LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಸೈನಿಕರು ಬಲಿಷ್ಠವಾಗಿದ್ದರಷ್ಟೇ ದೇಶ ಬಲಿಷ್ಠ : ರಾಜನಾಥ್ ಸಿಂಗ್

ಉಧಂಪುರ: ಮುಂದಿನ ದಿನಗಳಲ್ಲಿ ಭಾರತ ಎಂದಿಗೂ ಭಯೋತ್ಪಾದನೆಗೆ ಬಲಿಯಾಗುವುದಿಲ್ಲ. ಉಗ್ರ ಶಕ್ತಿಗಳ ವಿರುದ್ಧ ಶಕ್ತಿ ಮತ್ತು ಕಾರ್ಯ ತಂತ್ರಗಳ ಮೂಲಕ ನಾವು ಪ್ರತಿಕ್ರಿಯೆ ನೀಡುತ್ತೇವೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.

ಉಧಂಪುರ ಉತ್ತರ ಕಮಾಂಡ್‌ನಲ್ಲಿ ಸೈನಿಕರ ಜೊತೆಗೆ ಸಂವಾದ ನಡೆಸಿದ ಅವರು ಉಗ್ರವಾದದ ವಿರುದ್ದ ಭಾರತದ ಬಲವಾದ ನಿಲುವನ್ನು ಸ್ಪಷ್ಟಪಡಿಸಿದ್ದಾರೆ.

ಪಾಕ್ ಮತ್ತು ಪಿಒಕೆ‌ಯಲ್ಲಿ ಉಗ್ರರ ಮೂಲಸೌಕರ್ಯಗಳನ್ನು ನಾಶ ಮಾಡುವ ಕಾರ್ಯದಲ್ಲಿ ಭಾರತೀಯ ಸಶಸ್ತ್ರ ಪಡೆಗಳು ಮತ್ತು ಗುಪ್ತಚರ ಸಂಸ್ಥೆಗಳ ಸಮನ್ವಯತೆ, ನಿಖರತೆ ಮತ್ತು ಧೈರ್ಯವನ್ನು ಅವರು ಇದೇ ಸಂದರ್ಭದಲ್ಲಿ ಶ್ಲಾಘಿಸಿದ್ದಾರೆ. ಉಗ್ರವಾದದ ಬಗ್ಗೆ ಭಾರತದ ನೀತಿಯಲ್ಲಿನ ಬದಲಾವಣೆ ಯೋಧರ ಶೌರ್ಯ, ಸಮರ್ಪಣೆಯ ಪರಿಣಾಮವಾಗಿದೆ ಎಂದು ಅವರು ತಿಳಿಸಿದ್ದಾರೆ.



ಆಪರೇಷನ್ ಸಿಂಧೂರ್ ಬಗೆಗೂ ಮಾತನಾಡಿದ ಅವರು, ಈ ಸಂಗತಿ ಗಡಿಯಾಚೆಗಿನ ಉಗ್ರರು ಮತ್ತು ಅವರನ್ನು ಬೆಂಬಲಿಸುವ ಎಲ್ಲರಿಗೂ ಎಚ್ಚರಿಕೆಯಾಗಿದೆ. ಭಾರತ ಇನ್ನು ಮುಂದೆ ಭಯೋತ್ಪಾದನೆಯನ್ನು ಸಹಿಸುವುದಿಲ್ಲ, ಏಕತೆ – ಸಮಗ್ರತೆಗೆ ಧಕ್ಕೆ, ಹಾನಿಯಾದರೆ ಸೂಕ್ತ ಉತ್ತರವನ್ನು ನೀಡಲು ನಾವು ನೀಡುತ್ತೇವೆ ಎಂದು ಅವರು ನುಡಿದಿದ್ದಾರೆ.

ಆಪರೇಷನ್ ಸಿಂಧೂರ ಮುಗಿದಿಲ್ಲ. ಇದು ಕೇವಲ ವಿರಾಮ ಎಂದು ನೆರೆಯ ರಾಷ್ಟ್ರಗಳಿಗೆ ಸಂದೇಶ ರವಾನಿಸಿದ್ದಾರೆ.

ಹಾಗೆಯೇ ಸೈನಿಕರ ಆರೋಗ್ಯ, ಸದೃಢತೆಯ ಬಗೆಗೂ ಮಾತನಾಡಿರುವ ಅವರು ದೈಹಿಕ ಮತ್ತು ಮಾನಸಿಕ ಆರೋಗ್ಯ ಕಾಪಾಡಿಕೊಳ್ಳುವಂತೆ ಕರೆ ನೀಡಿದ್ದಾರೆ. ಸೈನಿಕರು ಬಲಿಷ್ಠವಾಗಿದ್ದರೆ ದೇಶದ ಗಡಿಗಳು ಬಲಿಷ್ಠವಾಗಿರುತ್ತವೆ. ಹಾಗಿದ್ದಲ್ಲಿ ಮಾತ್ರ ಭಾರತ ಬಲಿಷ್ಠವಾಗಿರುತ್ತದೆ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026