ಬೆಳಗಾವಿ: ಕೆಎಲ್ಇ ಸಂಸ್ಥೆಯ ಜಿ.ಎ. ಪ್ರೌಢ ಶಾಲೆಯ ವಿದ್ಯಾರ್ಥಿಗಳು ಕ್ಯಾಂಪ್ ವಲಯ ಮಟ್ಟದ 17 ವರ್ಷ ವಯೋಮಿತಿಯ ಬಾಲಕಿಯರ ಥ್ರೋಬಾಲ್ ಪಂದ್ಯಾವಳಿಯಲ್ಲಿ ವಿಜಯಶಾಲಿಯಾಗಿ ತಾಲೂಕು ಮಟ್ಟಕ್ಕೆ ಆಯ್ಕೆ ಆಗಿರುತ್ತಾರೆ.
ಫೈನಲ್ ಪಂದ್ಯದಲ್ಲಿ ಮರಾಠಿ ವಿದ್ಯಾನಿಕೇತನ ಪ್ರೌಢಶಾಲೆಯನ್ನು 2-0 ಸೆಟ್ ನಿಂದ ಸೋಲಿಸಿ ವಿಜಯ ಶಾಲಿಯಾಗಿದ್ದಾರೆ.
ಉಪ ಪ್ರಾಚಾರ್ಯ ಸಿ.ಪಿ. ದೇವರುಷಿ, ಕೆಎಲ್ ಇ ಸಂಸ್ಥೆಯ ಆಜೀವ ಸದಸ್ಯ ಮಹದೇವ ಬಳಿಗಾರ,
ದೈಹಿಕ ಶಿಕ್ಷಕ ವೀರಗಂಟಿ, ಶಿಕ್ಷಕ ಸಿಬ್ಬಂದಿ, ವಿದ್ಯಾರ್ಥಿಗಳು ಸಾಧನೆಗೈದ ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.