮಹಿಳಾ ಕಲ್ಯಾಣ ಸಂಸ್ಥೆಯ ತೆರೆದ ತಂಗುದಾಣ ಬೆಳಗಾವಿಯಲ್ಲಿ ಅಭೀರಕ್ಷಣೆಗಾಗಿ ದಾಖಲು ಮಾಡಲಾಗಿದೆ. ಬಾಲಕನ ಜೈವಿಕ ಪೋಷಕರು ಇದ್ದಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಸುವರ್ಣ ವಿಧಾನಸೌಧ ಬೆಳಗಾವಿ ದೂ:08312474111 ಕ್ಕೆ ಸಂಪರ್ಕಿಸಬಹುದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳಾದ ಚಂದ್ರಶೇಖರ ಸುಖಸಾರೆ ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.