LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ನ್ಯಾಷನಲ್ ಹೆರಾಲ್ಡ್ ಪ್ರಕರಣ: ರಾಹುಲ್, ಸೋನಿಯಾ ವಿರುದ್ಧದ ಆರೋಪ ಪರಿಗಣನೆ ಕುರಿತು ತೀರ್ಪು ಕಾಯ್ದಿರಿಸಿದ ದೆಹಲಿ ನ್ಯಾಯಾಲಯ

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕರಾದ ಸೋನಿಯಾ, ರಾಹುಲ್ ಗಾಂಧಿ ಹಾಗೂ ಉಳಿದ ಐವರ ವಿರುದ್ಧದ ಹಣ ವರ್ಗಾವಣೆ ಆರೋಪವನ್ನು ಪರಿಗಣಿಸಬೇಕೆ ಎಂಬ ಕುರಿತು ದೆಹಲಿ ನ್ಯಾಯಾಲಯ ತೀರ್ಪು ಕಾಯ್ದಿರಿಸಿದೆ.

ಜುಲೈ 29ರಂದು ಆದೇಶ ಪ್ರಕಟಿಸುವುದಾಗಿ ರೋಸ್ ಅವೆನ್ಯೂ ಕೋರ್ಟ್ ಸಂಕೀರ್ಣದಲ್ಲಿನ ಭ್ರಷ್ಟಾಚಾರ ತಡೆ ಕಾಯ್ದೆಯಡಿ ರೂಪುಗೊಂಡಿರುವ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ವಿಶಾಲ್ ಗೋಗ್ನೆ ತಿಳಿಸಿದ್ದಾರೆ. ಗಾಂಧಿ ಕುಟುಂಬದವರಲ್ಲದೇ ಸುಮನ್ ದುಬೆ, ಸ್ಯಾಮ್ ಪಿತ್ರೋಡಾ, ಸುನಿಲ್ ಭಂಡಾರಿ ಹಾಗೂ ಯಂಗ್ ಇಂಡಿಯನ್, ಡೋಟೆಕ್ಸ್ ಮರ್ಚಂಡೈಸ್ ಕೂಡ ಜಾರಿ ನಿರ್ದೇಶನಾಲಯ ಈ ಪ್ರಕರಣದ ಆರೋಪಿಗಳನ್ನಾಗಿ ಹೆಸರಿಸಿತ್ತು.

ನ್ಯಾಷನಲ್ ಹೆರಾಲ್ಡ್ ಪತ್ರಿಕೆಯ ಒಡೆತನ ಹೊಂದಿದ್ದ ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್‌ಗೆ ಕಾಂಗ್ರೆಸ್ 90 ಕೋಟಿ ರೂ.ನಷ್ಟು ಸಾಲ ನೀಡಿತ್ತು. ಯಂಗ್ ಇಂಡಿಯನ್ ಸಂಸ್ಥೆ ಕಾಂಗ್ರೆಸ್‌ಗೆ ಕೇವಲ 50 ಲಕ್ಷ ಹಣ ನೀಡಿ ಎಜೆಎಲ್ ಕಾಂಗ್ರೆಸ್‌ಗೆ ನೀಡಬೇಕಿದ್ದ 90 ಕೋಟಿ ರೂ.ನಷ್ಟು ಹಣ ಹಿಂಪಡೆಯಬೇಕಾದ ಹಕ್ಕನ್ನು ತನ್ನದಾಗಿಸಿಕೊಂಡಿತ್ತು.

ಆ ಮೂಲಕ ಸುಮಾರು 2,000 ಕೋಟಿ ರೂ.ಗಿಂತಗೂ ಅಧಿಕ ಮಾರುಕಟ್ಟೆ ಮೌಲ್ಯದ ಆಸ್ತಿಯನ್ನು ಯಂಗ್ ಇಂಡಿಯನ್ ಸಂಸ್ಥೆಯು ತನ್ನ ವಶಕ್ಕೆ ಪಡೆಯಲು ಅವ್ಯವಹಾರ ನಡೆಸಿದೆ ಎಂಬ ಆರೋಪ ಕೇಳಿಬಂದಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಷೇರುಗಳ ಮೌಲ್ಯ, ಎಜೆಎಲ್‌ನ ಸ್ಥಿರ ಆಸ್ತಿಗಳು ಮತ್ತು ಅವುಗಳಿಂದ ದೊರೆಯುವ ಬಾಡಿಗೆಯನ್ನು ಅಪರಾಧದ ಗಳಿಕೆ ಎಂದು ಇಡಿ ದೂರಿತ್ತು. ಆದ್ರೆ ಆಸ್ತಿಯನ್ನ ಬಳಸದಿದ್ದರೂ ಅಥವಾ ಅಂದಾಜಿಸದಿದ್ದರೂ ಹಣ ವರ್ಗಾವಣೆ ಆರೋಪ ಮಾಡಿರುವುದು ವಿಚಿತ್ರ ಮತ್ತು ಹಿಂದೆAದೂ ಕೇಳರಿಯದ ಪ್ರಕರಣ ಎಂದು ಗಾಂಧಿ ಕುಟುಂಬ ಪರ ವಕೀಲರು ವಾದ ಮಂಡಿಸಿದ್ದರು.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026