LIVE TV LocalCrimeStateNationalInternationalPoliticsAstrologyLifestyleJobsBusinessSportsHealthFeatureTravelingCinemaRecipes

ಯೂಟರ್ನ್ ಹೊಡೆದ ದೆಹಲಿ ಸರ್ಕಾರ: ಅವಧಿ ಮುಗಿದ ವಾಹನಗಳಿಗೆ ಹೇರಿದ್ದ ಇಂಧನ ನಿಷೇಧ ಆದೇಶ ವಾಪಸ್

ನವದೆಹಲಿ : ದೆಹಲಿಯಲ್ಲಿ ವಾಯು ಮಾಲಿನ್ಯವನ್ನು ಕಡಿಮೆ ಮಾಡುವ ಉದ್ದೇಶದಿಂದ ಹಳೆಯ ವಾಹನಗಳಿಗೆ ಇಂಧನ ನಿಷೇಧಿಸಿ ಹೊರಡಿಸಿದ ಆದೇಶವನ್ನು ಹಿಂಪಡೆಯಲಾಗಿದೆ.

ಹಳೆಯ ವಾಹನಗಳಿಗೆ ಇಂಧನ ನಿಷೇಧಿಸುವ ದೆಹಲಿ ಸರ್ಕಾರದ ನಿರ್ಧಾರಕ್ಕೆ ವ್ಯಾಪಕ ಟೀಕೆ ವ್ಯಕ್ತವಾಗಿತ್ತು. ಇದೀಗ ವ್ಯಾಪಕ ಟೀಕೆ ವ್ಯಕ್ತವಾದ ಬೆನ್ನಲ್ಲೇ ಯೋಜನೆಯಲ್ಲಿ ತಾಂತ್ರಿಕ ಸಮಸ್ಯೆ ಕಾರಣ ನೀಡಿ ಹಳೆಯ ವಾಹನಗಳ ಮೇಲಿನ ಇಂಧನ ನಿಷೇಧ ಆದೇಶವನ್ನು ವಾಪಸ್ ಪಡೆದಿದೆ. ಹಳೆಯ ವಾಹನಗಳ ಮೇಲಿನ ಇಂಧನ ನಿಷೇಧವನ್ನು ತೆಗೆದುಹಾಕುವಂತೆ ವಾಯು ಗುಣಮಟ್ಟ ನಿರ್ವಹಣಾ ಆಯೋಗಕ್ಕೆ ಪತ್ರ ಬರೆದಿದೆ.

ಈ ಪತ್ರದಲ್ಲಿ, ಸ್ವಯಂಚಾಲಿತ ನಂಬರ್ ಪ್ಲೇಟ್ ಗುರುತಿಸುವಿಕೆ ವ್ಯವಸ್ಥೆ ಕ್ಯಾಮೆರಾಗಳಲ್ಲಿ ತಾಂತ್ರಿಕ ದೋಷಗಳು ಕಂಡುಬಂದಿದೆ ಹಾಗೂ ಸ್ಪೀಕರ್ ಕಾರ್ಯನಿರ್ವಹಿಸದಿರುವಂತಹ ಮುಂತಾದ ಸಮಸ್ಯೆಗಳಿವೆ. ಇನ್ನೂ ನೆರೆಯ ರಾಜ್ಯಗಳ ಪೆಟ್ರೋಲ್ ಪಂಪ್‌ಗಳಲ್ಲಿ ಎಎನ್‌ಪಿಆರ್ ವ್ಯವಸ್ಥೆಯನ್ನು ಜಾರಿಗೆ ತಂದಿಲ್ಲ. ಹೀಗಾಗಿ ಜನರಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ. ಈ ಕಾರಣಗಳಿಂದ ಹಳೆಯ ವಾಹನಗಳ ಮೇಲಿನ ಇಂಧನ ನಿಷೇಧವನ್ನು ತೆಗೆದುಹಾಕುವಂತೆ ಪತ್ರದಲ್ಲಿ ಉಲ್ಲೇಖಿಸಲಾಗಿತ್ತು. ಸರ್ಕಾರದ ಪತ್ರದ ಬೆನ್ನಲ್ಲೇ ಆದೇಶವನ್ನು ಹಿಂಪಡೆಯಲಾಗಿದೆ ಎಂದು ತಿಳಿದುಬಂದಿದೆ.

