Press ID & Credential Portal
Apply / Verify  ➔
LIVE TV LocalCrimeNationalInternationalPoliticsFinancialEducationTechnologyEntertainmentSportsHealthFeature
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Politics News

ಆರೋಗ್ಯದಲ್ಲಿ ಏರುಪೇರು: ಕಲಾಪದಿಂದ ದೂರ ಉಳಿದು ವಿಶ್ರಾಂತಿ ಪಡೆದ ಸಿಎಂ

ಬೆಳಗಾವಿ: ನಾಡದೊರೆ ಸಿದ್ದರಾಮಯ್ಯ ಅವರ ಆರೋಗ್ಯದಲ್ಲಿ ಬುಧವಾರ ಸ್ವಲ್ಪಮಟ್ಟಿಗೆ ಏರುಪೇರು ಕಂಡು ಬಂದಿದೆ. ಇದರಿಂದಾಗಿ ಬೆಳಗಾವಿಯ ಪ್ರವಾಸಿ ಮಂದಿರದಲ್ಲಿ ವಿಶ್ರಾಂತಿಗೆ ಪಡೆದರು.



ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ನ್ಯಾಯಾಲಯ ನೀಡಿದ ತೀರ್ಪು ಬೆಂಬಲಿಸಿ, ಕೇಂದ್ರ ಸರಕಾರದ ವಿರುದ್ಧ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಪಾಲ್ಗೊಂಡಿದ್ದರು. ಒಂದು ಗಂಟೆ ಧರಣಿ ನಡೆಸಿ ಸದನದೊಳಗೆ ಹೋದ ಅವರು ಕೆಲ ಸಮಯದ ನಂತರ ಬೆಳಗಾವಿಯ ಪ್ರವಾಸ ಮಂದಿರಕ್ಕೆ ಆಗಮಿಸಿ ವಿಶ್ರಾಂತಿ ಪಡೆದರು. ಬುಧವಾರ ಅವರು ಸದನದಿಂದ ದೂರ ಉಳಿದು ಪ್ರವಾಸಿ ಮಂದಿರದಲ್ಲಿ ಇಡೀ ದಿನ ವಿಶ್ರಾಂತಿ ಪಡೆದರು.



ಸಚಿವ ಭೈರತಿ ಸುರೇಶ್ ಮಾತನಾಡಿ ಮುಖ್ಯಮಂತ್ರಿ ಅವರಿಗೆ ಹೊಟ್ಟೆ ನೋವು ಕಾಣಿಸಿಕೊಂಡಿದೆ. ನಾನು ಅವರ ಜೊತೆ ಊಟ ಮಾಡಿ ಬಂದಿದ್ದು ಆರೋಗ್ಯ ಸುಧಾರಣೆ ಆಗಿದೆ. ಗುರುವಾರ ಸದನದಲ್ಲಿ ಅವರು ನೀಡಬೇಕಾದ ವಿಷಯಗಳ ಮಾಹಿತಿ ಸಂಗ್ರಹಿಸುತ್ತಿದ್ದಾರೆ ಎಂದರು.



ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಅವರು ಪ್ರವಾಸಿ ಮಂದಿರಕ್ಕೆ ಆಗಮಿಸಿ ಅವರ ಆರೋಗ್ಯ ವಿಚಾರಿಸಿದರು. ಜೆಡಿಎಸ್ ಶಾಸಕ ಜಿಟಿ ದೇವೇಗೌಡ, ವಿಧಾನಪರಿಷತ್ ಸದಸ್ಯ ಯತೀಂದ್ರ ಅವರು ಸಹ ಆರೋಗ್ಯ ವಿಚಾರಿಸಿದರು.

Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಡಿಸೆಂಬರ್ 7ರಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ಸಾಧ್ಯತೆಎಂಎಸ್‌ಪಿ ಆಧರಿಸಿ ಕಬ್ಬಿಗೆ ದರ: ಡಿ.ಕೆ. ಶಿವಕುಮಾರಮತದಾರರ ಅಂತಿಮ ಪಟ್ಟಿಯಲ್ಲಿ ನಿಮ್ಮ ಹೆಸರು ಪರಿಶೀಲಿಸಿಚುನಾವಣಾ ಆಯೋಗದ ಸಮರ್ಥನೆಗೆ ಆಕ್ಷೇಪಣೆ ಸಲ್ಲಿಸಲು 10 ದಿನ ಕಾಲಾವಕಾಶಸಚಿವ ಜಿ. ಪರಮೇಶ್ವರ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು‘ಬಟ್ಟೆ ಹರಿದು ರಕ್ತಸ್ರಾವವಾಗಿತ್ತು’: ಟ್ರಂಪ್ ವಿರುದ್ಧ ಮಾಜಿ ಮಿಸ್ ಸ್ವಿಟ್ಜರ್ಲ್ಯಾಂಡ ಅತ್ಯಾಚಾರ ಆರೋಪ!ಮತದಾರರ ಪಟ್ಟಿಯಿಂದ 1 ಕೋಟಿ ಹೆಸರು ಡಿಲೀಟ್!ಕಬ್ಬಿನ ದರ ನಿಗದಿ ಸಭೆಯಲ್ಲಿ ರೈತ ಮುಖಂಡರ ಮಾರಾಮಾರಿ: ಸುವರ್ಣಸೌಧದಲ್ಲೇ ಕೈಕೈ ಮಿಲಾಯಿಸಿದ ಎರಡು ಬಣಗಳು!ಕನ್ನಡಿಗರಿಗೆ ಉದ್ಯೋಗ ನಿರಾಕರಿಸಿದರೆ ಖಾಸಗಿ ಸಂಸ್ಥೆಗಳ ವಿರುದ್ಧ ಕ್ರಮ: ಡಿ.ಕೆ. ಶಿವಕುಮಾರಜಲವಿದ್ಯುತ್ ಯೋಜನೆ ವಿರೋಧಿಸಿ ಅರುಣಾಚಲದಲ್ಲಿ ಹಿಂಸಾಚಾರ: ಭದ್ರತಾ ಪಡೆಯ ಎರಡು ತುಕಡಿ ರವಾನೆ