ವಿಷ ಆಹಾರ ತಿಂದು ನಾಲ್ಕು ಹುಲಿಗಳ ಸಾವು.! ತನಿಖೆಗೆ ಆದೇಶ.!
ಚಾಮರಾಜನಗರ: ಹನೂರು ತಾಲೂಕಿನ ಮಲೆಮಹದೇಶ್ವರ ಮೀಣ್ಯಂ ವನ್ಯಧಾಮದ ಮೀಸಲು ಅರಣ್ಯ ವಲಯದಲ್ಲಿ ತಾಯಿ ಹುಲಿ ಮತ್ತು ಅದರ 3 ಮರಿಗಳ ಅಸಹಜವಾಗಿ ಸಾವನ್ನಪರುವ ಪ್ರಕರಣ ಬೆಳಕಿಗೆ ಬಂದಿದೆ.
ಈ ಘಟನೆ ಅರಣ್ಯ ಇಲಾಖೆ ಮತ್ತು ಪ್ರಾಣಿಪ್ರೇಮಿಗಳಲ್ಲಿ ಆತಂಕ ಉಂಟುಮಾಡಿದ್ದು, ಯಾರೋ ಕಿಡಿಗೇಡಿಗಳು ವಿಷಪ್ರಾಶನ ಮಾಡಿ ಸಾಯಿಸಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. ಈ ಸಂಬಂದ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ತನಿಖೆಗೆ ಆದೇಶಿಸಿದ್ದಾರೆ.
ಮಾಂಸದಲ್ಲಿ ವಿಷ ಹಾಕಿ ತಾಯಿ ಹುಲಿ ಹಾಗೂ ಅರ ಮೂರು ಮರಿಗಳನ್ನು ಕೊಂದಿರುವ ಶಂಕೆ ವ್ತಕ್ತವಾಗಿದೆ. ವಿಷಯ ತಿಳಿಯುತ್ತಿದ್ದಂತೆಯೇ ಘಟನೆ ಸ್ಥಳಕ್ಕೆ ಅರಣ್ಯ ಇಲಾಖೆಯ ಉನ್ನತಾಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದ್ದು, ತ್ವರಿತ ತನಿಖೆಗೆ ಪ್ರಾರಂಭವಾಗಿದೆ.
ಈ ನಿಷ್ಕರಣೆಯ ಘಟನೆಗೆ ಸಂಬಂಧಿಸಿದಂತೆ ರಾಜ್ಯ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರು ಪಿಸಿಸಿಎಫ್ (ಪ್ರಿನ್ಸಿಪಲ್ ಚೀಫ್ ಕಾಂಸರ್ವೇಟರ್ ಆಫ್ ಫಾರೆಸ್ಟ್) ಅವರ ನೇತೃತ್ವದಲ್ಲಿ ತಕ್ಷಣ ತನಿಖೆ ನಡೆಸುವಂತೆ ಆದೇಶ ಹೊರಡಿಸಿದ್ದಾರೆ.
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.