ಸರ್ಕಾರದ ದೃಢ ನಿರ್ಧಾರದಿಂದಾಗಿ 10 ವರ್ಷಕ್ಕಿಂತ ಹಳೆಯದಾದ (ಡೀಸೆಲ್) ಮತ್ತು 15 ವರ್ಷ ಹಳೆಯದಾದ (ಪೆಟ್ರೋಲ್) ವಾಹನಗಳಿಗೆ ದೆಹಲಿಯ ಪೆಟ್ರೋಲ್ ಪಂಪ್‌ಗಳಲ್ಲಿ ಇಂಧನ ಹಾಕಿಸಬಹುದು. ಪೆಟ್ರೋಲ್ ಪಂಪ್‌ಗಳು ಇನ್ನು ಮುಂದೆ ಹಳೆಯ ವಾಹನಗಳನ್ನು ಅವುಗಳ ವರ್ಷದ ಆಧಾರದ ಮೇಲೆ ಸೇವೆಯನ್ನು ನಿರಾಕರಿಸುವಂತಿಲ್ಲ. ಪಂಪ್‌ಗಳಲ್ಲಿರುವ ಕ್ಯಾಮೆರಾಗಳು ದಾಖಲೆಗಾಗಿ ಕಾರ್ಯನಿರ್ವಹಿಸಿದರೂ, ಈ ಹಿಂದೆ ಘೋಷಿಸಲಾಗಿದ್ದ ಇಂಧನ ನಿಷೇಧವನ್ನು ಜಾರಿಗೊಳಿಸುವಂತಿಲ್ಲ ಎಂದು ಹೇಳಿದೆ.
Author
KhushiHost News CMS Pro ®
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಭದ್ರಾ ಜಲಾಶಯ ರೈತರಿಗೆ ಮುಖ್ಯ ಮಾಹಿತಿ ಬೇಸಿಗೆ ಹಂಗಾಮಿನ ಬೆಳೆಗಳಿಗೆ ನೀರು.!ನಾಳೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಜಾಮೀನು ಅರ್ಜಿ ವಿಚಾರಣೆ.!ಕನ್ನಡದ ಖ್ಯಾತ ಹಿರಿಯ ಕಲಾವಿದ ಇನ್ನಿಲ್ಲ.!ಕಗಂಟಾಗಿದ್ದ ಕೇರಳ ಮುಖ್ಯಂತ್ರಿ ಸ್ಥಾನ ಕುತೂಹಲಕ್ಕೆ ತೆರೆ.!ಕೈ ಮುಷ್ಟಿಯಷ್ಟು ಕಲ್ಲುಪ್ಪನ್ನು ತೆಗೆದುಕೊಂಡು ವಾರಕ್ಕೆ ಒಂದು ಬಾರಿಯಾದರೂ ಮನೆಯಲ್ಲಿ ಹೀಗೆ ಮಾಡಿದರೆ ಧನ ಪ್ರವಾಹ ಖಚಿತ.!ಪ್ರಥಮ ದರ್ಜೆ ಕಾಲೇಜುಗಳ ಬೋಧಕರ ವರ್ಗಾವಣೆ ಕೌನ್ಸೆಲಿಂಗ್ ತಾತ್ಕಾಲಿಕ ವೇಳಾಪಟ್ಟಿ.!ಎಲ್ಲಾ ಶಾಲಾ-ಕಾಲೇಜುಗಳಲ್ಲಿ ‘ಹಿಜಾಬ್’ ನಿಷೇಧ ರದ್ದು.!ಪ್ರಥಮ ವರ್ಷದ ಡಿಪಿಎಸ್‍ಇ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಗಂಜಿಗಟ್ಟೆ ಲಂಬಾಣಿಹಟ್ಟಿಯಲ್ಲಿ ಪ್ರತ್ಯೇಕ ಚುನಾವಣಾ ಬೂತ್ಗೆ ಆಗ್ರಹದಿನದ ಮಂಡಕ್ಕಿ ಒಗ್ಗರಣೆ ಮಿರ್ಚಿ 14-05-2026